ದೆಹಲಿ ಪತ್ರಕರ್ತರಿಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಪತ್ರಕರ್ತೆಯರ ಸಂಘದಿಂದ ಖಂಡನೆ

ಬೆಂಗಳೂರು, ಅ.4: ದೆಹಲಿಯ ಜಂತರ್‌ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ನಡೆದ ಹಲ್ಲೆ ಹಾಗೂ ದೌರ್ಜನ್ಯವನ್ನು ಕರ್ನಾಟಕ ಪತ್ರಕರ್ತೆಯರ ಸಂಘ ತೀವ್ರವಾಗಿ ಖಂಡಿಸಿದೆ.

ಪ್ರತಿಭಟನೆಯ ವರದಿ ಮಾಡಲು ತೆರಳಿದ್ದ ಪತ್ರಕರ್ತೆಯೊಬ್ಬರನ್ನು ಪೊಲೀಸ್ ಅಧಿಕಾರಿಯೊಬ್ಬರು ಅನುಚಿತವಾಗಿ ಎಳೆದಾಡಿ, ಲೈಂಗಿಕ ಕಿರುಕುಳ ನೀಡಿರುವ ಆರೋಪ ಅತ್ಯಂತ ಆಘಾತಕಾರಿ ಎಂದು ಸಂಘ ಹೇಳಿದೆ. ಈ ಕುರಿತು ದೂರು ದಾಖಲಿಸಲು ತೆರಳಿದ ಪತ್ರಕರ್ತೆಯನ್ನು ಪೊಲೀಸರು ಗಂಟೆಗಳ ಕಾಲ ಕಾಯಿಸಿ, ಎಫ್‌ಐಆರ್ ದಾಖಲಿಸಲು ಹಿಂದೇಟು ಹಾಕಿರುವುದು ಹಾಗೂ ಅವರನ್ನೇ ಪ್ರಶ್ನೆಗೆ ಒಳಪಡಿಸಿರುವುದು ಖಂಡನೀಯ ಎಂದು ಸಂಘ ತಿಳಿಸಿದೆ.

ಆರೋಪಿತ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಪತ್ರಕರ್ತೆಯರ ಸಂಘ ಒತ್ತಾಯಿಸಿದೆ.

ಅಧಿಕೃತ ಗುರುತಿನ ಚೀಟಿ ಹೊಂದಿದ್ದ ಸ್ವತಂತ್ರ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದ ಪತ್ರಕರ್ತರೊಂದಿಗೆ ಪೊಲೀಸರು ಅನುಚಿತವಾಗಿ ಹಾಗೂ ಹಿಂಸಾತ್ಮಕವಾಗಿ ವರ್ತಿಸಿದ್ದಾರೆ. ಪ್ರತಿಭಟನೆಯ ಸ್ಥಳದಲ್ಲಿದ್ದ ಪತ್ರಕರ್ತರನ್ನು ವಶಕ್ಕೆ ಪಡೆಯುವ ಮೂಲಕ ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಪೊಲೀಸರು ನಡೆದುಕೊಂಡಿದ್ದಾರೆ ಎಂದು ಸಂಘ ಆರೋಪಿಸಿದೆ.

ಇತ್ತೀಚಿನ ದಿನಗಳಲ್ಲಿ ದೆಹಲಿ ಜಂತರ್‌ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ವರದಿಗೆ ತೆರಳುವ ಪತ್ರಕರ್ತರ ಮೇಲೆ ಇದೇ ರೀತಿಯ ಘಟನೆಗಳು ಪುನರಾವರ್ತನೆಯಾಗುತ್ತಿವೆ. ಹಿಂದೆ ವಿದ್ಯಾರ್ಥಿಗಳ ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತೆಯರ ಮೇಲೂ ಪೊಲೀಸರು ಹಲ್ಲೆ ನಡೆಸಿದ ಘಟನೆಗಳು ನಡೆದಿವೆ ಎಂದು ಸಂಘ ಗಮನ ಸೆಳೆದಿದೆ.

ಪತ್ರಕರ್ತರ ಮೇಲೆ ಮೇಲಿಂದ ಮೇಲೆ ಇಂತಹ ದೌರ್ಜನ್ಯಗಳು ನಡೆಯುತ್ತಿರುವುದು ಪತ್ರಿಕಾ ಸ್ವಾತಂತ್ರ್ಯಕ್ಕೆ ಗಂಭೀರ ಅಪಾಯ. ಘಟನೆಗಳಿಗೆ ಕಾರಣರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಪತ್ರಕರ್ತರು ನಿರ್ಭೀತಿಯಿಂದ ತಮ್ಮ ಕರ್ತವ್ಯ ನಿರ್ವಹಿಸಲು ಅಗತ್ಯ ರಕ್ಷಣೆ ಒದಗಿಸಬೇಕು ಎಂದು ಕರ್ನಾಟಕ ಪತ್ರಕರ್ತೆಯರ ಸಂಘ ಆಗ್ರಹಿಸಿದೆ.

ಸಂಘದ ಪರವಾಗಿ ಆರ್. ಪೂರ್ಣಿಮಾ, ಅಧ್ಯಕ್ಷರು ಹಾಗೂ ಮಾಲತಿ ಭಟ್, ಕಾರ್ಯದರ್ಶಿ ಅವರು ಹೇಳಿಕೆ ನೀಡಿದ್ದಾರೆ.

More articles

Latest article

Most read