10  ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಸರ್ಕಾರ 10 ಮಂದಿ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಯೋಜನೆ ಕಾರ್ಯಕ್ರಮ ನಿರ್ವಹಣೆ ಹಾಗೂ ಸಾಂಖ್ಯಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿದ್ದ ಡಾ.ತ್ರಿಲೋಕ್‌ ಚಂದ್ರ ಕೆ.ವಿ. ಅವರನ್ನು ಕೃಷಿ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾಗಿದ್ದ ಡಾ. ರಾಕೇಶ್‌ ಕುಮಾರ್‌ ಕೆ. ಅವರನ್ನು ಉಪ ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಅಲ್ಲದೆ ಇವರಿಗೆ ಭೂ ಮಾಪನ ಹಾಗೂ ಭೂ ದಾಖಲೆಗಳ ಆಯುಕ್ತ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಪಂಚಾಯತ್‌ ರಾಜ್‌ ಇಲಾಖೆಯ ಆಯುಕ್ತರಾಗಿದ್ದ ಡಾ. ಅರುಂಧತಿ ಚಂದ್ರಶೇಖರ್‌ ಅವರನ್ನು ಖಜಾನೆ  ಇಲಾಖೆಯ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ನಿರ್ದೇಶಕರಾಗಿದ್ದ ಪಾಟೀಲ್‌ ಯಲ್ಲಾಗೌಡ ಶಿವನಗೌಡ ಅವರನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.  ಡಾ. ಅರುಂಧತಿ ವರ್ಗಾವಣೆಯಿಂದ ತೆರವಾದ ಪಂಚಾಯತ್‌ ರಾಜ್‌ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಕಾರ್ಯನಿವಾಹಕ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಹೆಸ್ಕಾಂ ಎಂಡಿ ಹುದ್ದೆಯಲ್ಲಿದ್ದ ವೈಶಾಲಿ ಎಂ.ಎಲ್‌. ಅವರನ್ನು ಎಂಎಸ್‌ಐಎಲ್‌ ಎಂಡಿ ಹುದ್ದೆಗೆ ವರ್ಗಾಯಿಸಲಾಗಿದೆ.

ಜೆಸ್ಕಾಂ ಎಂಡಿ ಹುದ್ದೆಯಲ್ಲಿದ್ದ ಶಶಿಧರ್‌ ಕುರೆರಾ ಅವರನ್ನು ಹಟ್ಟಿ ಚಿನ್ನದ ಗಣಿ ಕಂಪನಿ ಎಂಡಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಕೊಡಗು ಜಿಲ್ಲಾಪಂಚಾಯತ್‌ ಸಿಇಒ ಹುದ್ದೆಯಲ್ಲಿದ್ದ ಆನಂದ್‌ ಪ್ರಕಾಶ್‌ ಮೀನಾ ಅವರನ್ನು ವಿಜಯಪುರ ಜಿಲ್ಲಾ ಪಂಚಾಯತ್‌ ಸಿಇಒ ಹುದ್ದೆಗೆ ವರ್ಗಾಯಿಸಲಾಗಿದೆ.

ವಿಜಯಪುರ ಜಿಲ್ಲಾ ಪಂಚಾಯತ್‌ ಸಿಇಒ ಹುದ್ದೆಯಲ್ಲಿದ್ದ ರಿಶಿ ಆನಂದ್‌ ಅವರನ್ನು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಹುದ್ದೆಯಲ್ಲಿದ್ದ ಹೇಮಂತ್‌ ಎನ್‌. ಅವರನ್ನು ಹೆಸ್ಕಾಂ ಎಂಡಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

 ಕೊಳ್ಳೆಗಾಲ ಉಪ ವಿಭಾಗದ ಎಸಿ ಹುದ್ದೆಯಲ್ಲಿದ್ದ ದಿನೇಶ್‌ ಕುಮಾರ್‌ ಮೀನಾ ಅವರನ್ನು ಕೊಡಗು ಜಿಲ್ಲಾ ಪಂಚಾಯತ್‌ ಸಿಇಒ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

More articles

Latest article

Most read