ಸುಪ್ರೀಂ ಕೋರ್ಟ್‌ನಲ್ಲಿ ಹಿಂದಿ ಅಧಿಕೃತ ಭಾಷೆಯಾಗಿ ಬಳಕೆಗೆ ಕೋರಿದ್ದ ಅರ್ಜಿ ವಜಾ

ನವದೆಹಲಿ, ಸೆ.25: ಸುಪ್ರೀಂ ಕೋರ್ಟ್‌ನ ಅಧಿಕೃತ ನ್ಯಾಯಾಲಯದ ಭಾಷೆಯಾಗಿ ಹಿಂದಿಯನ್ನು ಬಳಸುವಂತೆ ಕ್ರಮ ಕೈಗೊಳ್ಳುವ ಸಲುವಾಗಿ ಆಯೋಗ ರಚಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಹಾಗೂ ವಿ. ಮೊಹನಾ ಅವರನ್ನೊಳಗೊಂಡ ಪೀಠ ಅರ್ಜಿಯ ವಿಚಾರಣೆ ನಡೆಸಿತು.

ಅರ್ಜಿದಾರ ಬ್ರಹ್ಮೇಶ್ವರ್ ನಾಥ್ ಮಿಶ್ರಾ ಪರ ವಕೀಲರು, ಸುಪ್ರೀಂ ಕೋರ್ಟ್‌ನಲ್ಲಿ ಹಿಂದಿಯನ್ನು ಅಧಿಕೃತ ಭಾಷೆಯಾಗಿ ಬಳಸುವ ಕುರಿತು ಶಿಫಾರಸು ಮಾಡಲು ಕೇಂದ್ರ ಸರ್ಕಾರ ಆಯೋಗವೊಂದನ್ನು ರಚಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ಭಾಷೆಗೆ ಸಂಬಂಧಿಸಿದ ಸುಧಾರಣೆಗಳನ್ನು ನ್ಯಾಯಾಲಯ ಈಗಾಗಲೇ ಹಂತ ಹಂತವಾಗಿ ಕೈಗೊಳ್ಳುತ್ತಿದೆ ಎಂದು ತಿಳಿಸಿದರು. ಸುಪ್ರೀಂ ಕೋರ್ಟ್‌ನ ತೀರ್ಪುಗಳ ಸಂಕ್ಷಿಪ್ತ ವಿವರಣೆಯನ್ನು ಹಿಂದಿಯಲ್ಲಿ ನೀಡಲಾಗುತ್ತಿದ್ದು, ಮುಂದಿನ ಹಂತದಲ್ಲಿ ಇತರ ಪ್ರಾದೇಶಿಕ ಭಾಷೆಗಳಿಗೂ ಇದನ್ನು ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.

“ಇಂತಹ ಬದಲಾವಣೆಗಳು ನ್ಯಾಯಾಲಯದ ಆದೇಶದ ಮೂಲಕ ಆಗುವುದಿಲ್ಲ. ಅವು ಸುಧಾರಣೆಯ ಭಾಗವಾಗಿ ನಿಧಾನವಾಗಿ, ಹಂತ ಹಂತವಾಗಿ ನಡೆಯಬೇಕು” ಎಂದು ಸಿಜೆಐ ಸೂರ್ಯಕಾಂತ್ ಹೇಳಿದ್ದಾರೆ.

ಆಯೋಗ ರಚನೆಗೆ ಕನಿಷ್ಠ ನಿರ್ದೇಶನ ನೀಡುವಂತೆ ಅರ್ಜಿದಾರರ ಪರ ವಕೀಲರು ಮತ್ತೆ ಮನವಿ ಮಾಡಿದಾಗ, ನ್ಯಾಯಮೂರ್ತಿ ವಿ. ಮೊಹನಾ ಅವರು ಈ ಬೇಡಿಕೆ ಸಂವಿಧಾನ ತಿದ್ದುಪಡಿಯ ಪ್ರಶ್ನೆಯನ್ನು ಒಳಗೊಂಡಿದೆ ಎಂದು ಅಭಿಪ್ರಾಯಪಟ್ಟರು.

ಪ್ರಸ್ತುತ ಸಂವಿಧಾನದ ವಿಧಿ 348(1)(a) ಪ್ರಕಾರ, ಸಂಸತ್ತು ಕಾನೂನಿನ ಮೂಲಕ ಬೇರೆ ವ್ಯವಸ್ಥೆ ಮಾಡದ ಹೊರತು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ಗಳ ನ್ಯಾಯಾಂಗ ಕಲಾಪಗಳು ಇಂಗ್ಲಿಷ್‌ನಲ್ಲಿ ನಡೆಯಬೇಕು. ಹೈಕೋರ್ಟ್‌ಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಅವಕಾಶಗಳಿದ್ದರೂ, ಸುಪ್ರೀಂ ಕೋರ್ಟ್‌ಗೆ ಅದೇ ರೀತಿಯ ಭಾಷಾ ವಿನಾಯಿತಿ ಇಲ್ಲ ಎಂದು ಪೀಠ ಹೇಳಿತು.

More articles

Latest article

Most read