ದಸರಾ ನಾಡಕುಸ್ತಿ “ಜೋಡಿ ಕಟ್ಟುವ” ಕಾರ್ಯಕ್ರಮಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಚಾಲನೆ

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ‘ದಸರಾ ನಾಡಕುಸ್ತಿ’ ಜೋಡಿ ಕಟ್ಟುವ ಕಾರ್ಯಕ್ರಮಕ್ಕೆ, ನಗರಾಭಿವೃದ್ಧಿ ಸಚಿವ ಹಾಗೂ ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಡಾ.ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡಿದರು.

ಡಿ. ದೇವರಾಜ ಅರಸ್ ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ನೆರವೇರಿದ ಸಾಂಪ್ರದಾಯಿಕ ಜೋಡಿ ಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವರು, 2026ರ ದಸರಾ ಕುಸ್ತಿ ಪಂದ್ಯಾವಳಿಯ ಪೋಸ್ಟರ್ ಬಿಡುಗಡೆ ಮಾಡಿದರು.

“ನಮ್ಮ ಮಣ್ಣಿನ ಕ್ರೀಡೆಯಾದ ಕುಸ್ತಿಗೆ ಸಾಂಸ್ಕೃತಿಕ ಹಿರಿಮೆಯ ದಸರೆಯ ಆಚರಣೆಯಷ್ಟೇ ಇತಿಹಾಸವಿದೆ, ಕ್ರೀಡಾಪಟುಗಳಿಗೆ ಸೂಕ್ತ ವೇದಿಕೆ ಹಾಗೂ ಪ್ರೋತ್ಸಾಹ ನೀಡುವುದೇ ಈ ಕ್ರೀಡಾಕೂಟದ ಮುಖ್ಯ ಉದ್ದೇಶವಾಗಿದ್ದು ಇಲ್ಲಿ ಸೋಲು,ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ ಎಂದು ಹೇಳಿದ ಸಚಿವರು ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕುಸ್ತಿ ಪಟುಗಳಿಗೆ ಅಭಿನಂದನೆಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಟಿ.ಎಸ್. ಶ್ರೀವತ್ಸ, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ನಾಗೇಶ್, ದಸರಾ ಕುಸ್ತಿ ಸಮಿತಿ ಕಾರ್ಯಾಧ್ಯಕ್ಷರಾದ ಶ್ರೀ ಧರ್ಮೇಂದ್ರ, ಕಾರ್ಯದರ್ಶಿಗಳಾದ ಶ್ರೀ ನರಸಿಂಹ ಮೂರ್ತಿ ಮತ್ತಿತರ ಹಿರಿಯರು ಅಧಿಕಾರಿಗಳು, ಕುಸ್ತಿಪಟುಗಳು ಹಾಜರಿದ್ದರು.

More articles

Latest article

Most read