ಮೈಸೂರು, ಅ. 05 : ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದಲ್ಲಿ 183.78 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ ಸೋಮವಾರ ಮಾಜಿ ಸಿಎಂ ಸಿದ್ದರಾಮಯ್ಯ ನೆರವೇರಿಸಿದರು.
ಸುಮಾರು 40.40 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗ 143.38 ಕೋಟಿ ವೆಚ್ಚದ ನೂತನ ಕಾಮಗಾರಿಗಳ ಶಂಕುಸ್ಥಾಪನೆ ಮಾಡಲಾಗಿದೆ. ನಂತರ ಮಾತನಾಡಿದ ಸಿದ್ದರಾಮಯ್ಯ ಅವರು, 2023 ರಲ್ಲಿ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ನಾವು ಘೋಷಿಸಿದ್ದ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ. ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ನೀಡಲಾಗಿದೆ ಎಂದರು.
ರಾಜ್ಯದ 240 ತಾಲೂಕುಗಳ ಪೈಕಿ 220 ತಾಲೂಕುಗಳು ಭೀಕರ ಬರಗಾಲಕ್ಕೆ ತುತ್ತಾಗಿದ್ದವು. ಇಂತಹ ಕಷ್ಟದ ಸಂದರ್ಭದಲ್ಲೂ ಗ್ಯಾರಂಟಿ ಯೋಜನೆಗಳು ಜನರ ಕೈಗೆ ತಲುಪಿರುವುದರಿಂದ ಪ್ರತಿಯೊಬ್ಬರಿಗೂ ಆಹಾರ, ಆರ್ಥಿಕ ನೆರವು ಮತ್ತು ನೆಮ್ಮದಿ ಸಿಕ್ಕಿದೆ. ಜಾತಿ, ಧರ್ಮ, ಅಥವಾ ಪಕ್ಷ ಭೇದವಿಲ್ಲದೆ ರಾಜ್ಯದ ಎಲ್ಲಾ ಬಡ ಜನರಿಗಾಗಿ ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮಾತನಾಡಿ , ಸರ್ಕಾರದ ಬಳಿ ಇರುವ ಹಣ ಸರ್ಕಾರದ ಸ್ವಂತದ್ದಲ್ಲ, ಅದು ಜನರು ತೆರಿಗೆ ರೂಪದಲ್ಲಿ ನೀಡಿದ ಹಣ, ಜನರ ತೆರಿಗೆ ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ಮರಳಿ ಜನರಿಗೇ ನೀಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.
ದಾಸನೂರು ಗ್ರಾಮದಲ್ಲಿ .22.50 ಕೋಟಿ ವೆಚ್ಚದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯನ್ನು ನಿರ್ಮಿಸಿ ಉದ್ಘಾಟಿಸಲಾಗಿದೆ. ವರುಣ ಕ್ಷೇತ್ರದ ಪ್ರತಿಯೊಂದು ಹೋಬಳಿಯಲ್ಲೂ ಬಡ ಹಾಗೂ ಗ್ರಾಮೀಣ ಮಕ್ಕಳ ಅನುಕೂಲಕ್ಕಾಗಿ ಉತ್ತಮ ಗುಣಮಟ್ಟದ ವಸತಿ ಶಾಲೆಗಳನ್ನು ತೆರೆಯಲಾಗುತ್ತಿದೆ ಎಂದು ತಿಳಿಸಿದರು.
ನಂಜನಗೂಡು ವಿಧಾನ ಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ ಸರ್ಕಾರವು ಚುನಾವಣೆಗೆ ಮುನ್ನ ನೀಡಿದ್ದ ಭರವಸೆಯಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದೆ ಎಂದು ಹೇಳಿದರು.
ವರುಣ ಜನರೇ ನನ್ನ ರಾಜಕೀಯ ಬದುಕಿನ ಶಕ್ತಿ
ವರುಣ ಜನರೇ ನನ್ನ ರಾಜಕೀಯ ಬದುಕಿನ ಶಕ್ತಿ. ತಮ್ಮ ರಾಜಕೀಯ ಬದುಕಿನ ಯಶಸ್ಸಿಗೆ ವರುಣ ಕ್ಷೇತ್ರದ ಜನರ ಬೆಂಬಲವೇ ಪ್ರಮುಖ ಕಾರಣ .2008ರಲ್ಲಿ ವರುಣ ವಿಧಾನಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬಂದ ಬಳಿಕ ನಡೆದ ನಾಲ್ಕು ಚುನಾವಣೆಗಳಲ್ಲೂ ತಮ್ಮ ಕುಟುಂಬದ ಮೇಲೆ ಜನರು ಇಟ್ಟಿರುವ ವಿಶ್ವಾಸವನ್ನು ಮರೆಯಲ್ಲ. ನೀವು ಧಾರೆ ಎರೆದ ಶಕ್ತಿಯೇ ನನ್ನ ಶಕ್ತಿ. ನಿಮ್ಮನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದು ಸಿದ್ದರಾಮಯ್ಯ ಭಾವುಕರಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮಯ್ಯ, ಕಡತೂರು .ಶಿವಕುಮಾರ್,ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಅಧ್ಯಕ್ಷರು ಮರಿಸ್ವಾಮಿ, ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷರು ಅನಂತ ಹಾಗೂ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

