ಶಾಂತಿಯುತ ಪ್ರತಿಭಟನೆ ಹತ್ತಿಕ್ಕಬಾರದು; ಪ್ರತಿಭಟನಾಕಾರರ ವಿರುದ್ಧ ಪೊಲೀಸರ ವರ್ತನೆ ಪರಿಶೀಲನೆಗೆ ಸೂಚನೆ

ಬೆಂಗಳೂರು, ಅ.13 : ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಮೂಲಭೂತ ಹಕ್ಕು. ಅದನ್ನು ಗೌರವಿಸಬೇಕು, ರಕ್ಷಿಸಬೇಕು. ಯಾವುದೇ ಕಾರಣಕ್ಕೂ ಹತ್ತಿಕ್ಕಬಾರದು. ಬೆಂಗಳೂರಿನಲ್ಲಿ ನಿನ್ನೆ ಪ್ರತಿಭಟನಾಕಾರರನ್ನು ಪೊಲೀಸರು ನಡೆಸಿಕೊಂಡ ರೀತಿಯನ್ನು ಪರಿಶೀಲಿಸುವುದಾಗಿ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಎಸ್‌ಐಆರ್‌ ವಿರೋಧಿಸಿ ನಿನ್ನೆ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಕಾರರನ್ನು ಪೊಲೀಸರು ಹತ್ತಿಕ್ಕಿದ್ದರು. ಈ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಶಾಂತಿಯುತವಾಗಿ ನಡೆಯುವ ಯಾವುದೇ ಪ್ರತಿಭಟನೆಗೆ ಅಡ್ಡಿಪಡಿಸದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಜನರು ತಮ್ಮ ಅಭಿಪ್ರಾಯ ಮತ್ತು ಭಿನ್ನಮತವನ್ನು ಮುಕ್ತವಾಗಿ ವ್ಯಕ್ತಪಡಿಸುವ ಹಕ್ಕನ್ನು ರಕ್ಷಿಸುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

ಪ್ರತಿಭಟನಾಕಾರರ ಧ್ವನಿ ಹತ್ತಿಕ್ಕುವುದು ಪೊಲೀಸರ ಕೆಲಸವಲ್ಲ

ಪ್ರತಿಭಟನಾಕಾರರ ಧ್ವನಿಯನ್ನು ಅಡಗಿಸುವುದಕ್ಕಾಗಿ ಪೊಲೀಸರು ಇರುವುದಿಲ್ಲ. ಬದಲಾಗಿ, ನಾಗರಿಕರ ಹಕ್ಕುಗಳನ್ನು ರಕ್ಷಿಸುವುದೇ ಅವರ ಜವಾಬ್ದಾರಿಯಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ. ಪ್ರತಿಯೊಬ್ಬ ನಾಗರಿಕನೂ ಯಾವುದೇ ಭಯವಿಲ್ಲದೆ, ಶಾಂತಿಯುತವಾಗಿ ತನ್ನ ಅಸಮ್ಮತಿ ಮತ್ತು ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವಂತಹ ವಾತಾವರಣ ನಿರ್ಮಾಣವಾಗಬೇಕು. ಕೇವಲ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದಷ್ಟೇ ಸರ್ಕಾರದ ಜವಾಬ್ದಾರಿಯಲ್ಲ ಎಂದು ತಿಳಿಸಲಾಗಿದೆ.

ಪೊಲೀಸರೊಂದಿಗೆ ಸಹಕರಿಸಲು ಪ್ರತಿಭಟನಾಕಾರರಿಗೆ ಮನವಿ

ಇದೇ ವೇಳೆ ಪ್ರತಿಭಟನೆ ನಡೆಸುವವರು ಪೊಲೀಸರೊಂದಿಗೆ ಸಹಕರಿಸಬೇಕು. ಪ್ರತಿಭಟನೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ಇದರಿಂದ ಪ್ರತಿಭಟನಾಕಾರರ ಸುರಕ್ಷತೆಯ ಜೊತೆಗೆ ಇತರ ನಾಗರಿಕರ ಹಕ್ಕುಗಳನ್ನೂ ರಕ್ಷಿಸಲು ಸಾಧ್ಯವಾಗುತ್ತದೆ ಎಂದು ಮನವಿ ಮಾಡಲಾಗಿದೆ.

ಭಿನ್ನಮತ ವ್ಯಕ್ತಪಡಿಸುವುದು ಪ್ರಜಾಪ್ರಭುತ್ವಕ್ಕೆ ಬೆದರಿಕೆಯಲ್ಲ

ಪ್ರಜಾಪ್ರಭುತ್ವದಲ್ಲಿ ಶಾಂತಿಯುತವಾಗಿ ಭಿನ್ನಮತ ವ್ಯಕ್ತಪಡಿಸುವುದು ಕಾನೂನು ಮತ್ತು ಸುವ್ಯವಸ್ಥೆಗೆ ಬೆದರಿಕೆಯಲ್ಲ. ಬದಲಾಗಿ, ಅಂತಹ ಹಕ್ಕನ್ನು ರಕ್ಷಿಸುವುದೇ ಕಾನೂನು ಮತ್ತು ಸುವ್ಯವಸ್ಥೆಯ ಮೂಲ ಉದ್ದೇಶವಾಗಬೇಕು ಎಂದು ಪ್ರತಿಪಾದಿಸಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ನಡೆದುಕೊಂಡ ರೀತಿಯ ಪರಿಶೀಲನೆಗೆ ಸೂಚನೆ ನೀಡಿರುವುದು ಮಹತ್ವ ಪಡೆದುಕೊಂಡಿದ್ದು, ಶಾಂತಿಯುತ ಪ್ರತಿಭಟನೆಗಳಿಗೆ ಅಡ್ಡಿಯಾಗದಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

More articles

Latest article

Most read