ಗಾಂಧಿ ಜಯಂತಿ ರಜೆ ; ಜಲಾಶಯಕ್ಕೆ ತೆರಳಿದ್ದ ತಾಯಿ, ಮಗ ನೀರುಪಾಲು

ಚಿಕ್ಕಬಳ್ಳಾಪುರ: ಗಾಂಧಿ ಜಯಂತಿ ರಜೆಯ ದಿನ ಕುಟುಂಬದೊಂದಿಗೆ ಪ್ರವಾಸಕ್ಕೆ ತೆರಳಿದ್ದ ವೇಳೆ ಜಲಾಶಯದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ತಾಯಿ ಮತ್ತು ಮಗ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಶ್ರೀನಿವಾಸ ಸಾಗರ ಡ್ಯಾಮ್‌ಗೆ ಕುಟುಂಬ ಸಮೇತ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮೃತರನ್ನು ರೇಖಾ (39) ಮತ್ತು ಹೇಮಂತ್ (19) ಎಂದು ಗುರುತಿಸಲಾಗಿದೆ.

ಆಟೋ ಚಾಲಕರಾಗಿರುವ ರಾಜು, ಮಕ್ಕಳಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಕುಟುಂಬದೊಂದಿಗೆ ಜಲಾಶಯಕ್ಕೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಕುಟುಂಬದ ಸದಸ್ಯರು ನೀರಿನಲ್ಲಿ ಆಟವಾಡಲು ಇಳಿದಾಗ ತಾಯಿ, ಮಗ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.

ಅವರನ್ನು ರಕ್ಷಿಸಲು ಮುಂದಾದ ರಾಜು ಮತ್ತು ಅವರ ಪುತ್ರಿ ದೀಪ ಕೂಡ ನೀರಿನಲ್ಲಿ ಮುಳುಗುವ ಸ್ಥಿತಿಗೆ ತಲುಪಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಇಬ್ಬರನ್ನೂ ರಕ್ಷಿಸಿದ್ದಾರೆ. ರಾಜು ಹಾಗೂ ದೀಪ ಅಪಾಯದಿಂದ ಪಾರಾಗಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿಯಿಂದ ಶವಗಳ ಪತ್ತೆ

ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ನಡೆಸಿದ್ದಾರೆ. ಬಳಿಕ ರೇಖಾ ಮತ್ತು ಹೇಮಂತ್ ಅವರ ಮೃತದೇಹಗಳನ್ನು ಜಲಾಶಯದಿಂದ ಹೊರತೆಗೆದಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

More articles

Latest article

Most read