ಸಿದ್ರಾಂಪುರ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ, ಪರಿಶೀಲನೆ.

ರಾಯಚೂರು ಜಿಲ್ಲಾ ಪ್ರವಾಸದ ವೇಳೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಸಿದ್ರಾಂಪುರದ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನೀರಿನ ಸೌಲಭ್ಯದ ಕೊರತೆಯಿಂದ, ಕಳೆದ ಮೂರು ವರ್ಷಗಳಿಂದ ವಸತಿ ನಿಲಯ ಕಾರ್ಯಾರಂಭವಾಗದೇ ಇರುವುದು, ಮತ್ತು ಕಾವಲುಗಾರರ ಕೊರತೆಯಿಂದಾಗಿ ವಸತಿ ನಿಲಯದಲ್ಲಿನ ವಸ್ತುಗಳು ಕಳುವಾಗಿರುವುದು, ವಿದ್ಯಾರ್ಥಿನಿಲಯದ ಆವರಣದಲ್ಲಿ ಅವ್ಯವಸ್ಥೆ ಉಂಟಾಗಿದ್ದು, ಅಕ್ರಮ ಚಟುವಟಿಕೆಗಳು ನಡೆದಿರುವುದು ಗಮನಿಸಿದ ಅಧ್ಯಕ್ಷರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು

ವಿದ್ಯಾರ್ಥಿನಿಯರ ಸುರಕ್ಷತೆ ಮತ್ತು ಶಿಕ್ಷಣದ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ. ವಸತಿ ನಿಲಯಕ್ಕೆ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ತುರ್ತಾಗಿ ಒದಗಿಸಿ, ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸುವ ಮೂಲಕ ಆದಷ್ಟು ಬೇಗ ವಿದ್ಯಾರ್ಥಿನಿಯರ ವಸತಿ ನಿಲಯವನ್ನು ಕಾರ್ಯಾರಂಭಗೊಳಿಸುವಂತೆ, ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು. ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆಯೂ ನಿರ್ದೇಶನ ನೀಡಿದರು

More articles

Latest article

Most read