ಹುಬ್ಬಳ್ಳಿಗೆ ಆಗಮಿಸಿದ್ದ ವೇಳೆ ಅಮಿತ್‌ ಶಾ ಆರೋಗ್ಯದಲ್ಲಿ ಅಸ್ವಸ್ಥತೆ, ಖಾಸಗಿ ಹೋಟೆಲ್‌ನಲ್ಲೇ ಚಿಕಿತ್ಸೆ, ವಿಶ್ರಾಂತಿ

ಹುಬ್ಬಳ್ಳಿ: ಕೆಎಲ್‌ಇ ವೈದ್ಯಕೀಯ ಕಾಲೇಜು ಉದ್ಘಾಟನಾ ಕಾರ್ಯಕ್ರಮಕ್ಕೆ ಗೃಹ ಸಚಿವ ಅಮಿತ್‌ ಶಾ ಆಗಮಿಸಿದ್ದ ವೇಳೆ ಆರೋಗ್ಯದಲ್ಲಿ ಅಸ್ವಸ್ಥತೆ ಕಂಡುಬಂದ ಹಿನ್ನಲೆ ಹೋಟೆಲ್‌ನಲ್ಲೇ ವೈದ್ಯರಿಂದ ಚಿಕಿತ್ಸೆ ನೀಡಲಾಗಿದ.

ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಅಮಿತ್ ಶಾ ಅವರೊಂದಿಗೆ ಆಗಮಿಸಿರುವ ವೈದ್ಯರ ತಂಡವೇ ಚಿಕಿತ್ಸೆ ನೀಡುತ್ತಿದೆ. ವೈದ್ಯ ಅರುಣ್ ಪ್ರತಾಪ್ ಅವರು ಗೃಹ ಸಚಿವರ ಆರೋಗ್ಯ ವಿಚಾರಣೆ ಹಾಗೂ ವೈದ್ಯಕೀಯ ಆರೈಕೆಯಲ್ಲಿರುವ ವೈದ್ಯರಲ್ಲಿ ಒಬ್ಬರು.

ಅಮಿತ್ ಶಾ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ಗೆ ಧಾರವಾಡ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಭುವನೇಶ ಪಾಟೀಲ್ ಭೇಟಿ ನೀಡಿದ್ದಾರೆ. ಐಜಿಪಿ ಲಾಬುರಾಮ್ ಕೂಡ ಹೋಟೆಲ್‌ಗೆ ಆಗಮಿಸಿ ಪರಿಸ್ಥಿತಿ ಮೇಲ್ವಿಚಾರಣೆ ನಡೆಸಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಬಳಿಕ ಅಮಿತ್ ಶಾ ಅವರು ಅಲ್ಲಿಂದ ನೇರವಾಗಿ ದೆಹಲಿಗೆ ತೆರಳುವ ಸಾಧ್ಯತೆ ಇದೆ.  

ಆರೋಗ್ಯದ ಸಮಸ್ಯೆಯಿಂದಾಗಿ ಕೇಂದ್ರ ಸಚಿವ ಅಮಿತ್ ಶಾ ಅವರು ಶನಿವಾರ ಇಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಹುಬ್ಬಳ್ಳಿಯ ಗಬ್ಬೂರ್‌ನಲ್ಲಿರುವ ಕೆಎಲ್‌ಇ ಜಗದ್ಗುರು ಗಂಗಾಧರ ಮಹಾಸ್ವಾಮಿಗಳು ಮೂರುಸಾವಿರಮಠ ವೈದ್ಯಕೀಯ ಕಾಲೇಜಿನ ಹೊಸ ಶೈಕ್ಷಣಿಕ ಕಟ್ಟಡ ಹಾಗೂ 1,200 ಹಾಸಿಗೆಗಳ ಸಾಮರ್ಥ್ಯದ ಕೆಎಲ್‌ಇ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಬೇಕಿತ್ತು.

ಸಭೆಯಲ್ಲಿ ಮಾತನಾಡಿದ ಕೆಎಲ್‌ಇ ಸೊಸೈಟಿಯ ಅಧ್ಯಕ್ಷ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಈ ಐತಿಹಾಸಿಕ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆರೋಗ್ಯದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ, ವೈದ್ಯರ ಸಲಹೆಯ ಮೇರೆಗೆ ಅವರು ಹೋಟೆಲ್‌ನಲ್ಲೇ ಉಳಿದುಕೊಂಡಿದ್ದಾರೆ. ಈ ಸಂದೇಶವನ್ನು ನಿಮಗೆ ತಲುಪಿಸುವಂತೆ ಅವರು ನನಗೆ ತಿಳಿಸಿದ್ದಾರೆ,” ಎಂದು ಹೇಳಿದರು.

More articles

Latest article

Most read