ನವದೆಹಲಿ, ಅ.13 : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ. ಉದ್ದೇಶಪೂರ್ವಕಾಗಿ ಕೆಲವು ಸಮುದಾಯದವರ ಹೆಸರುಗಳನ್ನು ಅಳಿಸಿಹಾಕಲಾಗಿದೆ ಎಂದು ಇಂಡಿಯಾ ಒಕ್ಕೂಟದಿಂದ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ವಿಪಕ್ಷ ನಾಯಕರು ಸೋಮವಾರ ಸುಪ್ರೀಂ ಕೋರ್ಟ್ಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸೌಗತ ರಾಯ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ನಾಯಕ ತೇಜಸ್ವಿ ಪ್ರಸಾದ್ ಯಾದವ್, ಎನ್ಸಿಪಿ (ಶರದ್ ಪವಾರ್ ಬಣ) ನಾಯಕಿ ಸುಪ್ರಿಯಾ ಸುಳೆ, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್, ಸಿಪಿಐ ನಾಯಕ ಡಿ. ರಾಜಾ, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸಂಸದೆ ಮಹುವಾ ಮಾಝಿ, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನಾಯಕ ಇ.ಟಿ. ಮೊಹಮ್ಮದ್ ಬಶೀರ್ ಕೂಡ ಸಹಿ ಮಾಡಿದ್ದಾರೆ.
ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟದಿಂದ ಸಲ್ಲಿಕೆ ಮಾಡಲಾಗಿರುವ ಅರ್ಜಿಯು ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಸಿಜೆಐ ಭೇಟಿಗೆ ನಿರಾಕರಣೆ:
ರಾಹುಲ್ ಗಾಂಧಿ ಅವರು ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಭೇಟಿ ಮಾಡಲು ಅವಕಾಶ ಕೋರಿದಾಗ ಸಿಜೆಐ ಅವಕಾಶ ನಿರಾಕರಿಸಿದ್ದರು.
ಚುನಾವಣಾ ಅಕ್ರಮಗಳ ಕುರಿತು ಆರೋಪಗಳ ಅರ್ಜಿಯು ಈಗಾಗಲೇ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಕುರಿತು ಮತ್ಯಾವುದೋ ಆರೋಪಗಳಿದ್ದರೂ, ಅದನ್ನು ಕೋರ್ಟ್ ಮೂಲಕವೇ ಸಲ್ಲಿಸಿ. ನೇರ ಭೇಟಿಯಾಗಲು ಅವಕಾಶವಿಲ್ಲ ಎಂದು ಹೇಳಿದ್ದರು.
ಸಿಎಂ ಸೇರಿ ಸಚಿವರು, ಶಾಸಕರು ಭಾಗಿ
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ನವದೆಹಲಿಯಲ್ಲಿ ಸೋಮವಾರ ಕರೆನೀಡಿದ್ದ ಪ್ರತಿಭಟನೆಯಲ್ಲಿ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ ರಾಜ್ಯದ ಅನೇಕ ಸಚಿವರು, ಶಾಸಕರು ಪಾಲ್ಗೊಂಡಿದ್ದರು.
ಕಾಂಗ್ರೆಸ್ ನಾಯಕರಾದ ರಾಹುಲ್ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಹಲವು ನಾಯಕರುಗಳೊಂದಿಗೆ ಪಾದಯಾತ್ರೆಯಲ್ಲಿ ಮುಖ್ಯಮಂತ್ರಿ ಭಾಗಿಯಾಗಿದ್ದರು.
ಕರ್ನಾಟಕದಿಂದ ತೆರಳಿದ್ದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಉಪಸಭಾಪತಿ ಉಮಾಶ್ರೀ ಸೇರಿ ರಾಜ್ಯದ ಸಚಿವರುಗಳು ಮತ್ತು ಕಾಂಗ್ರೆಸ್ ಶಾಸಕರುಗಳು ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ಪ್ರತಿಭಟನಾ ಸಭೆ ಸೇರಿ ಪ್ರತಿಭಟಿಸುವ ಮೂಲಕ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಹಿಸಿದರು.
ಈ ವೇಳೆ ಸಚಿವರಾದ ಶಿವರಾಜ ತಂಗಡಗಿ, ಡಾ.ಶರಣ ಪ್ರಕಾಶ್ ಪಾಟೀಲ, ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಶಾಸಕರಾದ ಟಿ.ಬಿ. ಜಯಚಂದ್ರ, ಬಸನಗೌಡ ಬಾದರ್ಲಿ, ವಿಧಾನ ಪರಿಷತ್ ಸದಸ್ಯರಾದ ವಸಂತಕುಮಾರ್, ಡಾ.ಆರತಿ ಕೃಷ್ಣ ಸೇರಿ ಹಲವರು ಭಾಗಿಯಾಗಿದ್ದರು.

