ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲಿದ್ದು, ಸುಪ್ರೀಂ ಕೋರ್ಟ್ ಆದೇಶದ ಬಳಿಕ ಇದೇ ಮೊದಲ ಬಾರಿಗೆ ಪವಿತ್ರಾಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾಗೌಡ ಅವರೊಂದಿಗೆ ಮತ್ತಿಬ್ಬರು ಆರೋಪಿಗಳ ಜಾಮೀನು ಅರ್ಜಿಯೂ ವಿಚಾರಣೆಗೆ ಬರಲಿದೆ.
ಇದೇ ವೇಳೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ ಅವರ ಬ್ಯಾರಕ್ ಬದಲಾವಣೆ ಮಾಡಲಾಗಿದೆ. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆಯ ಕೈದಿಗಳಿರುವ ಬ್ಯಾರಕ್‌ಗೆ ಅವರನ್ನು ಸ್ಥಳಾಂತರಿಸಲಾಗಿದೆ. 4–5 ಕೈದಿಗಳಿರುವ ಬ್ಯಾರಕ್‌ಗೆ ಪವಿತ್ರಾಗೌಡ ಅವರನ್ನು ಶಿಫ್ಟ್ ಮಾಡಲಾಗಿದೆ. ಕಡಿಮೆ ಸಂಖ್ಯೆಯ ಕೈದಿಗಳಿರುವ ಬ್ಯಾರಕ್‌ಗೆ ಸ್ಥಳಾಂತರಿಸುವಂತೆ ಪವಿತ್ರಾಗೌಡ ಕೋರಿದ್ದರು.

