ಕೊಲ್ಕತ್ತಾ ಸೆ.28: RSS ಸಂಪರ್ಕ ಹೊಂದಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿರುವ ಸಂಘಟನೆಯೊಂದರ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೊಲ್ಕತ್ತಾದ ಸತ್ಯಜಿತ್ ರೇ ಫಿಲ್ಮ್ ಆ್ಯಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ (SRFTI) ಆವರಣದಲ್ಲಿ ವಿದ್ಯಾರ್ಥಿಗಳು ಮತ್ತು ಹೊರಗಿನವರ ನಡುವೆ ಘರ್ಷಣೆ ನಡೆದಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಸೆಪ್ಟೆಂಬರ್ 27ರಂದು SRFTIಯ ಮುಖ್ಯ ಥಿಯೇಟರ್‌ನಲ್ಲಿ ಅಖಿಲ ಭಾರತ ಗ್ರಾಹಕ್ ಪಂಚಾಯತ್ (ABGP) ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಸಂಸ್ಥೆಯ ಆಡಳಿತದಿಂದ ಅನುಮತಿ ಪಡೆದಿದ್ದಾಗಿ ABGP ಹೇಳಿದೆ. ಆದರೆ ಈ ಕಾರ್ಯಕ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ಮುಂಚಿತವಾಗಿ ಮಾಹಿತಿ ನೀಡಿರಲಿಲ್ಲ ಎಂದು ವಿದ್ಯಾರ್ಥಿ ಸಂಘ ಆರೋಪಿಸಿದೆ.
ಮಧ್ಯಾಹ್ನದ ವೇಳೆಗೆ ಕೆಲ ವಿದ್ಯಾರ್ಥಿಗಳು ಕಾರ್ಯಕ್ರಮದ ಸ್ಥಳಕ್ಕೆ ತೆರಳಿ ವಿರೋಧ ವ್ಯಕ್ತಪಡಿಸಿದ್ದು, ಬಳಿಕ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ಪರಿಸ್ಥಿತಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ ಎಂದು ವರದಿಗಳು ತಿಳಿಸಿವೆ.
ಕಾರ್ಯಕ್ರಮದ ಬಳಿಕ ಹೊರಗಿನಿಂದ ಬಂದ ಗುಂಪೊಂದು ಕ್ಯಾಂಪಸ್‌ಗೆ ಪ್ರವೇಶಿಸಿ ವಿದ್ಯಾರ್ಥಿಗಳ ಮೇಲೆ ಕೋಲು, ಬಿದಿರು, ಕಲ್ಲು ಹಾಗೂ ಇಟ್ಟಿಗೆಗಳಿಂದ ಹಲ್ಲೆ ನಡೆಸಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಮಹಿಳಾ ವಿದ್ಯಾರ್ಥಿಗಳ ಮೇಲೂ ಹಲ್ಲೆ ನಡೆದಿದ್ದು, ಕೆಲ ವಿದ್ಯಾರ್ಥಿಗಳು ಲೈಬ್ರರಿಯಲ್ಲಿ ಆಶ್ರಯ ಪಡೆದರೂ ಅಲ್ಲಿಗೂ ಗುಂಪು ಬಂದಿತ್ತು ಎಂದು ವಿದ್ಯಾರ್ಥಿ ಸಂಘ ಆರೋಪಿಸಿದೆ. ಲೈಬ್ರರಿಯನ್ ಹಾಗೂ ಕೆಲ ಸಿಬ್ಬಂದಿಯ ಮೇಲೂ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್‌ನ್ನು ಕ್ಯಾಂಪಸ್ ಗೇಟ್ ಬಳಿ ಕೆಲಕಾಲ ತಡೆದಿರುವ ಆರೋಪವೂ ಕೇಳಿಬಂದಿದೆ. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟರು ಎಂದು ವರದಿಯಾಗಿದೆ.
ವಿದ್ಯಾರ್ಥಿ ಸಂಘದ ಹೇಳಿಕೆಯ ಪ್ರಕಾರ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಪ್ರಮಾಣದಲ್ಲಿ ಗಾಯಗೊಂಡಿದ್ದು, ಕೆಲವರಿಗೆ ಗಂಭೀರ ಗಾಯಗಳಾಗಿವೆ. ಮತ್ತೊಂದೆಡೆ, ಕೆಲವು ಮಾಧ್ಯಮ ವರದಿಗಳು ಸುಮಾರು 30 ವಿದ್ಯಾರ್ಥಿಗಳು ಹಾಗೂ ಇಬ್ಬರು ಅಧ್ಯಾಪಕರು ಗಾಯಗೊಂಡಿರುವುದಾಗಿ ತಿಳಿಸಿವೆ.
ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ ABGP ವಿದ್ಯಾರ್ಥಿಗಳ ವಿರುದ್ಧವೇ ಆರೋಪ ಮಾಡಿದೆ. ವಿದ್ಯಾರ್ಥಿಗಳೇ ಕಾರ್ಯಕ್ರಮಕ್ಕೆ ಬಂದು ಬ್ಯಾನರ್‌ಗಳನ್ನು ಹರಿದು, ಭಾರತ ಮಾತೆ ಮತ್ತು ಸ್ವಾಮಿ ವಿವೇಕಾನಂದರ ಚಿತ್ರಗಳಿದ್ದ ಪೋಸ್ಟರ್‌ಗಳಿಗೆ ಹಾನಿ ಮಾಡಿ ಸಂಘರ್ಷಕ್ಕೆ ಕಾರಣರಾದರು ಎಂದು ABGP ಆರೋಪಿಸಿದೆ. ತಮ್ಮ ಸಂಘಟನೆಯ ಸದಸ್ಯರೂ ಗಾಯಗೊಂಡಿದ್ದಾರೆ ಎಂದು ಸಂಘಟನೆ ಹೇಳಿದೆ.
ಈ ನಡುವೆ RSSನ ವಿದ್ಯಾರ್ಥಿ ಸಂಘಟನೆ ABVP, ಈ ಘಟನೆಯೊಂದಿಗೆ ತಮ್ಮ ಸಂಘಟನೆಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದು, ಪೊಲೀಸರು ಸಂಪೂರ್ಣ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ.
ಘಟನೆಗೆ ಸಂಬಂಧಿಸಿದಂತೆ ಹಲವು ದೂರುಗಳು ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. SRFTI ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆಯನ್ನೂ ಹೆಚ್ಚಿಸಲಾಗಿದೆ.
ಆರ್ ಎಸ್ ಎಸ್ ಸಂಬಂಧಿತ ಸಂಘಟನೆಯಿಂದ ನೂರಾರು ವಿದ್ಯಾರ್ಥಿಗಳ ಮೇಲೆ ದಾಳಿ: ಗಾಯಾಳುಗಳನ್ನು ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ತಡೆದ ದುಷ್ಟರು