ವಿಕಲಚೇತನತೆ ಒಬ್ಬರ ಸಾಮರ್ಥ್ಯವನ್ನು ನಿರ್ಧರಿಸುವುದಿಲ್ಲ: ಡಾ. ನಾಗಲಕ್ಷ್ಮಿ

ವಿಕಲಚೇತನತೆ ಒಬ್ಬರ ಸಾಮರ್ಥ್ಯವನ್ನು ನಿರ್ಧರಿಸುವುದಿಲ್ಲ. ಶಿಕ್ಷಣ, ಕೌಶಲ್ಯ, ಕಲೆ, ಕಂಪ್ಯೂಟರ್ ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ವಿಶೇಷ ಚೇತನ ಮಕ್ಕಳು ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ತೋರಿಸಬಲ್ಲರು. ಅವರಿಗೆ ಅಗತ್ಯವಿರುವುದು ಅವಕಾಶ, ಪ್ರೋತ್ಸಾಹ ಮತ್ತು ಸೂಕ್ತ ವೇದಿಕೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು

ಕರ್ನಾಟಕ ಡೆಫ್ ವುಮೆನ್ ಫೌಂಡೇಷನ್ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಕಿವುಡರ ಸಪ್ತಾಹ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ ಸರ್ಕಾರವು ವಿಶೇಷ ಚೇತನರಿಗಾಗಿ ಹಲವು ಯೋಜನೆಗಳು ಹಾಗೂ ಸೌಲಭ್ಯಗಳನ್ನು ಜಾರಿಗೊಳಿಸಿದೆ. ಅವುಗಳ ಸದುಪಯೋಗ ಪಡೆದುಕೊಂಡು ಶಿಕ್ಷಣ, ಕೌಶಲ್ಯ ಮತ್ತು ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಿ, ಸ್ವಾವಲಂಬಿ ಜೀವನ ನಡೆಸುವತ್ತ ಹೆಜ್ಜೆ ಇಡಬೇಕು. ಎಂದು ತಿಳಿಸಿದರು

ಸಮಾಜವೂ ಅವರ ಸಾಮರ್ಥ್ಯವನ್ನು ಗುರುತಿಸಿ, ಸಮಾನ ಅವಕಾಶಗಳನ್ನು ಕಲ್ಪಿಸುವ ಜವಾಬ್ದಾರಿ ಹೊಂದಿದೆ. ಅವಕಾಶ ಸಿಕ್ಕಾಗ ಪ್ರತಿಭೆ ತನ್ನದೇ ದಾರಿಯನ್ನು ಕಂಡುಕೊಳ್ಳುತ್ತದೆ ಎಂದರು

ಈ ಸಂದರ್ಭದಲ್ಲಿ ಡೆಫ್ ವುಮೆನ್ ಫೌಂಡೇಷನ್ ಅಧ್ಯಕ್ಷೆ ಗೀತಾ ಜಿ, ಪ್ರಧಾನ ಕಾರ್ಯದರ್ಶಿ ಚೈತ್ರಾ ಬಿ.ಎನ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು

More articles

Latest article

Most read