ದೇಶದಲ್ಲಿ ಹುಟ್ಟಿದ ನಾಗರೀಕರ ಮತದಾನ ಹಕ್ಕು ಕದಿಯಲು ಸಾಧ್ಯವಿಲ್ಲ, ರಾಜ್ಯದಲ್ಲೂ ಅರ್ಹ ಮತದಾರರನ್ನು ತೆಗೆದುಹಾಕಲಾಗುತ್ತಿದೆ : ಬಿ.ಕೆ.ಹರಿಪ್ರಸಾದ್‌

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕೆಪಿಸಿಸಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ

ಬೆಂಗಳೂರು : ದೇಶದಲ್ಲಿ ಹುಟ್ಟಿರುವ ನಾಗರೀಕರ ಹಕ್ಕನ್ನು ಕಸಿಯಲು ಯಾರಿಗೂ ಹಕ್ಕಿಲ್ಲ. ರಾಜ್ಯದಲ್ಲಿ ಅರ್ಹ ಮತದಾರರ ಹೆಸರನ್ನು ಮತದಾರರಪಟ್ಟಿಯಿಂದ ತೆಗೆಯಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯಿಂದ ಅರ್ಹ ಮತದಾರರನ್ನ ಕೈಬಿಡಲಾಗುತ್ತಿದೆ ಎಂದು ಆರೋಪಿಸಿದರು.

ರಾಷ್ಟ್ರದ ಸಂವಿಧಾನ ಪದವಿಯಲ್ಲಿರುವ ಚುನಾವಣಾಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿರುವುದರ ವಿರುದ್ಧ ಈ ಹೋರಾಟಕ್ಕೆ ರಾಹುಲ್ ಗಾಂಧಿ ಅವರು ಕರೆ ನೀಡಿದ್ದಾರೆ. ನಾವು ಹೋರಾಟ ಮಾಡುತ್ತಿರುವುದು ಸಂವಿಧಾನ ರಕ್ಷಣೆಗೆ. ಇದು ನಮ್ಮ ಕರ್ತವ್ಯ. 2024ರಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಆರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ. ಬಿಹಾರದಲ್ಲಿ 64 ಲಕ್ಷ, ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತ ಕೈಬಿಟ್ಟಿದ್ದು, ಪ.ಬಂಗಾಳದಲ್ಲಿ 38 ಲಕ್ಷ ಮತದಾರರ ಹೆಸರನ್ನು ನೋಟೀಸ್ ಕೊಟ್ಟು ತಡೆ ಹಿಡಿಯಲಾಗಿದೆ. ಇವರ ಮತದಾನದ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲಾಗಿದೆ ಎಂದರು

ಈ ದೇಶದಲ್ಲಿ ಹುಟ್ಟಿರುವ ನಾಗರೀಕರ ಹಕ್ಕನ್ನು ಕಸಿಯಲು ಯಾರಿಗೂ ಹಕ್ಕಿಲ್ಲ. ಹರಿಯಾಣ, ಮಹಾರಾಷ್ಟ್ರ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ಅರ್ಹ ಮತದಾರರನ್ನು ಕೈಬಿಡಲಾಗಿದೆ. ನಮ್ಮ ರಾಜ್ಯದಲ್ಲಿ 1.07 ಕೋಟಿ ಮತದಾರರನ್ನು ಮತಪಟ್ಟಿಯಿಂದ ಕೈಬಿಡಲಾಗಿದ್ದು, ನಕಲಿ ಮತದಾರರ ನೋಂದಣಿ 70 ಲಕ್ಷ, ಇತರೆ 38 ಲಕ್ಷ ಎಂದು ವರ್ಗೀಕರಣ ಮಾಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಅರ್ಹ ಮತದಾರರ ಹೆಸರನ್ನು ಮತದಾರರಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಅವರು 2024ರಿಂದ ಈ ಮತಗಳ್ಳತನ ವಿಚಾರವಾಗಿ ಬಹಳ ಗಂಭೀರ ಆರೋಪ ಮಾಡುತ್ತಿದ್ದಾರೆ. ಇದೇ ಫ್ರೀಡಂ ಪಾರ್ಕ್ ನಲ್ಲಿ ಮಹದೇವಪುರ, ಆಳಂದ, ಮಹಾರಾಷ್ಟ್ರದಲ್ಲಿ ನಡೆದ ಮತಗಳ್ಳತನ ವಿರುದ್ಧ ಧ್ವನಿ ಎತ್ತಿದ್ದರು. ಚುನಾವಣಾ ಆಯುಕ್ತರು ಯಾವ ರೀತಿ ಅಕ್ರಮಗಳ ಮೂಲಕ ಬಿಜೆಪಿಗೆ ನೆರವಾಗುತ್ತಿದ್ದಾರೆ ಎಂದು ವಿವರಿಸಿದ್ದರು. ಯಾರೂ ಅದನ್ನು ಆರಂಭದಲ್ಲಿ ಪರಿಗಣಿಸಿರಲಿಲ್ಲ. ನಂತರ ಚುನಾವಣಾ ಆಯೋಗದ ಆಯುಕ್ತರು ರಾಹುಲ್ ಗಾಂಧಿ ಅವರು ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

ಪ್ರಜಾಪ್ರಭುತ್ವದ ಭದ್ರ ಬುನಾದಿ ಮತದಾರರ ಪಟ್ಟಿ. ಈ ದೇಶದ ನಾಗರಿಕರಿಗೆ ಮತ ಚಲಾಯಿಸುವ ಹಕ್ಕಿದೆ. ಐದು ವರ್ಷಕ್ಕೊಮ್ಮೆ ನಮಗೆ ಬೇಕಾದ ಸರ್ಕಾರ ಆರಿಸುವ ಶಕ್ತಿಯನ್ನು ಸಂವಿಧಾನ ನೀಡಿದೆ. ಇದನ್ನು ಬುಡಮೇಲು ಮಾಡುವ ಪ್ರಯತ್ನ ಬಿಜೆಪಿ ಮಾಡುತ್ತಿದೆ. ಹೊಸದಾಗಿ ಮತಪಟ್ಟಿ ಸೇರುವ ವಿಚಾರದಲ್ಲಿ ರಾಜೀವ್ ಗಾಂಧಿ ಅವರು ಮತದಾನದ ವಯೋಮಿತಿಯನ್ನು 21 ವರ್ಷಗಳಿಂದ 18 ವರ್ಷಕ್ಕೆ ಇಳಿಸುತ್ತಾರೆ. ಜೆನ್ ಜಿ ಮತದಾರರ ಹೆಸರು ಮತಪಟ್ಟಿಯಲ್ಲಿ ಸೇರಬೇಕು. ಈ ತಲೆಮಾರಿನವರು ಮೋದಿ ಸರ್ಕಾರದ ವಿರುದ್ಧ ನಿಂತಿದ್ದು, ಅವರ ಮತವನ್ನು ತೆಗೆದುಹಾಕಲು ಷಡ್ಯಂತ್ರ ನಡೆಯುತ್ತಿದೆ ಎಂದರು.

More articles

Latest article

Most read