ಗುಜರಾತ್‌ನ ಭಾವನಗರದಲ್ಲಿ ಭೀಕರ ಅಪಘಾತ : ಏಳು ಮಂದಿ ಸಾವು

ಭಾವನಗರ: ಗುಜರಾತ್‌ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಮಂಗಳವಾರ ತಮ್ಮ ಎಸ್‌ಯುವಿ   ವಾಹನವು ನಿಲ್ಲಿಸಿದ್ದ ಟ್ರೈಲರ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟವರು ಭಾವನಗರದಿಂದ ಅಲಂಗ್‌ಗೆ ಪ್ರಯಾಣಿಸುತ್ತಿದ್ದರು. ಅಲ್ಲಿನ ಹಡಗು ನಿರ್ಮಾಣ ಕೇಂದ್ರವೊಂದರಲ್ಲಿ ಅವರು ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ನಿತೇಶ್ ಪಾಂಡೆ ತಿಳಿಸಿದ್ದಾರೆ.

ಜಿಲ್ಲೆಯ ತಲಾಜಾ ತಾಲೂಕಿನ ಟ್ರಾಪಾಜ್ ಗ್ರಾಮದ ಬಳಿ, ಭಾವನಗರ-ಸೋಮನಾಥ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವಿಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಎಸ್‌ಯುವಿ ವಾಹನವು ನಿಂತಿದ್ದ ಟ್ರೈಲರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಅಲಂಗ್ ಪೊಲೀಸ್ ಠಾಣಾ ವ್ಯಾಪ್ತಿಯ ಟ್ರಾಪಾಜ್ ಗ್ರಾಮದ ಬಳಿ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಟ್ರೈಲರ್ ನಿಲ್ಲಿಸಲಾಗಿತ್ತು. ಹಿಂದಿನಿಂದ ಬಂದ ಬೊಲೆರೊ (ಎಸ್‌ಯುವಿ) ವಾಹನವು ಟ್ರೈಲರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆಯಿತು. ಆರು ಮಂದಿ ಸ್ಥಳದಲ್ಲೇ ಮೃತಪಟ್ಟರು ಮತ್ತು ಒಬ್ಬರು ಚಿಕಿತ್ಸೆ ಪಡೆಯುವಾಗ ಮೃತಪಟ್ಟರು,” ಎಂದು ಪಾಂಡೆ ಹೇಳಿದರು.

ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಟ್ರೈಲರ್ ಮುಂದಕ್ಕೆ ನೂಕಲ್ಪಟ್ಟಿತು ಮತ್ತು ಮೃತದೇಹಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು; ಅಪಘಾತದಲ್ಲಿ ಎಸ್‌ಯುವಿ ಸಂಪೂರ್ಣವಾಗಿ ಜಖಂಗೊಂಡಿತ್ತು. ವಾಹನದಲ್ಲಿದ್ದವರನ್ನು ಹೊರತೆಗೆಯಲು ಕಬ್ಬಿಣದ ಸರಳುಗಳನ್ನು ಬಳಸಿ ಎಸ್‌ಯುವಿಯ ಬಾಗಿಲುಗಳನ್ನು ಬಲವಂತವಾಗಿ ತೆರೆಯಬೇಕಾಯಿತು ಎಂದು ಪ್ರತ್ಯಕ್ಚ ದರ್ಶಿಗಳು ಹೇಳಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಭಾವನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article

Most read