ಉತ್ತರಾಖಂಡ ಹೆಲಿಕಾಪ್ಟರ್ ದುರಂತ : ಮೃತ ಕನ್ನಡಿಗರ ಪಾರ್ಥಿವ ಶರೀರ ಬೆಂಗಳೂರಿಗೆ ಆಗಮನ

ಬೆಂಗಳೂರು/ಹಾಸನ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಬದರಿನಾಥ ಸಮೀಪ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಪಾರ್ಥಿವ ಶರೀರಗಳು ಭಾನುವಾರ ರಾತ್ರಿ ಬೆಂಗಳೂರಿಗೆ ತಲುಪಿವೆ. ಪ್ರತಾಪ್ ಗೌಡ, ಶಂಕರ್ ಗೌಡ, ಸುಧೀರ್ ಕೆ. ಹಾಗೂ ನಟರಾಜ್ ಅವರ ಮೃತದೇಹಗಳು ರಾತ್ರಿ 10.50ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ಕ್ಕೆ ಆಗಮಿಸಿವೆ. ಇದೀಗ ಅವರ ಕುಟುಂಬಕ್ಕೆ ಮೃತದೇಹಗಳು ತಲುಪಿವೆ.

ಸಿಸಿಬಿ ಇನ್ಸ್‌ಪೆಕ್ಟರ್ ಅರುಣ್ ಸಾಲುಂಕೆ ಅವರ ಪಾರ್ಥಿವ ಶರೀರವನ್ನು ಗೋವಾ ಮಾರ್ಗವಾಗಿ ಬೆಳಗಾವಿಗೆ ಕೊಂಡೊಯ್ಯಲಾಗಿದೆ. ಡಿಎನ್‌ಎ ಪರೀಕ್ಷೆಯ ಮೂಲಕ ಮೃತರ ಗುರುತು ದೃಢಪಡಿಸಿದ ಬಳಿಕ ಪಾರ್ಥಿವ ಶರೀರಗಳನ್ನು ರಾಜ್ಯಕ್ಕೆ ರವಾನಿಸಲಾಗಿದೆ.

ಸ್ವಗ್ರಾಮಗಳಿಗೆ ತಲುಪಿಸಲು ವ್ಯವಸ್ಥೆ

ಮೃತರ ಪಾರ್ಥಿವ ಶರೀರಗಳನ್ನು ಗೌರವಪೂರ್ವಕವಾಗಿ ಅವರ ಸ್ವಗ್ರಾಮಗಳಿಗೆ ತಲುಪಿಸಲು ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಹಾಸನ ಸಂಸದ ಶ್ರೇಯಸ್ ಎಂ. ಪಟೇಲ್ ತಿಳಿಸಿದ್ದಾರೆ.

ನವೆಂಬರ್ 1ರ ರಾತ್ರಿ 7.50ಕ್ಕೆ ಡೆಹ್ರಾಡೂನ್‌ನ ಜಾಲಿ ಗ್ರಾಂಟ್ ವಿಮಾನ ನಿಲ್ದಾಣದಿಂದ ಹೊರಟ ವಿಮಾನ, ರಾತ್ರಿ 10.50ಕ್ಕೆ ಬೆಂಗಳೂರಿಗೆ ತಲುಪಿದೆ. ಮೃತದೇಹಗಳನ್ನು ಸ್ವಗ್ರಾಮಗಳಿಗೆ ಸಾಗಿಸಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿರುವುದಾಗಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಲಿಕಾಪ್ಟರ್ ದುರಂತದ ಕುರಿತು ಸಮಗ್ರ ತನಿಖೆ ನಡೆಸಿ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಯಾತ್ರಾರ್ಥಿಗಳ ಸುರಕ್ಷತೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಕರಿಸಿದ ಉತ್ತರಾಖಂಡ ಸರ್ಕಾರ, ಎಸ್‌ಡಿಆರ್‌ಎಫ್, ಪೊಲೀಸ್ ಇಲಾಖೆ ಹಾಗೂ ಚಮೋಲಿ ಮತ್ತು ಡೆಹ್ರಾಡೂನ್ ಜಿಲ್ಲಾಡಳಿತಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

ಪ್ರತಾಪ್ ಗೌಡ ಅಂತಿಮ ದರ್ಶನಕ್ಕೆ ವ್ಯವಸ್ಥೆ

ದುರಂತದಲ್ಲಿ ಮೃತಪಟ್ಟ ಹಾಸನ ಮೂಲದ ಪ್ರತಾಪ್ ಗೌಡ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಥಣಿಸಂದ್ರದಲ್ಲಿರುವ ನಿವಾಸದಲ್ಲಿ ಮಧ್ಯರಾತ್ರಿ 12ರಿಂದ ಬೆಳಗಿನ ಜಾವ 4 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸೋಮವಾರ ಬೆಳಗಿನ ಜಾವ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯಲಾಗುತ್ತದೆ. ಮಾರ್ಗಮಧ್ಯೆ ಚನ್ನರಾಯಪಟ್ಟಣ, ಶಾಂತಿಗ್ರಾಮ, ಹಾಸನ, ಬಾಳುಪೇಟೆ ಹಾಗೂ ಸಕಲೇಶಪುರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 4 ಗಂಟೆಗೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

More articles

Latest article

Most read