ನವದೆಹಲಿ: ಮತಗಳ ಅಕ್ರಮದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನವದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಮತ್ತು ಮೆರವಣಿಗೆ ನಡೆಯಿತು.
ಎಡಪಂಥೀಯ ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಸೇರಿದಂತೆ ಕಾಂಗ್ರೆಸ್ ಹಾಗೂ ವಿವಿಧ ವಿರೋಧ ಪಕ್ಷಗಳ ಪ್ರಮುಖ ಮುಖಂಡರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ದೊಡ್ಡ ಪ್ರಮಾಣದಲ್ಲಿ ಭಾರತೀಯ ಧ್ವಜಗಳನ್ನು ಹಿಡಿದು ಸಾಗಿದ ಸುಮಾರು 20,000 ಕ್ಕೂ ಹೆಚ್ಚು ಪ್ರತಿಭಟನಾಕಾರರು ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ “ಮತ ಕಳ್ಳ” ಎಂಬ ಘೋಷಣೆಗಳನ್ನು ಕೂಗಿದರು.

ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ತಲುಪುವುದನ್ನು ತಡೆಯಲು ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ದಾಟಿ ಕೆಲವರು ಮುನ್ನಡೆದರು. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು ಭೇಟಿಯನ್ನು ನಿರಾಕರಿಸಿರುವುದರಿಂದ ಸುಪ್ರೀಂಕೋರ್ಟ್ ನಿಂದ 500 ಮಿ ದೂರದಲ್ಲಿ ಪ್ರತಿಭಟನೆ ಕೊನೆಗೊಂಡಿತು ಎಂದು ದೆಹಲಿಯಲ್ಲಿರುವ ನಮ್ಮ ವರದಿಗಾರ ಮನೋಜ್ ಆರ್ ಕಂಬ್ಳಿ ತಿಳಿಸಿದ್ದಾರೆ.
ಕರ್ನಾಟಕದಿಂದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಹರಿಪ್ರಸಾದ್, ಶರಣ್ ಪ್ರಕಾಶ್ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಬಹುತೇಕ ಕಾಂಗ್ರೆಸ್ ನಾಯಕರು ಭಾಗವಹಿಸಿದರು.
ಈ ನಡುವೆ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ರಾಹುಲ್ ಗಾಂಧಿ ಹಾಗೂ ಇಂಡಿಯಾ ಮೈತ್ರಿಕೂಟದ 10 ಪ್ರಮುಖ ನಾಯಕರು ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ.


