ಕ್ಷೇತ್ರ ಪುನರ್ವಿಂಗಡಣೆ ಪ್ರಸ್ತಾವನೆ ಕುರಿತು ಸರ್ವಪಕ್ಷ ಸಭೆಗೆ ಖರ್ಗೆ ಆಗ್ರಹ: ಪ್ರಧಾನಿ ಮೋದಿಗೆ ನಾಲ್ಕನೇ ಬಾರಿ ಪತ್ರ

ನವದೆಹಲಿ: ಲೋಕಸಭೆ ಹಾಗೂ ವಿಧಾನಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಕೇಂದ್ರ ಸರ್ಕಾರದ ಪ್ರಸ್ತಾವನೆಗಳ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವಂತೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಕ್ರವಾರ ಮತ್ತೊಮ್ಮೆ ಪತ್ರ ಬರೆದಿದ್ದಾರೆ.

ಏಪ್ರಿಲ್‌ನಿಂದ ಈವರೆಗೆ ನಾಲ್ಕನೇ ಬಾರಿಗೆ ಪ್ರಧಾನಿಗೆ ಪತ್ರ ಬರೆದಿರುವ ಖರ್ಗೆ, ರಾಜಕೀಯ ಪಕ್ಷಗಳೊಂದಿಗೆ ವ್ಯಾಪಕ ಸಮಾಲೋಚನೆ ನಡೆಸದೆ ಮತ್ತೊಂದು ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಲು ಪ್ರಯತ್ನಿಸಬಾರದು ಎಂದು ಒತ್ತಾಯಿಸಿದ್ದಾರೆ.

ಸಂವಿಧಾನ ತಿದ್ದುಪಡಿ ಮಸೂದೆ ಸೋಲಿನ ಪ್ರಸ್ತಾಪ

ಏಪ್ರಿಲ್ 17ರಂದು ಲೋಕಸಭೆಯಲ್ಲಿ ಮಂಡಿಸಲಾಗಿದ್ದ ಕ್ಷೇತ್ರ ಪುನರ್ವಿಂಗಡಣೆಗೆ ಸಂಬಂಧಿಸಿದ ಸಂವಿಧಾನ ತಿದ್ದುಪಡಿ ಮಸೂದೆಗೆ ಅಗತ್ಯವಿದ್ದ ಮೂರನೇ ಎರಡರಷ್ಟು ಬಹುಮತ ದೊರೆಯದ ಕಾರಣ ಅದು ಅಂಗೀಕಾರವಾಗಿರಲಿಲ್ಲ ಎಂಬುದನ್ನು ಖರ್ಗೆ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಹಿಂದಿನ ಅನುಭವವನ್ನು ಗಮನದಲ್ಲಿಟ್ಟುಕೊಂಡು ಹೊಸ ಪ್ರಸ್ತಾವನೆಗಳನ್ನು ಅಂತಿಮಗೊಳಿಸುವ ಮೊದಲು ಎಲ್ಲ ರಾಜಕೀಯ ಪಕ್ಷಗಳ ಅಭಿಪ್ರಾಯಗಳನ್ನು ಪಡೆಯುವುದು ಅಗತ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

ಮೂರು ಬಾರಿ ಪತ್ರ ಬರೆದರೂ ಸಭೆ ಕರೆದಿಲ್ಲ: ಖರ್ಗೆ

ಕ್ಷೇತ್ರ ಪುನರ್ವಿಂಗಡಣೆ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯುವಂತೆ ಏಪ್ರಿಲ್ 11, ಜುಲೈ 16 ಮತ್ತು ಆಗಸ್ಟ್ 27ರಂದು ಪ್ರಧಾನಿಗೆ ಪತ್ರ ಬರೆದಿದ್ದಾಗಿ ಖರ್ಗೆ ತಿಳಿಸಿದ್ದಾರೆ.

ಆದರೆ ಕೇಂದ್ರ ಸರ್ಕಾರ ಯಾವುದೇ ಸರ್ವಪಕ್ಷ ಸಭೆ ನಡೆಸದೆ ಏಪ್ರಿಲ್ 14ರ ತಡರಾತ್ರಿ ಮಸೂದೆಗಳನ್ನು ಸಾರ್ವಜನಿಕಗೊಳಿಸಿತ್ತು. ಇದಾದ ಎರಡು ದಿನಗಳ ಬಳಿಕ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

ರಾಜಕೀಯ ಪಕ್ಷಗಳಿಗೆ ಚರ್ಚಿಸಲು ಸಮಯ ನೀಡಿ

ಕೇಂದ್ರ ಸರ್ಕಾರದ ಹೊಸ ಕ್ಷೇತ್ರ ಪುನರ್ವಿಂಗಡಣೆ ಪ್ರಸ್ತಾವನೆಗಳ ಕುರಿತು ರಾಜಕೀಯ ಪಕ್ಷಗಳು ಪರಸ್ಪರ ಹಾಗೂ ಸಂಬಂಧಪಟ್ಟ ವಿವಿಧ ಭಾಗೀದಾರರೊಂದಿಗೆ ಸಮಾಲೋಚನೆ ನಡೆಸಲು ಸಾಕಷ್ಟು ಸಮಯ ನೀಡಬೇಕು ಎಂದು ಖರ್ಗೆ ಆಗ್ರಹಿಸಿದ್ದಾರೆ.

ವ್ಯಾಪಕ ಚರ್ಚೆ ಮತ್ತು ಒಮ್ಮತದ ಪ್ರಯತ್ನಗಳ ಬಳಿಕವೇ ಹೊಸ ಪ್ರಸ್ತಾವನೆಗಳನ್ನು ಅಂತಿಮಗೊಳಿಸಿ ಸಂಸತ್ತಿನ ಪರಿಗಣನೆಗೆ ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಂಸತ್ತಿನ ಅಧಿವೇಶನ ಮುಂದೂಡಿ 64 ದಿನ: ಖರ್ಗೆ ಆಕ್ಷೇಪ

ಆಗಸ್ಟ್ 13ರಂದು ಸಂಸತ್ತಿನ ಮುಂಗಾರು ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ಅದಾಗಿ 64 ದಿನಗಳು ಕಳೆದಿದ್ದರೂ ಲೋಕಸಭೆ ಮತ್ತು ರಾಜ್ಯಸಭೆಯ ಅಧಿವೇಶನಗಳನ್ನು ಔಪಚಾರಿಕವಾಗಿ ಸಮಾಪ್ತಿಗೊಳಿಸುವ (Prorogation) ಕ್ರಮ ಕೈಗೊಂಡಿಲ್ಲ ಎಂಬ ವಿಚಾರವನ್ನೂ ಖರ್ಗೆ ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಈ ಪರಿಸ್ಥಿತಿಯನ್ನು ‘ಅಭೂತಪೂರ್ವ’ ಎಂದು ಬಣ್ಣಿಸಿರುವ ಅವರು, ಸಂಸತ್ತಿನ ಕಾರ್ಯನಿರ್ವಹಣೆಗೆ ಸಂಬಂಧಿಸಿದ ಈ ಬೆಳವಣಿಗೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರ ಪುನರ್ವಿಂಗಡಣೆಯಂತಹ ಮಹತ್ವದ ಸಾಂವಿಧಾನಿಕ ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಬೇಕು ಎಂಬುದು ಖರ್ಗೆ ಅವರ ಪ್ರಮುಖ ಆಗ್ರಹವಾಗಿದೆ.

More articles

Latest article

Most read