ಅ.29ರಂದು ತೆರೆಯಲಿರುವ ಹಾಸನಾಂಬೆ ದೇಗುಲದ ಗರ್ಭಗುಡಿ: ಅ.30ರಿಂದ ನ.10ರವರೆಗೆ ಭಕ್ತರಿಗೆ ದರ್ಶನ

ಹಾಸನ ಸೆ.24: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. 2026ನೇ ಸಾಲಿನ ಹಾಸನಾಂಬ ಜಾತ್ರಾ ಮಹೋತ್ಸವ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 10ರವರೆಗೆ ಭಕ್ತರಿಗೆ ಹಾಸನಾಂಬ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ಅಕ್ಟೋಬರ್ 29ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಿದೆ. ಆದರೆ ಅಂದು ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಧಾರ್ಮಿಕ ವಿಧಿವಿಧಾನಗಳು ಪೂರ್ಣಗೊಂಡ ಬಳಿಕ ನಿಗದಿತ ಅವಧಿಯಲ್ಲಿ ಸಾರ್ವಜನಿಕರಿಗೆ ದೇವಿಯ ದರ್ಶನ ಆರಂಭವಾಗಲಿದೆ. ನವೆಂಬರ್ 11ರಂದು ಶಾಸ್ತ್ರೋಕ್ತ ವಿಧಿವಿಧಾನಗಳೊಂದಿಗೆ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ.

ಲಕ್ಷಾಂತರ ಭಕ್ತರ ನಿರೀಕ್ಷೆ

ಹಾಸನಾಂಬ ದೇವಾಲಯದ ವಿಶೇಷತೆಯೇ ವರ್ಷಕ್ಕೊಮ್ಮೆ ಮಾತ್ರ ಗರ್ಭಗುಡಿ ಬಾಗಿಲು ತೆರೆಯುವುದು. ಪಂಚಾಂಗದ ಆಧಾರದ ಮೇಲೆ ಪ್ರತಿವರ್ಷ ದರ್ಶನದ ಅವಧಿ ಬದಲಾಗುತ್ತದೆ. ಹಾಸನ ಜಿಲ್ಲಾಡಳಿತದ ಅಧಿಕೃತ ಮಾಹಿತಿಯ ಪ್ರಕಾರ, ಧಾರ್ಮಿಕ ವಿಧಿವಿಧಾನಗಳ ನಂತರ ದೇವಾಲಯದ ಬಾಗಿಲು ತೆರೆಯಲಾಗುತ್ತದೆ ಮತ್ತು ನಿಗದಿತ ದಿನಗಳಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.

ಹಾಸನಾಂಬ ದೇವಿಯ ದರ್ಶನಕ್ಕಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಭಕ್ತರು ಹಾಸನಕ್ಕೆ ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಈಗಾಗಲೇ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಸಿದ್ಧತೆ ಆರಂಭಿಸಿದೆ.

ಭಕ್ತರ ಸುರಕ್ಷಿತ ಹಾಗೂ ಸುಗಮ ದರ್ಶನಕ್ಕೆ ಒತ್ತು

ಭಕ್ತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ದರ್ಶನ ವ್ಯವಸ್ಥೆ ರೂಪಿಸುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಳೆದ ವರ್ಷದ ಜಾತ್ರೆಯಲ್ಲಿ ಕಂಡುಬಂದ ಸಣ್ಣಪುಟ್ಟ ಲೋಪಗಳನ್ನು ಗುರುತಿಸಿ, ಈ ಬಾರಿ ಅವು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ದರ್ಶನದ ಸಂದರ್ಭದಲ್ಲಿ ಭಾರೀ ಜನದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಸರತಿ ಸಾಲು, ಜನಸಂದಣಿ ನಿಯಂತ್ರಣ, ವಾಹನ ನಿಲುಗಡೆ, ಸಂಚಾರ ವ್ಯವಸ್ಥೆ, ಭದ್ರತೆ, ಕುಡಿಯುವ ನೀರು, ಸ್ವಚ್ಛತೆ ಹಾಗೂ ವೈದ್ಯಕೀಯ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಹಲವು ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾದರೆ ಭಕ್ತರಿಗೆ ಸ್ಥಳದಲ್ಲಿಯೇ ಅಗತ್ಯ ಸೌಲಭ್ಯ ಕಲ್ಪಿಸುವ ಬಗ್ಗೆಯೂ ಜಿಲ್ಲಾಡಳಿತ ಚಿಂತನೆ ನಡೆಸಿದೆ. ಸರತಿ ಸಾಲಿನಲ್ಲಿ ದರ್ಶನಕ್ಕೆ ನಾಲ್ಕರಿಂದ ಐದು ಗಂಟೆಗಳವರೆಗೆ ಸಮಯ ತೆಗೆದುಕೊಳ್ಳುವ ಸಂದರ್ಭಗಳಲ್ಲಿ ಮಧ್ಯಾಹ್ನ ಮಜ್ಜಿಗೆ ಹಾಗೂ ರಾತ್ರಿ ಬಿಸಿ ಬಾದಾಮಿ ಹಾಲು ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ವೆಬ್‌ಸೈಟ್ ಮೂಲಕ ಜಾತ್ರೆಯ ಮಾಹಿತಿ

ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 26ರಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಪೋಸ್ಟರ್ ಬಿಡುಗಡೆ ಮಾಡುವುದರ ಜೊತೆಗೆ ಅಧಿಕೃತ ವೆಬ್‌ಸೈಟ್‌ಗೆ ಚಾಲನೆ ನೀಡಲಿದ್ದಾರೆ.

More articles

Latest article

Most read