ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖೆಯ ಕುರಿತು ಆರ್. ಅಶೋಕ್‌ಗೆ ಸೌಜನ್ಯ ಹೋರಾಟಗಾರ ಜಯಂತ್ ದೂರು

ಬೆಳ್ತಂಗಡಿ ಅ. 30: ಧರ್ಮಸ್ಥಳದಲ್ಲಿ ನಡೆದಿರುವ ಸಾಮೂಹಿಕ ಅಂತ್ಯಕ್ರಿಯೆಗೆ ಸಂಬಂಧಿಸಿದ ಪ್ರಕರಣಗಳ ತನಿಖೆಯಲ್ಲಿ ಹಲವು ಲೋಪಗಳು ನಡೆದಿವೆ ಎಂದು ಆರೋಪಿಸಿರುವ ಜಯಂತ್ ಅವರು, ಈ ಕುರಿತು ಸಮಗ್ರ ತನಿಖೆ ನಡೆಸಲು ಧ್ವನಿ ಎತ್ತುವಂತೆ ಆಗ್ರಹಿಸಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ಸುದೀರ್ಘ ಮನವಿ ಸಲ್ಲಿಸಿದ್ದಾರೆ.

2026ರ ಅಕ್ಟೋಬರ್ 23ರಂದು ಸಲ್ಲಿಸಿರುವ ಈ ಮನವಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 39/2025, ಯುಡಿಆರ್ ಪ್ರಕರಣಗಳು ಹಾಗೂ ವಿಶೇಷ ತನಿಖಾ ತಂಡದ (SIT) ಮುಂದುವರಿದ ತನಿಖೆಗೆ ಸಂಬಂಧಿಸಿದ ಹಲವು ಗಂಭೀರ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.

ಈ ಹಿಂದೆ ನಡೆದ ತನಿಖೆಗಳಲ್ಲಿನ ಲೋಪಗಳು, ಪ್ರಮುಖ ಸಾಕ್ಷ್ಯಗಳ ಪರಿಶೀಲನೆಯಲ್ಲಿನ ನಿರ್ಲಕ್ಷ್ಯ, ತನಿಖಾಧಿಕಾರಿಗಳ ಹೊಣೆಗಾರಿಕೆ ಹಾಗೂ ಸಾಮೂಹಿಕ ಅಂತ್ಯಕ್ರಿಯೆಗೆ ಸಂಬಂಧಿಸಿದ ಪ್ರಕರಣಗಳಲ್ಲಿನ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ವಿಶೇಷವಾಗಿ, 2025ರ ಜುಲೈ 14, ಅಕ್ಟೋಬರ್ 29, ಅಕ್ಟೋಬರ್ 31 ಹಾಗೂ 2026ರ ಜನವರಿ 12 ಮತ್ತು ಆಗಸ್ಟ್ 6ರಂದು ಹೊರಡಿಸಲಾದ ಪೊಲೀಸ್ ಮತ್ತು ಸರ್ಕಾರದ ಆದೇಶಗಳು, ಎಸ್‌ಐಟಿ ರಚನೆ ಹಾಗೂ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಉಲ್ಲೇಖಿಸಿದ್ದಾರೆ.

ಸಾಮೂಹಿಕ ಅಂತ್ಯಕ್ರಿಯೆಗೆ ಸಂಬಂಧಿಸಿದಂತೆ 1,510 ಸಂಖ್ಯೆಯುಳ್ಳ ಎಲುಬು ಮತ್ತು ದೇಹದ ಅವಶೇಷಗಳ ಮೂಲ, ಅವುಗಳ ವೈಜ್ಞಾನಿಕ ಪರಿಶೀಲನೆ, ಡಿಎನ್‌ಎ ಪರೀಕ್ಷೆ ಹಾಗೂ ಸಂಬಂಧಿತ ದಾಖಲೆಗಳನ್ನು ಸ್ವತಂತ್ರವಾಗಿ ಪರಿಶೀಲಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅಲ್ಲದೆ, ಹಿಂದಿನ ತನಿಖೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳ ಪಾತ್ರ, ಸಾಕ್ಷ್ಯಗಳ ನಿರ್ವಹಣೆ, ತನಿಖೆಯಲ್ಲಿನ ನಿರ್ಲಕ್ಷ್ಯ ಮತ್ತು ಸಂಭಾವ್ಯ ಸಾಕ್ಷ್ಯನಾಶದ ಆರೋಪಗಳ ಬಗ್ಗೆಯೂ ಪರಿಶೀಲನೆ ನಡೆಸುವಂತೆ ಕೋರಿದ್ದಾರೆ. ಈ ಸಂಬಂಧ ಸುಪ್ರೀಂ ಕೋರ್ಟ್‌ನ ವಿವಿಧ ತೀರ್ಪುಗಳು ಹಾಗೂ ಭಾರತೀಯ ನ್ಯಾಯ ಸಂಹಿತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸಂಬಂಧಿತ ಕಾನೂನು ವಿಧಿಗಳನ್ನು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಸರ್ಕಾರದಿಂದಲೇ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ನಡೆಯುವಂತೆ ನೋಡಿಕೊಳ್ಳಬೇಕು. ಎಸ್‌ಐಟಿ ತನಿಖೆಯ ಪ್ರಗತಿ, ತನಿಖಾಧಿಕಾರಿಗಳ ಹೊಣೆಗಾರಿಕೆ ಮತ್ತು ಸಾರ್ವಜನಿಕರಿಗೆ ಲಭ್ಯವಾಗಬೇಕಾದ ಮಾಹಿತಿಯ ಕುರಿತು ಸ್ಪಷ್ಟತೆ ನೀಡಬೇಕು ಎಂಬುದು ಜಯಂತ್ ಅವರ ಪ್ರಮುಖ ಆಗ್ರಹವಾಗಿದೆ.

ಸ್ಥಳೀಯ ಶಾಸಕರಿಗೂ ಮನವಿ ಸಲ್ಲಿಕೆ

ಆರ್. ಅಶೋಕ್ ಅವರಿಗೆ ಮನವಿ ಸಲ್ಲಿಸಿರುವುದರ ಜೊತೆಗೆ, ಇದೇ ಪತ್ರವನ್ನು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಸೇರಿದಂತೆ ಹಲವು ಜನಪ್ರತಿನಿಧಿಗಳಿಗೂ ಜಯಂತ್ ಅವರು ಸಲ್ಲಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಜನಪ್ರತಿನಿಧಿಗಳ ಗಮನಕ್ಕೆ ತಂದು, ತನಿಖೆಯಲ್ಲಿನ ಲೋಪಗಳ ಕುರಿತು ಸರ್ಕಾರದ ಗಮನ ಸೆಳೆಯುವುದು ಹಾಗೂ ಸೂಕ್ತ ಕ್ರಮಕ್ಕೆ ಒತ್ತಡ ತರುವುದು ಈ ಮನವಿಯ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

More articles

Latest article

Most read