SIR ವಿರುದ್ಧ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯಲ್ಲಿ 10ಕ್ಕೂ ಹೆಚ್ಚು ದೋಷ ಪತ್ತೆ ಹಚ್ಚಿದ ಸುಪ್ರೀಂ

ನವದೆಹಲಿ, ಅ.13 : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಇತರ ವಿರೋಧ ಪಕ್ಷಗಳ ನಾಯಕರ ಅರ್ಜಿಗೆ ಆರಂಭದಲ್ಲೇ ತಾಂತ್ರಿಕ ಅಡ್ಡಿ ಎದುರಾಗಿದೆ.

ಸೋಮವಾರ ಸಲ್ಲಿಸಲಾದ ಅರ್ಜಿಯನ್ನು ಪರಿಶೀಲಿಸಿರುವ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ, ಅದರಲ್ಲಿ 10ಕ್ಕೂ ಹೆಚ್ಚು ದೋಷಗಳನ್ನು ಗುರುತಿಸಿದ್ದು, ಅವುಗಳನ್ನು ಸರಿಪಡಿಸುವಂತೆ ಅರ್ಜಿ ಸಲ್ಲಿಸಿದ ವಕೀಲರಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಖರ್ಗೆ ಗುರುತಿನ ಚೀಟಿ ಸ್ಪಷ್ಟ ಪ್ರತಿ ಸಲ್ಲಿಸಲು ಸೂಚನೆ

ಈ ಪ್ರಕರಣದಲ್ಲಿ ಸಹ ಅರ್ಜಿದಾರರಾಗಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಗುರುತಿನ ಚೀಟಿಯ ಸ್ಪಷ್ಟ ಪ್ರತಿಯನ್ನು ಸಲ್ಲಿಸುವಂತೆ ರಿಜಿಸ್ಟ್ರಿ ಸೂಚಿಸಿದೆ.

ಇದರ ಜೊತೆಗೆ ಅರ್ಜಿಯ ಕೆಲವು ಪುಟಗಳು ಓದಲು ಸಾಧ್ಯವಾಗದಷ್ಟು ಅಸ್ಪಷ್ಟವಾಗಿರುವುದು, ಕೆಲವು ಪುಟಗಳು ಲಭ್ಯವಿಲ್ಲದಿರುವುದು ಹಾಗೂ ನ್ಯಾಯಾಲಯದ ಶುಲ್ಕದಲ್ಲಿ 200 ರೂಪಾಯಿಗೂ ಹೆಚ್ಚು ಮೊತ್ತದ ಕೊರತೆ ಇರುವುದು ಸೇರಿದಂತೆ ಹಲವು ತಾಂತ್ರಿಕ ದೋಷಗಳನ್ನು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

SIR ಹೆಸರಿನಲ್ಲಿ ನೈಜ ಮತದಾರರ ಹೆಸರು ಅಳಿಸುವ ಆರೋಪ

ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ಕಾನೂನುಬದ್ಧತೆಯನ್ನೇ ಪ್ರಶ್ನಿಸಿ ವಿರೋಧ ಪಕ್ಷಗಳ ನಾಯಕರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ನೆಪದಲ್ಲಿ ಅರ್ಹ ಮತದಾರರ ಹೆಸರುಗಳನ್ನು ದೊಡ್ಡ ಪ್ರಮಾಣದಲ್ಲಿ ತೆಗೆದುಹಾಕಲಾಗುತ್ತಿದೆ ಎಂಬುದು ಅರ್ಜಿದಾರರ ಪ್ರಮುಖ ಆರೋಪವಾಗಿದೆ.

ವಿಶೇಷವಾಗಿ ಯುವ ಮತದಾರರು, ವಲಸೆ ಕಾರ್ಮಿಕರು ಹಾಗೂ ಸಾಮಾಜಿಕವಾಗಿ ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾರರು ಈ ಪ್ರಕ್ರಿಯೆಯಿಂದ ಹೆಚ್ಚಿನ ಪ್ರಮಾಣದಲ್ಲಿ ಬಾಧಿತರಾಗುತ್ತಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತರನ್ನೂ ಪ್ರತಿವಾದಿಗಳನ್ನಾಗಿಸಿದ ವಿಪಕ್ಷಗಳು

ಈ ಅರ್ಜಿಯಲ್ಲಿ ಭಾರತೀಯ ಚುನಾವಣಾ ಆಯೋಗದ ಜೊತೆಗೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಇದಕ್ಕೂ ಮುನ್ನ ಸೋಮವಾರ ರಾಹುಲ್ ಗಾಂಧಿ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಸುಪ್ರೀಂ ಕೋರ್ಟ್‌ಗೆ ಮೆರವಣಿಗೆಯಲ್ಲಿ ತೆರಳಿ ಅರ್ಜಿ ಸಲ್ಲಿಸಿದ್ದರು.

ಮಂಗಳವಾರ ವಿಚಾರಣೆ ಸಾಧ್ಯತೆ

SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಈಗಾಗಲೇ ಸಲ್ಲಿಕೆಯಾಗಿರುವ ಇತರ ಅರ್ಜಿಗಳೊಂದಿಗೆ ವಿರೋಧ ಪಕ್ಷಗಳ ನಾಯಕರ ಅರ್ಜಿಯೂ ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರುವ ನಿರೀಕ್ಷೆಯಿದೆ. ಆದರೆ ಅರ್ಜಿಯಲ್ಲಿ ಗುರುತಿಸಲಾಗಿರುವ ತಾಂತ್ರಿಕ ದೋಷಗಳನ್ನು ಸರಿಪಡಿಸಬೇಕಿರುವುದರಿಂದ ಮುಂದಿನ ಪ್ರಕ್ರಿಯೆ ಮಹತ್ವ ಪಡೆದುಕೊಂಡಿದೆ.

ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ಮತದಾರರ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪದ ಕುರಿತು ಸುಪ್ರೀಂ ಕೋರ್ಟ್ ಯಾವ ನಿಲುವು ತಳೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

More articles

Latest article

Most read