ಫ್ಲೈದುಬೈ ಪೈಲಟ್ ಸ್ಮಿತ್ ಮಚ್ಚರ್ ಜೊತೆ ಪ್ರಧಾನಿ ಮೋದಿ ಮಾತುಕತೆ: ‘ನಿಮ್ಮ ಧೈರ್ಯಕ್ಕೆ ದೇಶವೇ ಹೆಮ್ಮೆ ಪಡುತ್ತಿದೆʼ

ನವದೆಹಲಿ: ಫ್ಲೈದುಬೈ ವಿಮಾನದಲ್ಲಿ ಸಂಭವಿಸಬಹುದಾಗಿದ್ದ ಭಾರೀ ವಾಯು ದುರಂತವನ್ನು ತಡೆಯುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ವಿಮಾನದಲ್ಲಿದ್ದ ನೂರಾರು ಪ್ರಯಾಣಿಕರ ಜೀವ ಉಳಿಸಲು ತೋರಿದ ಧೈರ್ಯ ಮತ್ತು ಸಮಯಪ್ರಜ್ಞೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದು, ಸ್ಮಿತ್ ಮಚ್ಚರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಪ್ರಸ್ತುತ ಯುಎಇಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸ್ಮಿತ್ ಮಚ್ಚರ್, ಘಟನೆಯ ಸಂದರ್ಭದಲ್ಲಿ ತಾವು ಎದುರಿಸಿದ ಪರಿಸ್ಥಿತಿ ಹಾಗೂ ಆ ಸಂದರ್ಭದಲ್ಲಿ ಧೈರ್ಯದಿಂದ ಕಾರ್ಯನಿರ್ವಹಿಸಲು ಕಾರಣವಾದ ಸಂಗತಿಗಳನ್ನು ಪ್ರಧಾನಿಯೊಂದಿಗೆ ಹಂಚಿಕೊಂಡಿದ್ದಾರೆ.

ಕುಟುಂಬದವರಿಗೂ ಮೋದಿ ಭರವಸೆ

ಇದಕ್ಕೂ ಮುನ್ನ ಗುರುವಾರ ಪ್ರಧಾನಿ ಮೋದಿ ಅವರು ಸ್ಮಿತ್ ಮಚ್ಚರ್ ಅವರ ಪತ್ನಿ ಮತ್ತು ಪೋಷಕರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದರು. ಪೈಲಟ್ ಹಾಗೂ ಅವರ ಕುಟುಂಬಕ್ಕೆ ಭಾರತೀಯ ರಾಯಭಾರ ಕಚೇರಿ ಮತ್ತು ಸಂಬಂಧಿತ ಭಾರತೀಯ ಅಧಿಕಾರಿಗಳಿಂದ ಸಂಪೂರ್ಣ ನೆರವು ನೀಡುವುದಾಗಿ ಅವರು ಭರವಸೆ ನೀಡಿದ್ದರು.

‘ಭಾರತ ಕ್ಯಾಪ್ಟನ್ ಮಚ್ಚರ್ ಬಗ್ಗೆ ಹೆಮ್ಮೆಪಡುತ್ತದೆ’

ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದ ಪ್ರಧಾನಿ ಮೋದಿ, ಅತ್ಯಂತ ಗಂಭೀರ ಅಪಾಯದ ನಡುವೆಯೂ ಗಂಭೀರವಾಗಿ ಗಾಯಗೊಂಡಿದ್ದರೂ ಇತರರ ಜೀವ ರಕ್ಷಿಸಲು ಸ್ಮಿತ್ ಮಚ್ಚರ್ ತೋರಿದ ಅಸಾಮಾನ್ಯ ಧೈರ್ಯ ಮತ್ತು ದೃಢಸಂಕಲ್ಪವನ್ನು ಶ್ಲಾಘಿಸಿದ್ದರು.

ಅವರ ಧೈರ್ಯದಿಂದ ನೂರಾರು ಜೀವಗಳು ಉಳಿದಿದ್ದು, ಭಾರೀ ದುರಂತವೊಂದು ತಪ್ಪಿದೆ ಎಂದು ಪ್ರಧಾನಿ ಹೇಳಿದ್ದರು. ‘ಭಾರತ ಕ್ಯಾಪ್ಟನ್ ಮಚ್ಚರ್ ಬಗ್ಗೆ ಹೆಮ್ಮೆಪಡುತ್ತದೆ’ ಎಂದು ಮೋದಿ ಬರೆದಿದ್ದರು.

‘9/11 ರೀತಿಯ ದುರಂತ ತಪ್ಪಿಸಿದ ಭಾರತೀಯ’

ದೆಹಲಿಯಲ್ಲಿ ನಡೆದ ಕೇಂದ್ರ ಲೋಕಸೇವಾ ಆಯೋಗದ (UPSC) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ಸ್ಮಿತ್ ಮಚ್ಚರ್ ತೋರಿದ ಸಮಯಪ್ರಜ್ಞೆ, ತಾಳ್ಮೆ ಮತ್ತು ಧೈರ್ಯವನ್ನು ಪ್ರಶಂಸಿಸಿದರು.

ಘಟನೆಯ ಸಂದರ್ಭದಲ್ಲಿ ಭಾರತೀಯ ಪೈಲಟ್ ತೋರಿದ ಧೈರ್ಯದಿಂದ ‘9/11 ರೀತಿಯ ದುರಂತವನ್ನು ತಪ್ಪಿಸಲಾಗಿದೆ. ವಿಮಾನದಲ್ಲಿ ಎದುರಾದ ಅತ್ಯಂತ ಅಪಾಯಕಾರಿ ಪರಿಸ್ಥಿತಿಯ ನಡುವೆಯೂ ಸ್ಮಿತ್ ಮಚ್ಚರ್ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದದ್ದು ಮತ್ತು ಪ್ರಯಾಣಿಕರ ಜೀವಗಳನ್ನು ರಕ್ಷಿಸಲು ಕೈಗೊಂಡ ಕ್ರಮಗಳು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿವೆ.

More articles

Latest article

Most read