ವಕೀಲರ ವಿರುದ್ಧ ನ್ಯಾಯಂಗ ನಿಂದನೆ ದಾಖಲಿಸಿದ ಹೈಕೋರ್ಟ್‌

ಬೆಂಗಳೂರು, ನ.04 : ವಕೀಲರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಗಟ್ಟಿ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಬೆಂಗಳೂರು ವಕೀಲರ ಸಂಘದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ಆದರೆ, ಕೆಲವರು ಮುಖ್ಯನ್ಯಾಯಮೂರ್ತಿ ಸಭಾಂಗಣಕ್ಕೆ ನುಗ್ಗಿ ಗದ್ದಲ ಸೃಷ್ಟಿಸಿದ ಪರಿಣಾಮ ಅಂತಹವರ ವಿರುದ್ಧ ಹೈಕೋರ್ಟ್‌ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದೆ.

ಬೆಂಗಳೂರು ನಗರದಲ್ಲಿ ಇತ್ತೀಚೆಗೆ ನಡೆದಿರುವ ಇಬ್ಬರು ವಕೀಲರ ಕೊಲೆ ಹಾಗೂ ವೃತ್ತಿಪರ ವಕೀಲರ ಮೇಲಿನ ದೌರ್ಜನ್ಯ ಖಂಡಿಸಿ ವಕೀಲರಿಗೆ ಸೂಕ್ತ ಭದ್ರತೆ ಹಾಗೂ ಪರಿಣಾಮಕಾರಿ ಕಾನೂನು ರಚನೆ ಒದಗಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ವಕೀಲರ ಸಂಘದ ವತಿಯಿಂದ ಇಂದು ಹೈಕೋರ್ಟ್‌ ಎದುರು ಪ್ರತಿಭಟನೆ ನಡೆಸಲಾಯಿತು.

ವಕೀಲರು ನ್ಯಾಯಾಲಯದ ಕಾಲಪವನ್ನು ಬಹಿಷ್ಕರಿಸಿದ್ದರು. ಹೈಕೋರ್ಟ್ ಮುಂಭಾಗ ಮತ್ತು ಸಿಟಿ ಸಿವಿಲ್ ನ್ಯಾಯಾಲಯ, ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಹಾಗೂ ಮೆಯೋ ಹಾಲ್‌ ಕೋರ್ಟ್‌ಗಳ ಆವರಣದಲ್ಲಿ ನೂರಾರು ವಕೀಲರು ಭಾಗವಹಿಸಿದ್ದು, ವಕೀಲರಿಗೆ ರಕ್ಷಣೆ ಒದಗಿಸಬೇಕು ಮತ್ತು ವಕೀಲರ ಮೇಲೆ ಹಲ್ಲೆ ಮತ್ತು ದೌರ್ಜನ್ಯದಂತಹ ಕೃತ್ಯಗಳಲ್ಲಿ ಭಾಗಿಯಾಗುವವರಿಗೆ ಕಠಿಣ ಶಿಕ್ಷೆ ವಿಧಿಸುವಂತಹ ಕಾನೂನುಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ವೈಟ್‌ಫೀಲ್ಡ್‌ನಲ್ಲಿ ವಕೀಲ ಮಂಜುನಾಥ್‌ ಹತ್ಯೆ, ಅನ್ನಪೂರ್ಣೇಶ್ವರಿನಗರದ ವಕೀಲ ಶ್ರೀರಾಮ್‌ ಕೊಲೆ, ಗೌರಿಬಿದನೂರಿನ ವಕೀಲ ವೆಂಕಟರಮಣ ಸಣ್ಣಕ್ಕಿ ಮೇಲಿನ ಕೊಲೆ ಯತ್ನ ಸೇರಿದಂತೆ ಅನೇಕ ಘಟನೆಗಳು ನಡೆದಿರುವುದು ವಕೀಲರ ಸುರಕ್ಷತೆಯ ಬಗ್ಗೆ ಅತ್ಯಂತ ಆತಂಕ ಮೂಡಿಸಿವೆ. ಅದಕ್ಕಾಗಿ ಪರಿಣಾಮಕಾರಿ ಕಾನೂನು ರಕ್ಷಣೆ ಒದಗಿಸಬೇಕು ಎಂಬದು ವಕೀಲರ ಆಗ್ರಹವಾಗಿತ್ತು.

ವಕೀಲರ ರಕ್ಷಣೆಯ ಕುರಿತಾದ ಮನವಿಯನ್ನು ನ್ಯಾಯಮೂರ್ತಿ ಡಿ.ಕೆ.ಸಿಂಗ್ ಹಾಗೂ ನ್ಯಾಯಮೂರ್ತಿ ಎಚ್‌.ಶಾಂತಿಭೂಷಣ್‌ ಅವರಿದ್ದ ದ್ವಿಸದಸ್ಯ ನ್ಯಾಯಪೀಠದ ಮುಂದೆ ತಮ್ಮ ಅಹವಾಲು ಮಂಡಿಸಿದರು. ವಕೀಲರ ಮನವಿ ಸ್ವೀಕರಿಸಿ ಸ್ವೀಕರಿಸಿದ ನ್ಯಾಯಪೀಠ, ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಳ್ಳುವುದಾಗಿ ತಿಳಿಸಿತು.

ಆದರೆ, ಈ ಮಧ್ಯೆ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ನ್ಯಾಯಾಲಯದ ಸಭಾಂಗಣದಲ್ಲಿ ಗದ್ದಲ ಸೃಷ್ಟಿಸಿದ ಕೆಲ ವಕೀಲರ ವಿರುದ್ಧ ಹೈಕೋರ್ಟ್‌ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ರಿಜಿಸ್ಟ್ರಿಗೆ ನಿರ್ದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರನ್ನೊಳಗೊಂಡ ವಿಭಾಗೀಯ ಪೀಠವು ನ್ಯಾಯಾಲಯದ ಕಲಾಪಕ್ಕೆ ಅಡ್ಡಿಪಡಿಸಿದ ವಕೀಲರ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಬೆಂಗಳೂರು ವಕೀಲರ ಸಂಘಕ್ಕೆ ನೋಟಿಸ್ ಜಾರಿಗೊಳಿಸಿದೆ. ಅಲ್ಲದೆ, ಇದು ಕೆಲವರ ಈ ವರ್ತನೆಯು ನ್ಯಾಯಾಂಗ ನಿಂದನೆಗೆ ಸಮಾನವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. 

More articles

Latest article

Most read