ಮೈಸೂರು, ಅ.29 : ನವೆಂಬರ್ 26 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅತ್ಯಂತ ವಿಜೃಂಭಣೆಯಿಂದ ‘ರಾಜ್ಯ ಮಟ್ಟದ ಸಂವಿಧಾನ ದಿನ’ವನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಗೃಹ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಈ ಮಹತ್ವದ ಸಭೆಯಲ್ಲಿ, ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ರಾಜ್ಯಮಟ್ಟದಲ್ಲಿ ಯಶಸ್ವಿಯಾಗಿ ಆಯೋಜಿಸುವ ಬಗ್ಗೆ ವಿವರವಾದ ಚರ್ಚೆ ನಡೆಸಲಾಯಿತು. ಹಳೆ ಮೈಸೂರು ಭಾಗದ ಶಾಸಕರು ಹಾಗೂ ಸಚಿವರು ಭಾಗವಹಿಸಿದ್ದರು.
ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದರು. ಈ ವೇಳೆ, ಸ್ಟಿಂಗ್ ಬಗ್ಗೆ ಖುದ್ದು ಪ್ರಸ್ತಾಪಿಸಿದ ಅವರು, ಈ ವರೆಗೂ ಯಾರನ್ನು ಬಂಧಿಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ.

