ಕರ್ನಾಟಕದಲ್ಲಿ SIR ಪ್ರಕ್ರಿಯೆ ಅಂತ್ಯ ; ಅ.27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ ಸಾಧ್ಯತೆ

ಬೆಂಗಳೂರು,ಅ.23 : ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಗುರುವಾರಕ್ಕೆ ಮುಕ್ತಾಯಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಅ.27ರಂದು ಪ್ರಕಟಿಸುವ ನಿರೀಕ್ಷೆಯಿದೆ.

ಭಾರತ ಚುನಾವಣಾ ಆಯೋಗದ ವತಿಯಿಂದ ಕೈಗೊಳ್ಳಲಾಗುತ್ತಿರುವ 2026ರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಡಿ ಅಂತಿಮ ಮತದಾರರ ಪಟ್ಟಿಯ ಪ್ರಕಟಣೆ ಕುರಿತು ಮಾಹಿತಿ ನೀಡಲು ಮುಖ್ಯ ಚುನಾವಣಾಧಿಕಾರಿಗಳು ಇದೇ ಮಂಗಳವಾರ ಪತ್ರಿಕಾಗೋಷ್ಠಿಯನ್ನು ಕರೆದಿದ್ದು, ಅಂತಿಮ ಮತಪಟ್ಟಿ ಪ್ರಕಟಿಸುವ ನಿರೀಕ್ಷೆಗಳಿವೆ.

ಈ ನಡುವೆ, ಫಾರ್ಮ್-6 ಮೂಲಕ ಅರ್ಜಿ ಸಲ್ಲಿಸಿರುವ ಹಲವು ನಾಗರಿಕರಿಗೆ ಚುನಾವಣಾ ಗುರುತಿನ ಚೀಟಿ ಸಂಖ್ಯೆ (ಎಪಿಕ್)ಯನ್ನು ಎಸ್‌ಎಂಎಸ್‌ ಮೂಲಕ ಕಳುಹಿಸಲಾಗುತ್ತಿದೆ. ಮತದಾರರ ಪಟ್ಟಿಯಿಂದ ಹೊರಗುಳಿದವರನ್ನು ಮತ್ತೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಈ ಬೆಳವಣಿಗೆ ಮಹತ್ವ ಪಡೆದಿದೆ.

ಆದರೆ, ಹೊಸ ಮತದಾರರ ಸೇರ್ಪಡೆಗಾಗಿ ರೂಪಿಸಲಾದ ಫಾರ್ಮ್-6 ಅನ್ನು ಈಗಾಗಲೇ ಮತದಾರರಾಗಿದ್ದರೂ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೆಸರು ಕೈಬಿಟ್ಟಿರುವವರು ಬಳಸಬಹುದೇ ಎಂಬ ಗೊಂದಲ ಹಲವು ನಾಗರಿಕರಲ್ಲಿ ಮುಂದುವರಿದಿದೆ. ಚುನಾವಣಾ ಆಯೋಗದ ಪ್ರಕ್ರಿಯೆ, ಅರ್ಹತಾ ಮಾನದಂಡಗಳು ಮತ್ತು ಅರ್ಜಿಗಳ ವಿಲೇವಾರಿ ಕುರಿತು ಸ್ಪಷ್ಟತೆ ನೀಡಬೇಕೆಂಬ ಒತ್ತಾಯವೂ ಕೇಳಿಬರುತ್ತಿದೆ.

ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗುವ ನಿರೀಕ್ಷೆಯಿರುವುದರಿಂದ, ಫಾರ್ಮ್-6 ಸಲ್ಲಿಸಿರುವವರು ತಮ್ಮ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸುವುದರ ಜೊತೆಗೆ ಅಂತಿಮ ಪಟ್ಟಿಯಲ್ಲಿ ಹೆಸರು ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಎಸ್‌ಐಆರ್‌ ಪ್ರಕ್ರಿಯೆಯ ಅಂತ್ಯವು ಕೇವಲ ಮತದಾರರ ಪಟ್ಟಿಯ ಪ್ರಕಟಣೆಯಲ್ಲ.ಅರ್ಹ ಮತದಾರರ ಹೆಸರುಗಳು ಯಾವುದೇ ಅನಗತ್ಯ ಅಡೆತಡೆಯಿಲ್ಲದೆ ಪಟ್ಟಿಯಲ್ಲಿ ಉಳಿದಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವ ಮಹತ್ವದ ಹಂತವೂ ಆಗಿದೆ.

More articles

Latest article

Most read