ಮಹಿಷ ದಸರಾ ಹಿನ್ನೆಲೆ: ಚಾಮುಂಡಿಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ

ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿರ್ಬಂಧ; ಅ.11ರ ಬೆಳಗ್ಗೆ 6ರವರೆಗೆ ಆದೇಶ

ಮೈಸೂರು: ಮಹಿಷ ದಸರಾ ಆಚರಣೆಗೆ ಸಂಬಂಧಿಸಿದಂತೆ ಪರ-ವಿರೋಧದ ಪ್ರತಿಭಟನೆಗಳು ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಮಹಿಷಾಸುರ ಪ್ರತಿಮೆಯ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.

ಅಕ್ಟೋಬರ್ 9ರ ಮಧ್ಯರಾತ್ರಿ 12 ಗಂಟೆಯಿಂದ ಅಕ್ಟೋಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ. ಚಾಮುಂಡಿಬೆಟ್ಟದಲ್ಲಿ ವಾಸಿಸುವವರಿಗೆ ಈ ಆದೇಶದಿಂದ ವಿನಾಯಿತಿ ನೀಡಲಾಗಿದೆ.

ಅ.10ರಂದು ಮಹಿಷ ದಸರಾ ಕಾರ್ಯಕ್ರಮ

ಮಹಿಷ ದಸರಾ ಆಚರಣಾ ಸಮಿತಿ ಅಧ್ಯಕ್ಷ ಪುರುಷೋತ್ತಮ್ ಅವರು ಅಕ್ಟೋಬರ್ 10ರಂದು ಬೆಳಗ್ಗೆ 8.30ಕ್ಕೆ ಚಾಮುಂಡಿಬೆಟ್ಟದಲ್ಲಿರುವ ಮಹಿಷಾಸುರನ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಕಾರ್ಯಕ್ರಮ ನಿಗದಿಪಡಿಸಿದ್ದಾರೆ. ಬಳಿಕ ಬೆಳಗ್ಗೆ 11 ಗಂಟೆಗೆ ನಗರದ ಪುರಭವನದ ಹೊರ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಹಾಗೂ ವೇದಿಕೆ ಕಾರ್ಯಕ್ರಮ ಆಯೋಜಿಸಲು ಅನುಮತಿ ಮತ್ತು ಸಹಕಾರ ಕೋರಿ ಮನವಿ ಸಲ್ಲಿಸಿದ್ದಾರೆ.

ಪ್ರತಿಭಟನೆ ಸಾಧ್ಯತೆ: ಪೊಲೀಸರಿಂದ ಮುನ್ನೆಚ್ಚರಿಕೆ

ಗುಪ್ತಚರ ಇಲಾಖೆಯಿಂದ ಮಾಹಿತಿ ಸಂಗ್ರಹಿಸಲಾಗಿದ್ದು, ಮಹಿಷ ದಸರಾ ಆಚರಣೆಯನ್ನು ವಿರೋಧಿಸುವ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ಇದೇ ಸಂದರ್ಭದಲ್ಲಿ ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ದೇಶ-ವಿದೇಶ ಹಾಗೂ ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುತ್ತಿದ್ದಾರೆ.

ಮಹಿಷ ದಸರಾ ಆಚರಣೆ ಕುರಿತು ಪರ-ವಿರೋಧದ ಗುಂಪುಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಮತ್ತು ಬೆಟ್ಟದ ವಿಶಾಲ ಪ್ರದೇಶದಲ್ಲಿ ಜನರು ವಿವಿಧ ಕಡೆಗಳಿಂದ ಸೇರಬಹುದಾದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವ ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಿರ್ಬಂಧ ವಿಧಿಸಿದ್ದಾರೆ.

More articles

Latest article

Most read