ಸೌಜನ್ಯ ಪ್ರಕರಣ: ಮರು ತನಿಖೆ ಚುರುಕು, ಹಿಂದಿನ ತನಿಖಾಧಿಕಾರಿಗಳ ವಿಚಾರಣೆ

ಮಂಗಳೂರು : ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT), ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳ ವಿಚಾರಣೆ ಆರಂಭಿಸಿದೆ.

ಹಿಂದೆ ತನಿಖಾಧಿಕಾರಿಯಾಗಿದ್ದ ಇನ್ಸ್‌ಪೆಕ್ಟರ್ ಭಾಸ್ಕರ್ ರೈ, ಧರ್ಮಸ್ಥಳ ಪೊಲೀಸ್ ಠಾಣೆಯ ಆಗಿನ ಸಬ್‌ಇನ್‌ಸ್ಪೆಕ್ಟರ್ ಯೋಗೀಶ್ ಹಾಗೂ ನಿವೃತ್ತ ಡಿವೈಎಸ್‌ಪಿ ರುದ್ರಮುನಿ ಮಂಗಳೂರಿನಲ್ಲಿರುವ SIT ಕಚೇರಿಗೆ ಆಗಮಿಸಿದ್ದಾರೆ.

ಸೌಜನ್ಯ ಪ್ರಕರಣದ ಹಿಂದಿನ ತನಿಖೆಯಲ್ಲಿ ಲೋಪಗಳು ನಡೆದಿವೆ ಮತ್ತು ಸಾಕ್ಷ್ಯನಾಶವಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಹಿಂದಿನ ತನಿಖೆಯಲ್ಲಿನ ಲೋಪಗಳ ಕುರಿತು SIT ಅಧಿಕಾರಿಗಳು ಮಾಹಿತಿ ಸಂಗ್ರಹಿಸಲಿದ್ದಾರೆ.

ಪ್ರಕರಣದ ಮರು ತನಿಖೆಯ ಭಾಗವಾಗಿ ಹಿಂದಿನ ತನಿಖಾಧಿಕಾರಿಗಳನ್ನೇ ವಿಚಾರಣೆಗೆ ಒಳಪಡಿಸುತ್ತಿರುವುದು ಮಹತ್ವದ ಬೆಳವಣಿಗೆಯಾಗಿದೆ.

More articles

Latest article

Most read