ಬಂಡೀಪುರ ಸೇರಿ ವನ್ಯಜೀವಿ ಸಫಾರಿಗಳಲ್ಲಿ ಮೊಬೈಲ್ ಬಳಕೆಗೆ ಸಂಪೂರ್ಣ ಬ್ರೇಕ್!

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕ್ರಮ; ತುರ್ತು ಸಂಪರ್ಕಕ್ಕಾಗಿ ಸಫಾರಿ ವಾಹನಗಳಿಗೆ ವೈರ್‌ಲೆಸ್ ವ್ಯವಸ್ಥೆ ಕಡ್ಡಾಯ

ಚಾಮರಾಜನಗರ: ಅರಣ್ಯ ಸಫಾರಿಗೆ ತೆರಳುವ ಪ್ರವಾಸಿಗರಿಗೆ ಇನ್ನು ಮುಂದೆ ಮೊಬೈಲ್ ಫೋನ್ ಬಳಸಿ ವನ್ಯಜೀವಿಗಳ ದೃಶ್ಯಗಳನ್ನು ಸೆರೆಹಿಡಿಯಲು ಅವಕಾಶ ಇರುವುದಿಲ್ಲ. ಬಂಡೀಪುರ ಸೇರಿದಂತೆ ರಾಜ್ಯದ ವನ್ಯಜೀವಿ ಸಫಾರಿಗಳಲ್ಲಿ ಪ್ರವಾಸಿಗರು, ಚಾಲಕರು ಹಾಗೂ ಗೈಡ್‌ಗಳ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್ ಆದೇಶ ಹೊರಡಿಸಿದ್ದಾರೆ.

ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (NTCA) ಕಾರ್ಯದರ್ಶಿಗಳೊಂದಿಗೆ ನಡೆದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಫಾರಿ ವಾಹನಗಳಲ್ಲಿ ತುರ್ತು ಸಂದರ್ಭಗಳಲ್ಲಿ ಸಂಪರ್ಕ ಸಾಧಿಸಲು ವೈರ್‌ಲೆಸ್ ವ್ಯವಸ್ಥೆ ಅಳವಡಿಸುವಂತೆಯೂ ಅರಣ್ಯ ಇಲಾಖೆ ಸೂಚಿಸಿದೆ.

ಸೋಮವಾರದಿಂದ ಬಂಡೀಪುರದಲ್ಲಿ ಹೊಸ ನಿಯಮ

ಚಾಮರಾಜನಗರ ಜಿಲ್ಲೆಯ ಬಂಡೀಪುರ, ಕೆ.ಗುಡಿ, ಪಿ.ಜಿ. ಪಾಳ್ಯ ಹಾಗೂ ಗೋಪಿನಾಥಂ ಪ್ರದೇಶಗಳಲ್ಲಿ ವನ್ಯಜೀವಿ ಸಫಾರಿಗಳು ನಡೆಯುತ್ತವೆ. ಈ ಹೊಸ ನಿಯಮವನ್ನು ಬಂಡೀಪುರ ಸಫಾರಿಯಲ್ಲಿ ಸೋಮವಾರದ ನಂತರ ಜಾರಿಗೆ ತರಲಾಗುವುದು ಎಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಜಿ.ಎಸ್. ಬೆಟ್ಟ ವಲಯ ಅರಣ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ.

ಈ ಹಿಂದೆ ಸಫಾರಿ ವೇಳೆ ಮೊಬೈಲ್ ಫೋನ್‌ಗಳನ್ನು ಏರ್‌ಪ್ಲೇನ್ ಮೋಡ್‌ನಲ್ಲಿ ಇರಿಸಿ, ವನ್ಯಜೀವಿಗಳ ಚಿತ್ರಗಳು ಮತ್ತು ವಿಡಿಯೊಗಳನ್ನು ಸೆರೆಹಿಡಿಯಲು ಅವಕಾಶವಿತ್ತು. ಇದೀಗ ಆ ಅವಕಾಶಕ್ಕೂ ತೆರೆಬಿದ್ದಿದೆ.

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಏನು?

ಹುಲಿ ಸಂರಕ್ಷಿತ ಪ್ರದೇಶಗಳ ಕೋರ್ ವಲಯಗಳಲ್ಲಿ ಮೊಬೈಲ್ ಬಳಕೆಗೆ ಅವಕಾಶ ನೀಡಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಇದರ ಅನುಸಾರ ಸಫಾರಿ ವೇಳೆ ಮೊಬೈಲ್‌ಗಳನ್ನು ಏರ್‌ಪ್ಲೇನ್ ಮೋಡ್‌ನಲ್ಲಿ ಇರಿಸಿ ದೃಶ್ಯ ಸೆರೆಹಿಡಿಯಲು ಈ ಹಿಂದೆ ಅವಕಾಶ ಕಲ್ಪಿಸಲಾಗಿತ್ತು.

ಆದರೆ, ಸೆಪ್ಟೆಂಬರ್ 15ರಂದು NTCA ಕಾರ್ಯದರ್ಶಿಗಳೊಂದಿಗೆ ನಡೆದ ಸಭೆಯಲ್ಲಿ ರಾಜ್ಯದ ಕೋರ್ ಪ್ರದೇಶಗಳಲ್ಲಿರುವ ಪ್ರವಾಸೋದ್ಯಮ ವಲಯಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಅಕ್ಟೋಬರ್ 9ರಂದು ಹೊರಡಿಸಿದ ಆದೇಶದಲ್ಲಿ ಪಿಸಿಸಿಎಫ್ ಕುಮಾರ್ ಪುಷ್ಕರ್ ಸ್ಪಷ್ಟಪಡಿಸಿದ್ದಾರೆ.

ಇನ್ನು ಮುಂದೆ ಸಫಾರಿ ವೇಳೆ ಮೊಬೈಲ್ ಬಳಕೆಗೆ ಅವಕಾಶವಿಲ್ಲದಿರುವುದರಿಂದ ಪ್ರವಾಸಿಗರು ಅರಣ್ಯ ಇಲಾಖೆಯ ಹೊಸ ನಿಯಮಗಳನ್ನು ಪಾಲಿಸಬೇಕಿದೆ. ತುರ್ತು ಸಂಪರ್ಕಕ್ಕೆ ವೈರ್‌ಲೆಸ್ ವ್ಯವಸ್ಥೆ ನೆರವಾಗಲಿದೆ.

More articles

Latest article

Most read