ಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ನಿಗಮಗಳಿಗೆ 8 ಸಾವಿರ ಕೋಟಿ ನಷ್ಟ ; ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಿಎಂಗೆ ಅನುಮತಿ ಕೋರಿಕೆ: ಬೈರತಿ

ಬೆಂಗಳೂರು, ಸೆ.25:  ಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ನಿಗಮಗಳಿಗೆ 8 ಸಾವಿರ ಕೋಟಿ ನಷ್ಟವಾಗಿದ್ದು, ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆಗೆ ಮುಖ್ಯಮಂತ್ರಿಗಳ ಅನುಮತಿ ಕೋರಲಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್‌ ಹೇಲಿದರು.

ವಿಧಾನಪರಿಷತ್ತಿನಲ್ಲಿ ನಿಗಮಗಳ ಆರ್ಥಿಕ ಪರಿಸ್ಥಿತಿ ಬಿಚ್ಚಿಟ್ಟ ಅವರು, ಕೇಂದ್ರ ಸರ್ಕಾರ ನಾಲ್ಕು ಬಾರಿ ಡೀಸೆಲ್ ಮತ್ತು ಇತರೆ ತೈಲೋತ್ಪನ್ನಗಳ ಬೆಲೆ ಹೆಚ್ಚಳ ಮಾಡಿದ್ದರಿಂದಾಗಿ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ವಾರ್ಷಿಕ 8 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಡೀಸೆಲ್ ಬೆಲೆ ಹೆಚ್ಚಳವಾಗಿದ್ದರೂ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಿಲ್ಲ. ಇದರಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ವಾಯವ್ಯ ಸಾರಿಗೆ ಸಂಸ್ಥೆಗಳಿಗೆ ವಾರ್ಷಿಕ 8 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದರು.

ಇದರ ಪರಿಣಾಮ ನಾಲ್ಕೂ ನಿಗಮಗಳ ಸಿಬ್ಬಂದಿಗೆ ಸಂಬಳ ಕೊಡಲು ಹಣವಿಲ್ಲದಂತಹ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ನಾಲ್ಕು ನಿಗಮಗಳ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡೋಣವೆಂದರೆ ವಿರೋಧ ಪಕ್ಷಗಳ ಭಯ ಕಾಡುತ್ತಿದೆ ಎಂದರು.

ಒಂದು ವೇಳೆ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಿದರೆ ಮೊದಲು ವಿರೋಧ ಬರುವುದು ವಿರೋಧ ಪಕ್ಷಗಳಿಂದಲೇ. ಆದಾಗ್ಯೂ, ಸಂಸ್ಥೆಗಳ ಉಳಿವು ಮತ್ತು ಪ್ರಯಾಣಿಕರಿಗೆ ಇನ್ನಷ್ಟು ಸೇವೆ ಕಲ್ಪಿಸುವ ದೃಷ್ಟಿಯಿಂದ ಪ್ರಯಾಣ ದರಗಳನ್ನು ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಮುಖ್ಯಮಂತ್ರಿಗಳ ಮನವೊಲಿಕೆ ಮಾಡುತ್ತಿದ್ದೇವೆ ಎಂದು ಸಾರಿಗೆ ಸಚಿವರು ತಿಳಿಸಿದರು.

More articles

Latest article

Most read