ಮಹರ್ಷಿ ವಾಲ್ಮೀಕಿ ಜಯಂತಿ ಭವ್ಯ ಮೆರವಣಿಗೆಗೆ ಚಾಲನೆ ನೀಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಅ.26 : ನಗರದ ಪ್ರಸಿದ್ಧ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಭವ್ಯ ಮೆರವಣಿಗೆಗೆ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಚಾಲನೆ ನೀಡಿ, ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ಜ್ಞಾನ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳು ಮತ್ತು ಜೀವನ ಸಂದೇಶಗಳು ಇಡೀ ಸಮಾಜಕ್ಕೆ ಸದಾ ದಾರಿ ದೀಪ ಹಾಗೂ ಪ್ರೇರಣೆಯಾಗಿವೆ. ರಾಮಾಯಣ ಮಹಾಕಾವ್ಯದ ಮೂಲಕ ಜಗತ್ತಿಗೆ ಶಾಂತಿ, ಸಮಾನತೆ ಮತ್ತು ನೈತಿಕ ಮೌಲ್ಯಗಳನ್ನು ಸಾರಿದ ವಾಲ್ಮೀಕಿ ಅವರ ತತ್ವಗಳು ಪ್ರತಿಯೊಬ್ಬರಿಗೂ ದಾರಿದೀಪವಾಗಿದ್ದು, ಸಮಾಜದಲ್ಲಿ ಶೋಷಿತ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ವಾಲ್ಮೀಕಿಯವರ ಆಶಯಗಳು ಮುಖ್ಯ ಶಕ್ತಿಯಾಗಿವೆ ಎಂದರು.

ಈ  ಕಾರ್ಯಕ್ರಮದಲ್ಲಿ ಶಾಸಕರಾದ   ಜಿ.ಟಿ. ದೇವೇಗೌಡ, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ  ಸಿ.ಎನ್. ಮಂಜೇಗೌಡ, ಮೈಸೂರು ಜಿಲ್ಲಾಧಿಕಾರಿ  ಜಿ. ಲಕ್ಷ್ಮಿಕಾಂತ ರೆಡ್ಡಿ ಸೇರಿದಂತೆ ವಾಲ್ಮೀಕಿ ಸಮಾಜದ ಹಿರಿಯ ಮುಖಂಡರು, ವಿವಿಧ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

More articles

Latest article

Most read