ಸೌಜನ್ಯ ಪ್ರಕರಣ ಮರುತನಿಖೆ : ಆದೇಶ ಪ್ರತಿ ಬಂದ ಕೂಡಲೇ ಎಸ್‌ಐಟಿ ರಚನೆ – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಆದೇಶದ ಪ್ರತಿ ಕೈ ಸೇರಿದ ಕೂಡಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ವಿಶೇಷ ತನಿಖಾ ತಂಡ (SIT) ರಚಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಸುಪ್ರೀಂಕೋರ್ಟ್ ಆದೇಶ ಇನ್ನೂ ನಮ್ಮ ಕೈ ಸೇರಿಲ್ಲ. ಆದೇಶದ ಪ್ರತಿ ಬಂದ ಕೂಡಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ. ನಂತರ ಅಧಿಕಾರಿಗಳ ಜೊತೆ ಚರ್ಚಿಸಿ ಎಸ್‌ಐಟಿ ರಚನೆ ಮಾಡಲಾಗುವುದು. ಇದು ಬಹಳ ಸೆನ್ಸಿಟಿವ್ ವಿಷಯವಾಗಿದ್ದು, ಇಂದು ಸಂಜೆ ವೇಳೆಗೆ ಆದೇಶದ ಪ್ರತಿ ಬರುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

2012ರಲ್ಲಿ ನಡೆದ ಸೌಜನ್ಯ ಪ್ರಕರಣದ ತನಿಖೆಯನ್ನು ಈ ಹಿಂದೆ ಸಿಐಡಿ ಹಾಗೂ ಸಿಬಿಐ ನಡೆಸಿದ್ದವು. ಪ್ರಕರಣದಲ್ಲಿ ಬಂಧಿತರಾಗಿದ್ದ ಸಂತೋಷ್ ರಾವ್ ಅವರನ್ನು 2023ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿತ್ತು

ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಅವರು ಪ್ರಕರಣದ ಮರುತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಸೋಮವಾರ ಮಹತ್ವದ ಆದೇಶ ನೀಡಿದ್ದು, ಹೊಸ ಎಸ್‌ಐಟಿ ಮೂಲಕ ಪ್ರಕರಣವನ್ನು ಮರುತನಿಖೆ ನಡೆಸುವಂತೆ ಸೂಚಿಸಿದೆ. ತನಿಖೆಯ ಪ್ರಗತಿ ಕುರಿತು ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆಯೂ ನ್ಯಾಯಾಲಯ ನಿರ್ದೇಶಿಸಿದೆ.

ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ಎಸ್‌ಐಟಿಯಲ್ಲಿ ಸೇರಿಸಬಾರದು ಎಂಬ ನಿರ್ದೇಶನವನ್ನೂ ಸುಪ್ರೀಂಕೋರ್ಟ್ ನೀಡಿದೆ ಎಂದು ವರದಿಯಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಯಾವ ಅಧಿಕಾರಿಗಳ ನೇತೃತ್ವದಲ್ಲಿ ಹೊಸ ತಂಡ ರಚಿಸಲಿದೆ ಎಂಬುದು ಇದೀಗ ಪ್ರಮುಖ ಪ್ರಶ್ನೆಯಾಗಿದೆ.

ಆದೇಶದ ಪ್ರತಿ ರಾಜ್ಯ ಸರ್ಕಾರಕ್ಕೆ ಅಧಿಕೃತವಾಗಿ ತಲುಪಿದ ಬಳಿಕ ಎಸ್‌ಐಟಿ ರಚನೆ ಹಾಗೂ ತನಿಖೆಯ ಸ್ವರೂಪದ ಕುರಿತು ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.

More articles

Latest article

Most read