ಹನಿಟ್ರ್ಯಾಪ್ ವಿಡಿಯೋ ವಿವಾದ : ಸಿದ್ದರಾಮಯ್ಯ ಅರ್ಜಿ ಮಾನ್ಯ, ಮಧ್ಯಂತರ ನಿರ್ಬಂಧಕಾಜ್ಞೆ ನೀಡಿದ ನ್ಯಾಯಾಲಯ

ಬೆಂಗಳೂರು, ಅ. 13 : ತಮ್ಮನ್ನು ಹನಿಟ್ರ್ಯಾಪ್ ಮತ್ತು ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿ ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅಸಲು ದಾವೆಯನ್ನು ನ್ಯಾಯಾಲಯ ಮಾನ್ಯ ಮಾಡಿದ್ದು, ಮಧ್ಯಂತರ ಪ್ರತಿಬಂಧಕಾಜ್ಞೆ ಜಾರಿಗೊಳಿಸಿದೆ.

42 ಮಾಧ್ಯಮ ಸಂಸ್ಥೆಗಳು ಹಾಗೂ ಡಿಜಿಟಲ್ ವೇದಿಕೆಗಳ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ವಿವಾದಿತ ವಿಡಿಯೋಗಳನ್ನು ಪ್ರಸಾರ ಮಾಡದಂತೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳದಂತೆ ನಿರ್ಬಂಧ ವಿಧಿಸಬೇಕೆಂದು ಸಿದ್ಧರಾಮಯ್ಯ ಕೋರಿದ್ದರು.

ಬೆಂಗಳೂರಿನ 18ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಇಂದು ನ್ಯಾಯಾಲಯದ ಆದೇಶ ಹೊರಬಿದ್ದಿದ್ದು, ಈಗಾಗಲೇ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿವಾದಿತ ವಿಡಿಯೋಗಳನ್ನು ತೆರವುಗೊಳಿಸುವಂತೆ ನ್ಯಾಯಾಲಯ ಸೂಚಿಸಿದೆ.

ಸಿದ್ದರಾಮಯ್ಯ ಅವರು ತಮ್ಮ ವಿರುದ್ಧದ ಆರೋಪಗಳು ಸುಳ್ಳು, ಆಧಾರರಹಿತ ಹಾಗೂ ತಮ್ಮ ರಾಜಕೀಯ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶ ಹೊಂದಿವೆ ಎಂದು ಅರ್ಜಿಯಲ್ಲಿ ವಾದಿಸಿದ್ದಾರೆ.

ಎರಡು ವಿಡಿಯೋಗಳ ಸುತ್ತ ವಿವಾದ

ವರದಿಗಳ ಪ್ರಕಾರ, ಸೆಪ್ಟೆಂಬರ್ 27ರಂದು ‘ಕರ್ನಾಟಕ ಹನಿಟ್ರ್ಯಾಪ್ ನೆಕ್ಸಸ್ ಪಾರ್ಟ್ 1’ ಎಂಬ ಶೀರ್ಷಿಕೆಯಡಿ ಯೂಟ್ಯೂಬ್‌ನಲ್ಲಿ ವಿಡಿಯೋ ಪ್ರಕಟಿಸಲಾಗಿತ್ತು. ಬಳಿಕ ಅಕ್ಟೋಬರ್ 2ರಂದು ‘ಫ್ರೀಡಂ ಟಿವಿ ಕನ್ನಡ’ದಲ್ಲಿ ‘ಬಿಗ್‌ ಸಿಡಿ ಬ್ಲಾಸ್ಟ್ ಇನ್ ಕರ್ನಾಟಕ ಪಾಲಿಟಿಕ್ಸ್?’ ಎಂಬ ಶೀರ್ಷಿಕೆಯ ಕಾರ್ಯಕ್ರಮ ಪ್ರಸಾರವಾಗಿತ್ತು. ಈ ವಿಡಿಯೋಗಳು ಮತ್ತು ಕಾರ್ಯಕ್ರಮದಲ್ಲಿ ಮಾಡಲಾದ ಹೇಳಿಕೆಗಳು ತಮ್ಮನ್ನು ವಿವಾದಕ್ಕೆ ಎಳೆದು ತರುವ ರೀತಿಯಲ್ಲಿವೆ ಎಂಬುದು ಸಿದ್ದರಾಮಯ್ಯ ಅವರ ಆಕ್ಷೇಪವಾಗಿದೆ.

ವಿಡಿಯೋಗಳಿಗೆ ಸಂಬಂಧಿಸಿದಂತೆ ಹನಿಟ್ರ್ಯಾಪ್ ಜಾಲ, ಬ್ಲ್ಯಾಕ್‌ಮೇಲ್ ಹಾಗೂ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಪ್ರಶ್ನೆಗಳನ್ನು ಎತ್ತಲಾಗಿದೆ ಎಂದು ವರದಿಗಳು ತಿಳಿಸಿವೆ. ಆದರೆ ಈ ವಿಡಿಯೋಗಳಲ್ಲಿ ಮಾಡಲಾದ ಆರೋಪಗಳು ಸತ್ಯವೆಂದು ಸ್ವತಂತ್ರವಾಗಿ ದೃಢಪಟ್ಟಿಲ್ಲ.

42 ಮಾಧ್ಯಮ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಮನವಿ

ಖಾಸಗಿ ಸುದ್ದಿ ವಾಹಿನಿಗಳು, ಪತ್ರಿಕೆಗಳು, ಡಿಜಿಟಲ್ ಸುದ್ದಿ ವೇದಿಕೆಗಳು ಮತ್ತು ಸಾಮಾಜಿಕ ಜಾಲತಾಣ ಕಂಪನಿಗಳು ಸೇರಿದಂತೆ ಒಟ್ಟು 42 ಪ್ರತಿವಾದಿಗಳನ್ನು ಅರ್ಜಿಯಲ್ಲಿ ಹೆಸರಿಸಲಾಗಿದೆ ಎಂದು ವರದಿಯಾಗಿದೆ. ವಿವಾದಿತ ವಿಡಿಯೋಗಳನ್ನು ಮಾತ್ರವಲ್ಲದೆ ಅವುಗಳ ತುಣುಕುಗಳು, ಸ್ಕ್ರೀನ್‌ಶಾಟ್‌ಗಳು, ಪ್ರತಿಲಿಪಿಗಳು ಹಾಗೂ ಆರೋಪಗಳನ್ನು ಮರುಪ್ರಕಟಿಸುವ ವರದಿಗಳ ಪ್ರಸಾರಕ್ಕೂ ತಡೆ ನೀಡಬೇಕೆಂದು ಸಿದ್ದರಾಮಯ್ಯ ಕೋರಿದ್ದರು.

ರಾಜಕೀಯ ವಲಯದಲ್ಲಿ ಚರ್ಚೆ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ಒಳಗೊಂಡಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಕುರಿತು ಹೇಳಿಕೆ ನೀಡಿದ ಬಳಿಕ ಈ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸ್ಟಿಂಗ್ ಆಪರೇಷನ್‌ನ ಹಿಂದೆ ಯಾರು ಇದ್ದಾರೆ ಎಂಬುದು ಬಹಿರಂಗವಾಗಬೇಕು ಎಂಬ ನಿಲುವನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಅವರಿಗೂ ದೂರು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

More articles

Latest article

Most read