ಮುಖ್ಯ ಚುನಾವಣಾ ಆಯುಕ್ತರ ಬಂಧಿಸಿ, ಪ್ರಜಾಪ್ರಭುತ್ವ ಉಳಿಸಲು ಆಗ್ರಹಿಸಿ ಪ್ರತಿಭಟನೆ

ಮಂಡ್ಯ, ಸೆ.24 : ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಗ್ಯಾನೆಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಂಡ್ಯದಲ್ಲಿ ಪ್ರತಿಭಟನೆ ಮಾಡಲಾಯಿತು.

ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ವ್ಯಕ್ತವಾಗಿರುವ ಆಕ್ಷೇಪಗಳ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಮಂಡ್ಯದಲ್ಲಿ ದಲಿತ ಸಂಘಟನೆಗಳು ಹಾಗೂ ಸಮಾನ ಮನಸ್ಕರ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಜಯಚಾಮರಾಜೆಂದ್ರ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು, ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಪ್ರಜಾಪ್ರಭುತ್ವದ ವಿಶ್ವಾಸಾರ್ಹತೆಯನ್ನು ಕಾಪಾಡುವಂತೆ ಒತ್ತಾಯಿಸಿದರು.

ಚುನಾವಣಾ ಅಕ್ರಮಕೋರ ಆಯುಕ್ತ ಗ್ಯಾನೆಶ್ ಕುಮಾರ್ ಹಾಗೂ ಚುನಾವಣಾ ಆಯೋಗದ ವಿರುದ್ದ ಪ್ರತಿಭಟನಾಕಾರರು ವಿವಿಧ ಘೋಷಣೆಗಳನ್ನು ಒಳಗೊಂಡ ಫಲಕಗಳನ್ನು ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಮಾನ ಮನಸ್ಕರ ವೇದಿಕೆ ಸಂಚಾಲಕ ಲಕ್ಷ್ಮಣ್ ಚೀರನಹಳ್ಳಿ, “ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಸಂವಿಧಾನಾತ್ಮಕ ಹಕ್ಕು. ಮತದಾರರ ಪಟ್ಟಿಯ ಪರಿಷ್ಕರಣೆ ಸೇರಿದಂತೆ ಚುನಾವಣಾ ಪ್ರಕ್ರಿಯೆಯ ಕುರಿತು ಸಾರ್ವಜನಿಕರಲ್ಲಿ ಮೂಡಿರುವ ಅನುಮಾನಗಳು ಮತ್ತು ಆಕ್ಷೇಪಗಳಿಗೆ ಚುನಾವಣಾ ಆಯೋಗ ಸ್ಪಷ್ಟತೆ ನೀಡಬೇಕು. ಎಸ್ ಐಆರ್ ಹೆಸರಿನಲ್ಲಿ ಸುಮಾರು ಹದಿನಯದು ಕೋಟಿ ಮತದಾರರನ್ನು ಹೊರಗುಳಿಯುವಂತೆ ಮಾಡಿರುವ ಆಯೋಗದ ಹಗರಣದ ವಿರುದ್ದ ಕಿಡಿಕಾರಿದರು.

ಪ್ರಜಾತಂತ್ರದಲ್ಲಿ ಚುನಾವಣಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಆಯುಕ್ತ ಗ್ಯಾನೆಶ್ ರವರು ಬಿಜೆಪಿ ಪಕ್ಷದ ಪುಡಾರಿಯಂತಾಗಿ, ಚುನಾವಣಾ ಆಯೊಗವನ್ನು ಸಂಗಪರಿವಾರದ ಕಚೇರಿಯಂತೆ ಮಾಡಿ ಅಕ್ರಮ ಎಸಗಿರುವ ಈತನ ಮೇಲೆ ಯುಎಪಿಎ ಕಾಯ್ದೆಯಡಿ ದೇಶದ್ರೋಹ ಪ್ರಕರಣ ದಾಖಲಿಸಬೆಕೆಂದು ಒತ್ತಾಯಿಸಿದರು.

ಸಂವಿಧಾನ ಸೇನೆಯ ನರಸಿಂಹಮೂರ್ತಿಯವರು ಪ್ರತಿಭಟನೆಯನ್ನುದ್ದೆಶಿಸಿ ಮಾತನಾಡಿದ ಅವರು “ಮತ ಹಕ್ಕು ರಕ್ಷಿಸಿ–ಪ್ರಜಾಪ್ರಭುತ್ವ ಉಳಿಸಿ ಎಂಬ ಆಶಯದೊಂದಿಗೆ ಈ ಹೋರಾಟ ಮುಂದುವರಿಯಲಿದೆ ಎಂದರು. ಚುನಾವಣಾ ವ್ಯವಸ್ಥೆಯ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸುವ ಜವಾಬ್ದಾರಿ ಚುನಾವಣಾ ಆಯೋಗದ್ದಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಅವರು ಒತ್ತಾಯಿಸಿದರು.

ಕರಾದಸಂಸದ ಸೊಮನಹಳ್ಳಿ ಅಂದಾನಿಯವರುವ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮುಖ್ಯ ಚುನಾವಣಾ ಆಯುಕ್ತರ ವಿರುದ್ಧದ ರಾಜಕೀಯ ಟೀಕೆಗಳು ರಾಷ್ಟ್ರಮಟ್ಟದಲ್ಲಿಯೂ ಚರ್ಚೆಯಲ್ಲಿವೆ ಈತನ ಮೇಲೆ ಕ್ರಮ ಜರುಗಿಸಿ ಪ್ರಜಾಪ್ರಭುತ್ವ ಉಳಿಸಿ ಎಂದು ಕರೆ ನೀಡಿದರು.

ಪ್ರತಿಭಟನೆಯಲ್ಲಿ ರಸಂಸದ ನಾಯಕ ಎಂ ವಿ ಕೃಷ್ಣ ಸಿಪಿಎಂ ಪಕ್ಷದ ಕೃಷ್ಣೆಗೌಡ ಪರಿವರ್ತನ ಸಂಸ್ಥೆಯ ಟಿಡಿ ನಾಗರಾಜ್ ಸಿ ಐ ಟಿ ಯು ನ ಕುಮಾರಿ ಅಹಿಂಧ ಚಳುವಳಿಯ ಶಿವರುದ್ರಪ್ಪ ಕರವೇ ಜಯರಾಮ್ ರೈತ ಸಂಘದ ಶಿವಳ್ಳಿ ಚಂದ್ರಶೇಖರ್ ಮುಂತಾದವರು ಭಾಗವಹಿಸಿದ್ದರು

More articles

Latest article

Most read