ಜಯನಗರದಲ್ಲಿ 5ಸಾವಿರಕ್ಕೂ ಹೆಚ್ಚು ಫಾರ್ಮ್‌ -7 ಅರ್ಜಿ ಸಲ್ಲಿಕೆ: ಸೌಮ್ಯಾ ರೆಡ್ಡಿ ದೂರು, ಮೂವರ ವಿರುದ್ಧ ಎಫ್‌ಐಆರ್

ಬೆಂಗಳೂರು, ಅ.6: ಜಯನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ಹಲವು ಮತದಾರರ ಹೆಸರುಗಳನ್ನು ಅಳಿಸಲು ಸುಳ್ಳು ಅಥವಾ ಆಧಾರರಹಿತ ದಾಖಲೆಗಳ ಆಧಾರದ ಮೇಲೆ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪದ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಹಾಗೂ ದೂರುದಾರರಾದ ಸೌಮ್ಯಾ ರೆಡ್ಡಿ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ 9 ಗಂಟೆಗೆ ದೂರು ಸ್ವೀಕರಿಸಲಾಗಿದ್ದು, No. 250/2026 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ರಾಮಕೃಷ್ಣ (A1), ಯೋಗೇಶ್ (A2) ಹಾಗೂ ಇತರೆ ವ್ಯಕ್ತಿ/ವ್ಯಕ್ತಿಗಳು (A3) ಅವರನ್ನು ಆರೋಪಿಗಳೆಂದು ನಮೂದಿಸಲಾಗಿದೆ. ಮೂವರನ್ನೂ ವಯಸ್ಕ ಪುರುಷ ಆರೋಪಿಗಳೆಂದು ಎಫ್‌ಐಆರ್‌ನ ಆರೋಪಿಗಳ ಪಟ್ಟಿಯಲ್ಲಿ ದಾಖಲಿಸಲಾಗಿದೆ.

5,698 ಮತದಾರರ ಹೆಸರು ಅಳಿಸಲು ಯತ್ನ?

ದೂರಿನ ಪ್ರಕಾರ, 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ AC No.173, ಜಯನಗರ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸೌಮ್ಯಾ ರೆಡ್ಡಿ ಸ್ಪರ್ಧಿಸಿದ್ದರು. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಡೆದ ಪರಿಶೀಲನೆಯಲ್ಲಿ ಹಲವು ಮತದಾರರ ಹೆಸರುಗಳನ್ನು ತೆಗೆದುಹಾಕಲು ಅರ್ಜಿಗಳು ಸಲ್ಲಿಕೆಯಾಗಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಎಫ್‌ಐಆರ್‌ನಲ್ಲಿರುವ ದೂರಿನ ವಿವರಗಳ ಪ್ರಕಾರ, ವಿವಿಧ ಮತಗಟ್ಟೆಗಳಿಗೆ ಸಂಬಂಧಿಸಿದಂತೆ ಒಟ್ಟು 5,698 ಮತದಾರರ ಹೆಸರುಗಳನ್ನು ಅಳಿಸಲು ಅರ್ಜಿಗಳು ಸಲ್ಲಿಸಿರುವುದು ಪತ್ತೆಯಾಗಿದೆ. ಈ ಪೈಕಿ ವಿವಿಧ ಮತಗಟ್ಟೆಗಳಿಗೆ ಸಂಬಂಧಿಸಿದಂತೆ 54, 25, 719, 4,327 ಸೇರಿದಂತೆ ಹಲವು ಸಂಖ್ಯೆಯ ಮತದಾರರ ಹೆಸರುಗಳ ಕುರಿತು ಅರ್ಜಿಗಳು ಸಲ್ಲಿಕೆಯಾಗಿರುವುದಾಗಿ ದೂರಿನಲ್ಲಿ ವಿವರಿಸಲಾಗಿದೆ.

ಬಿಜೆಪಿ ಕಾರ್ಯಕರ್ತರು, BLAಗಳ ಪಾತ್ರದ ಆರೋಪ
ಮತದಾರರ ಹೆಸರುಗಳನ್ನು ಅಳಿಸುವ ಪ್ರಕ್ರಿಯೆಯಲ್ಲಿ ಭಾರತೀಯ ಜನತಾ ಪಕ್ಷ (BJP) ಮತ್ತು ಅದರ ಮಿತ್ರಪಕ್ಷಗಳಿಗೆ ರಾಜಕೀಯವಾಗಿ ಅನುಕೂಲವಾಗುವ ರೀತಿಯಲ್ಲಿ ಕೆಲವರು ಕಾರ್ಯನಿರ್ವಹಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಅಲ್ಲದೆ, ಮತದಾರರ ಹೆಸರುಗಳನ್ನು ಅಳಿಸಲು ಬೂತ್ ಲೆವೆಲ್ ಏಜೆಂಟ್‌ಗಳು (BLA) ಹಾಗೂ ಇತರರು ಫಾರಂ-7 ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂಬ ಆರೋಪವೂ ಎಫ್‌ಐಆರ್‌ನಲ್ಲಿದೆ.

ದೂರಿನಲ್ಲಿ ಯೋಗೇಶ್ ಸೇರಿದಂತೆ ಕೆಲವರ ವಿರುದ್ಧ ನಿರ್ದಿಷ್ಟ ಆರೋಪಗಳನ್ನು ಮಾಡಲಾಗಿದ್ದು, ಬಿಎಲ್‌ಒ ಕಚೇರಿಗೆ ಸಲ್ಲಿಸಲಾದ ಅರ್ಜಿಗಳ ಕುರಿತು ತನಿಖೆ ನಡೆಸುವಂತೆ ಪೊಲೀಸರಿಗೆ ಮನವಿ ಮಾಡಲಾಗಿದೆ.

ಜಯನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS), 2023ರ ಸೆಕ್ಷನ್ 61(2)(b), 217, 319(2), 336(2), 340(2) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಪ್ರಕರಣದ ತನಿಖೆ ಆರಂಭಿಸಿರುವುದಾಗಿ ಉಲ್ಲೇಖಿಸಲಾಗಿದೆ.

More articles

Latest article

Most read