ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 4 ಸಾವಿರ ಕ್ಯೂಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ ನಿತ್ಯ 4 ಸಾವಿರ ಕ್ಯೂಸೆಕ್​​ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರ ಸಂಬಂಧ ದೆಹಲಿಯ ಕಚೇರಿಯಲ್ಲಿ ವಿನೀತ್ ಗುಪ್ತಾ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಮತ್ತೊಂದೆಡೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶ ಪಾಲಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ. ಅಲ್ಲದೇ, ವಿಚಾರಣೆಯನ್ನು ಅ.12ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ನ್ಯಾಯಮೂರ್ತಿ ವಿಜಯ್ ಬಿಷ್ಣೋಯ್ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಮಳೆ ಕೊರತೆಯಿಂದ ಜಲಾಶಯಗಳಲ್ಲಿ ನೀರಿಲ್ಲ. ಬೇಸಿಗೆಯಲ್ಲಿ ನೀರಿನ ಕೊರತೆಯಾಗಲಿದೆ. ಕಳೆದ ವರ್ಷ ಈ ಸಮಯದಲ್ಲಿ 81 ಟಿಎಂಸಿ ನೀರಿತ್ತು. ಈ ವರ್ಷ ನೀರಿನ ಒಳ ಹರಿವಿನಲ್ಲಿ ಭಾರಿ ಕೊರತೆಯಾಗಿದೆ. ನಾವು CWMA ಆದೇಶಗಳನ್ನು ವಿರೋಧಿಸುತ್ತೇವೆ ಎಂದು ಕರ್ನಾಟಕ ವಾದಿಸಿತು.

ಇದೇ ವೇಳೆ ತಮಿಳುನಾಡು ವಾದ ಮಂಡಿಸಿ, 4.5 ಲಕ್ಷ ಎಕರೆಯಲ್ಲಿ ಬೆಳೆದ ಬೆಳೆ ಹಾನಿಯಾಗಲಿದೆ. ತಮಿಳುನಾಡಿಗೆ ನೀರಿನ ಅಗತ್ಯವಿದೆ ಎಂದು ಹೇಳಿತು.

ಸಿಎಂ ಪ್ರತಿಕ್ರಿಯೆ
ಕಾವೇರಿ ಜಲಾಶಯಗಳಲ್ಲಿ ಒಳಹರಿವು ಕಡಿಮೆಯಾಗಿದೆ. ಹೀಗಾಗಿ ಸಿಡಬ್ಲ್ಯುಆರ್‌ಸಿ ಶಿಫಾರಸು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು. ನಮ್ಮ ಮೇಲೆ ಒತ್ತಡ ಇದೆ, ಆದರೆ ಮಳೆ ಬರುತ್ತಿಲ್ಲ. ಸಂಜೆ ಈ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

More articles

Latest article

Most read