ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ ಕಡ್ಡಾಯ, ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಕಡ್ಡಾಯವಾಗಿ ಪ್ರದರ್ಶಿಸಬೇಕು: ಯು.ಟಿ. ಖಾದರ್

ಬೆಂಗಳೂರು, ಅ.23:  ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳು ಆಸ್ಪತ್ರೆಯ ಆವರಣದಲ್ಲಿ ಚಿಕಿತ್ಸಾ ದರಪಟ್ಟಿಯನ್ನು ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್‌ ಸೂಚನೆ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ದರಪಟ್ಟಿ ನಮೂದಿಸುವ ಸಂಬಂಧ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್‌ ಹೋಮ್ಸ್‌ ಅಸೋಸಿಯೇಷನ್‌ (ಫಾನಾ) ಜತೆ ಇತ್ತೀಚೆಗೆ ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸಚಿವ ಖಾದರ್, ಖಾಸಗಿ ಆಸ್ಪತ್ರೆಗಳು ರಾಜ್ಯದ ಆರೋಗ್ಯ ವ್ಯವಸ್ಥೆಯ ಪ್ರಮುಖ ಭಾಗ. ಆರೋಗ್ಯ ಸೇವೆ ಕೇವಲ ವ್ಯವಹಾರವಲ್ಲ, ಅದು ಸಮಾಜದ ಸೇವೆ. ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳು ಒಟ್ಟಾಗಿ ಆರೋಗ್ಯಕರ ಮತ್ತು ಸಮಾನತೆಯ ಸಮಾಜ ಕಟ್ಟುವ ಅಗತ್ಯವಿದೆ. ಪ್ರತಿಯೊಬ್ಬ ರೋಗಿಗೂ ಗುಣಮಟ್ಟದ ಚಿಕಿತ್ಸೆ ನ್ಯಾಯಯುತ ದರದಲ್ಲಿ ಸಿಗುವಂತೆ ಮಾಡುವುದೇ ನಮ್ಮೆಲ್ಲರ ಗುರಿಯಾಗಬೇಕು. ಈ ನಿಟ್ಟಿನಲ್ಲಿಆಸ್ಪತ್ರೆಗಳಲ್ಲಿದರ ಪಟ್ಟಿ ಕಡ್ಡಾಯವಾಗಿ ಪ್ರದರ್ಶಿಸಬೇಕಿದ್ದು, ಈ ನಿಯಮವನ್ನು ಎಲ್ಲಆಸ್ಪತ್ರೆಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಕ್ಯಾನ್ಸರ್‌ ಚಿಕಿತ್ಸೆಯ ಔಷಧಗಳ ದರ ಅತಿಯಾಗಿ ಏರಿಕೆಯಾಗಿದ್ದು, ರೋಗಿಗಳಿಂದ ಭಾರಿ ಮೊತ್ತದ ಹಣ ವಸೂಲಿ ಮಾಡಲಾಗುತ್ತಿರುವುದು ಔಷಧ ಆಡಳಿತ ಇಲಾಖೆ ನಡೆಸಿದ ತನಿಖೆಯಲ್ಲಿಕಂಡು ಬಂದಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮತ್ತು ಔಷಧ ದರಗಳಲ್ಲಿ ಪಾರದರ್ಶಕತೆ ತರಲು ಸರಕಾರ ಬದ್ಧವಾಗಿದೆ. ಅದೇ ರೀತಿ ಆಸ್ಪತ್ರೆಗಳು ನೀಡುವ ಚಿಕಿತ್ಸೆ ಹಾಗೂ ಖರೀದಿಸುವ ಔಷಧಗಳ ದರದಲ್ಲಿ ಪಾರದರ್ಶಕತೆ ಇರಬೇಕು. ಕಡಿಮೆ ದರದ ಲಾಭ ನೇರವಾಗಿ ರೋಗಿಗಳಿಗೆ ತಲುಪಬೇಕು ಎಂದು ತಿಳಿಸಿದರು.

ಆಸ್ಪತ್ರೆಗಳಲ್ಲಿ ಹೆಚ್ಚುವರಿ ದರ ವಸೂಲಿ ಮಾಡುತ್ತಿರುವ ಕುರಿತು ರಾಜ್ಯ ಸರಕಾರವು ಕೇಂದ್ರಕ್ಕೆ ಪತ್ರ ಬರೆದು ಗಮನಸೆಳೆದಿದೆ. ಖಾಸಗಿ ಆಸ್ಪತ್ರೆಗಳಲ್ಲಿಔಷಧಗಳಿಗೆ ಅಧಿಕ ದರ ವಿಧಿಸಿ ರೋಗಿಗಳನ್ನು ಶೋಷಿಸುತ್ತಿರುವ ಬಗ್ಗೆ ಸುಪ್ರೀಂಕೋರ್ಟ್‌ ಸಹ ತೀವ್ರ ಕಳವಳ ವ್ಯಕ್ತಪಡಿಸಿದೆ. ರಾಷ್ಟ್ರೀಯ ಔಷಧ ದರ ನಿಗದಿ ಪ್ರಾಧಿಕಾರವು ಈಗ ಬೆಲೆ ನಿಯಂತ್ರಣದ ಹೊರಗಿರುವ ಕ್ಯಾನ್ಸರ್‌ ಔಷಧಗಳ ವ್ಯಾಪಾರ ಲಾಭಾಂಶವನ್ನು ಗರಿಷ್ಠ ಚಿಲ್ಲರೆ ಬೆಲೆಯ (ಎಂಆರ್‌ಪಿ) ಶೇಕಡಾ 30 ಕ್ಕೆ ಮಿತಿಗೊಳಿಸಿ, ಅನುಮೋದನೆ ನೀಡಿದೆ. ಇದರಿಂದ ಕ್ಯಾನ್ಸರ್‌ ರೋಗಿಗಳ ಆರ್ಥಿಕ ಹೊರೆ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಹೇಳಿದರು.

ಅದೇ ರೀತಿ, ಹೃದಯ ಮತ್ತು ಮೂತ್ರಪಿಂಡ ಸೇರಿ ಗಂಭೀರ ಕಾಯಿಲೆಗಳಿಗೆ ಸಂಬಂಧಿಸಿದ ಔಷಧಗಳು ರೋಗಿಗಳಿಗೆ ನ್ಯಾಯಯುತ ದರದಲ್ಲಿ ತಲುಪುತ್ತಿವೆಯೇ ಎಂಬ ಬಗ್ಗೆ ಸರಕಾರ ಪರಿಶೀಲನೆ ನಡೆಸುತ್ತಿದೆ ಎಂದು ಅವರು ತಿಳಿಸಿದರು.

More articles

Latest article

Most read