ಟಿ.ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ, ಮಾಜಿ ಸಂಸದ ಪ್ರತಾಪ್‌ಸಿಂಹ ವಿರುದ್ಧ ಎಫ್‌ಐಆರ್‌

ಮೈಸೂರು, ಸೆ. 21 : ಜಿಲ್ಲೆಯ ಟಿ. ನರಸೀಪುರದಲ್ಲಿ ನಡೆದ ಗಣೇಶ ಮೂರ್ತಿ ಶೋಭಾಯಾತ್ರೆ ನಡೆದ ಸಂದರ್ಭದಲ್ಲಿ  ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.

ಐಪಿಸಿ ಸೆಕ್ಷನ್ 132, 191, 194, 196 (1) (ಎ) (ಬಿ), 299, 353(1) (ಬಿ) (ಸಿ) ಹಾಗೂ ಸೆಕ್ಷನ್ 190ರ ಅಡಿಯಲ್ಲಿ ಟಿ. ನರಸೀಪುರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಗಣಪತಿ ಕೂರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕರೆದಿದ್ದ ಶಾಂತಿ ಸಭೆಯಲ್ಲಿ ಇನ್ಸ್‌ಪೆಕ್ಟರ್ ಧಮ್ಕಿಗೆ ಸವಾಲಾಗಿ ನಡೆದ ಶೋಭಾಯಾತ್ರೆ ವೇಳೆ ಪ್ರತಾಪ್ ಸಿಂಹ ಪ್ರಚೋದನಕಾರಿ ಭಾಷಣ ಮಾಡಿದ್ದರು

 ಹೀಗಾಗಿ ಸಾರ್ವಜನಿಕ ಸೇವಕರು ಮತ್ತು ಪೊಲೀಸರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪ ಹಾಗೂ ಗುಂಪುಗಳು ಹಾಗೂ ಜಾತಿಗಳ ನಡುವೆ ದ್ವೇಷ ಉತ್ತೇಜನೆ ಧಾರ್ಮಿಕ ನಂಬಿಕೆಗಳಿಗೆ ಅವಮಾನ ಮತ್ತು ಪ್ರಚೋದನಕಾರಿ ಭಾಷಣಗಳ ಆರೋಪ, ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದು 22ನೇ ಎಫ್‌ಐಆರ್‌:
ತಮ್ಮ ಮೇಲೆ ದಾಖಲಾಗಿರುವ ಎಫ್‌ಐಆರ್‌ ಕುರಿತು ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಹ, ‘ನನ್ನ ಮೇಲೆ 21 ಎಫ್‌ಐಆರ್‌  ಇದೆ. ಇದು 22 ನೇ ಎಫ್‌ಐಆರ್‌ ಎಂದು ಟಿ. ನರಸೀಪುರದಲ್ಲಿ ಪ್ರಚೋದಕಾರಿ ಭಾಷಣ ಮಾಡಿದ್ದರೆಂದು ಪೊಲೀಸರು ಎಫ್‌ಐಆರ್‌ ದಾಖಲಿಸಿರುವ ಬಗ್ಗೆ ಮಾಜಿ ಸಂಸದ ಪ್ರತಾಪ್‌ಸಿಂಹ ಪ್ರತಿಕ್ರಿಯಿಸಿದ್ದಾರೆ.

ಪ್ರಚೋದನೆ  ಮಾಡಿದ ಇನ್‌ಸ್ಪೆಕ್ಟರ್‌ ಮೇಲೆ ಎಫ್‌ಐಆರ್‌ ಹಾಕಿ ವರ್ಗಾವಣೆ ಮಾಡಿ, ರಜೆ ಮೇಲೆ ಕಳುಹಿಸಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ. ಅದನ್ನು ಬಿಟ್ಟು ನನ್ನ ಮೇಲೆ  ಹಾಕಿದ್ದಾರೆ. ಐಜಿಪಿ ವಿಷ್ಣುವರ್ಧನ್, ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಒಳ್ಳೆಯ ಅಧಿಕಾರಿಗಳು. ಅಂತಹವರ ನಡುವೆ  ಕೆಟ್ಟ ಇನ್‌ಸ್ಪೆಕ್ಟರ್‌ ಇದ್ದಾರೆ ಎಂದು ಟೀಕಿಸಿದರು.

ಹೇಳಿ ಕೇಳಿ ಪ್ರಿಯಾಂಕ್ ಖರ್ಗೆ ಗೃಹ ಸಚಿವರು. ಹೀಗಾಗಿ ಆ ಅಧಿಕಾರಿಗಳು ಕೂಡ ಅಸಹಾಯಕರಾಗಿದ್ದಾರೆ. ನಾನೇನು ಮೂಡಾ ಸೈಟು ಹೊಡೆದು, ಬುದ್ಧ ಸಿದ್ಧಾರ್ಥ ಟ್ರಸ್ಟ್ ಹೆಸರಿನಲ್ಲಿ ಭೂಮಿ ಅಕ್ರಮ ಮಾಡಿ ಎಫ್‌ಐಆರ್‌ ಹಾಕಿಸಿಕೊಂಡಿಲ್ಲ. ಕಾನೂನಿನ ಮೇಲೆ ಗೌರವವಿದೆ. ಕಾನೂನು ಮೂಲಕವೇ ಉತ್ತರ ಕೊಡುತ್ತೇನೆ  ಎಂದು ಟೀಕಿಸಿದರು.

More articles

Latest article

Most read