ಎಲ್ಲ ಭಕ್ತರಿಗೂ ಹಾಸನಾಂಬೆಯ ಸುಗಮ ದರ್ಶನ ವ್ಯವಸ್ಥೆಗೆ ಕೆ. ಎಂ. ಶಿವಲಿಂಗೇಗೌಡ ಸೂಚನೆ

ಹಾಸನ: ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಹಾಸನಾಂಬೆ ದರ್ಶನ ಮತ್ತು ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸುಗಮ ದರ್ಶನದ ವ್ಯವಸ್ಥೆಯನ್ನು ಮಾಡಬೇಕು ಎಂದು ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ಹಾಸನ ನಗರದ ಹಿಮ್ಸ್ (HIMS) ಆಡಿಟೋರಿಯಂನಲ್ಲಿ ಆಯೋಜಿಸಲಾಗಿದ್ದ ಹಾಸನಾಂಬ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಶಿವಲಿಂಗೇಗೌಡರು ಜಾತ್ರಾ ಮಹೋತ್ಸವ ಅಚ್ಚುಕಟ್ಟಾಗಿ ನಡೆಯುವಂತಾಗಬೇಕು. ​ಜಾತ್ರೆಗೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಎಲ್ಲರಿಗೂ ಹಾಸನಾಂಬೆಯ ದರ್ಶನ ಲಭಿಸಬೇಕು,ಯಾರಿಗೂ ಯಾವುದೇ ರೀತಿಯ ತೊಂದರೆಯಾಗದಂತೆ ನಿಗಾವಹಿಸಬೇಕು ಎಂದರು.

ಎಲ್ಲ ಭಕ್ತರಿಗೆ ಸುಗಮ ದರ್ಶನ ವ್ಯವಸ್ಥೆ, ಸ್ವಚ್ಚತೆ , ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಬಿಗಿ ಪೊಲೀಸ್ ಭದ್ರತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹಾಸನಾಂಬ ದೇವಿ ದರ್ಶನ ವಿವರ:

ಅಕ್ಟೋಬರ್‌ 29ರಂದು ಮಧ್ಯಾಹ್ನ 12 ಗಂಟೆಗೆ ಹಾಸನಾಂಬ ದೇಗುಲದ ಬಾಗಿಲು ತೆರೆಯಲಿದೆ.

ಅಕ್ಟೋಬರ್.31ರಿಂದ ನವೆಂಬರ್. 10ರ ವರೆಗೆ ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ಸಾರ್ವಜನಿಕರಿಗೆ ದೇವಿಯ ದರ್ಶನದ ವ್ಯವಸ್ಥೆ ಮಾಡಲಾಗಿದೆ.

ನವೆಂಬರ್. 11ರಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲನ್ನು ಮುಚ್ಚಲಾಗುತ್ತದೆ.

More articles

Latest article

Most read