‘ಮತಗಳ್ಳತನ’ ಆರೋಪಕ್ಕೆ ಉತ್ತರಿಸಿ, ಬಹಿರಂಗ ಚರ್ಚೆಗೆ ಬನ್ನಿ: ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸವಾಲು

ನವದೆಹಲಿ: ‘ಮತಗಳ್ಳತನ’ದ ಆರೋಪಗಳಿಗೆ ಉತ್ತರಿಸುವಂತೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಬಹಿರಂಗ ಚರ್ಚೆಯ ಸವಾಲನ್ನು ಸ್ವೀಕರಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಬುಧವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, ಚುನಾವಣಾ ಅಕ್ರಮಗಳ ಆರೋಪಗಳಿಗೆ ಪ್ರಧಾನಿ ಬಳಿ ಉತ್ತರವಿಲ್ಲ. ವಿದೇಶಿ ಶಕ್ತಿಗಳಿಗೆ ಭಾರತದ ಹಿತಾಸಕ್ತಿಗಳನ್ನು ಒತ್ತೆ ಇಟ್ಟಿರುವ ಆರೋಪ ಸೇರಿದಂತೆ ಹಲವು ವಿಚಾರಗಳ ಕುರಿತು ರಾಹುಲ್ ಗಾಂಧಿ ಅವರೊಂದಿಗೆ ಬಹಿರಂಗ ಚರ್ಚೆಗೆ ಮೋದಿ ಸಿದ್ಧರಾಗಬೇಕು ಎಂದು ಆಗ್ರಹಿಸಿದ್ದಾರೆ.

“ಪ್ರಧಾನಿ ಮೋದಿ ಮತ್ತೆ ತಮ್ಮ ವಿಫಲ ‘ದಿಮಾಗಿ ನಕ್ಸಲ್’ ಹೇಳಿಕೆಯನ್ನೇ ಪುನರಾವರ್ತಿಸುತ್ತಿದ್ದಾರೆ. ಮತಗಳ್ಳತನದ ಆರೋಪಗಳಿಗೆ ಹಾಗೂ ವಿದೇಶಿ ಶಕ್ತಿಗಳಿಗೆ ಭಾರತದ ಹಿತಾಸಕ್ತಿಗಳನ್ನು ಒತ್ತೆ ಇಟ್ಟಿರುವ ಕುರಿತು ರಾಹುಲ್ ಗಾಂಧಿ ನೀಡಿರುವ ಬಹಿರಂಗ ಚರ್ಚೆಯ ಸವಾಲಿಗೆ ಅವರ ಬಳಿ ಉತ್ತರವಿಲ್ಲ” ಎಂದು ಖರ್ಗೆ ಟೀಕಿಸಿದ್ದಾರೆ.

ಅಮಿತ್ ಶಾ ಹೇಳಿಕೆಗೂ ಖರ್ಗೆ ಪ್ರಶ್ನೆ

ಮೂರು ಕೋಟಿ ಮತದಾರರು ‘ನುಸುಳುಕೋರರು’ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಖರ್ಗೆ ಪ್ರಶ್ನಿಸಿದ್ದಾರೆ. ಅಕ್ರಮ ವಲಸೆಯನ್ನು ತಡೆಯಲು ತಮ್ಮ ಅಧಿಕಾರಾವಧಿಯಲ್ಲಿ ಅಮಿತ್ ಶಾ ಏನು ಕ್ರಮ ಕೈಗೊಂಡಿದ್ದಾರೆ ಎಂದು ಪ್ರಶ್ನಿಸಿರುವ ಅವರು, ಈ ವಿಚಾರದಲ್ಲಿ ಗೃಹ ಸಚಿವರು ತಮ್ಮ ವೈಫಲ್ಯಕ್ಕೆ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

SIR ಪ್ರಕ್ರಿಯೆಯಲ್ಲಿ ಐದು ಬಾರಿ ಯೂಟರ್ನ್ ಆರೋಪ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಬಗ್ಗೆಯೂ ಚುನಾವಣಾ ಆಯೋಗದ ವಿರುದ್ಧ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಐದು ಬಾರಿ ತನ್ನ ನಿರ್ಧಾರ ಬದಲಿಸಿದೆ ಎಂದು ಆರೋಪಿಸಿದ್ದಾರೆ.

ವಿಶೇಷವಾಗಿ ಫಾರ್ಮ್-6ರಲ್ಲಿ ಸಂಪೂರ್ಣ ಬದಲಾವಣೆ ಮಾಡಿರುವುದರ ಹಿಂದಿನ ಕಾರಣವೇನು ಎಂದು ಪ್ರಶ್ನಿಸಿದ್ದಾರೆ. ಈ ಕ್ರಮ ಕಾನೂನುಬಾಹಿರ ಎಂದು ಸಹ ಚುನಾವಣಾ ಆಯುಕ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ಖರ್ಗೆ ಹೇಳಿದ್ದಾರೆ.

ಸಂಸತ್ತಿಗೆ ಬಾರದ ಪ್ರಧಾನಿ ಎಂದು ಟೀಕೆ

ಕೇಂದ್ರ ಸರ್ಕಾರ ಸಂಸತ್ತಿನ ಕಲಾಪಗಳಿಂದಲೂ ದೂರ ಉಳಿಯುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ. ಹಿಂದಿನ ಸಂಸತ್ ಅಧಿವೇಶನ ಮುಕ್ತಾಯಗೊಂಡು 83 ದಿನಗಳಾದರೂ ಅದನ್ನು ಅಧಿಕೃತವಾಗಿ ಮುಂದೂಡಲಾಗಿಲ್ಲ. ಇದೇ ವೇಳೆ ಮುಂದಿನ ಅಧಿವೇಶನದ ಸಿದ್ಧತೆಗಳು ನಡೆಯುತ್ತಿದ್ದು, ವಿಶೇಷ ಅಧಿವೇಶನಕ್ಕೂ ಒತ್ತಾಯ ಕೇಳಿಬಂದಿದೆ ಎಂದು ಅವರು ಪ್ರಸ್ತಾಪಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಸಾರ್ವಜನಿಕವಾಗಿ ಮಹಾಭಿಯೋಗ ಪ್ರಕ್ರಿಯೆಗೆ ಮುಂದಾಗಿರುವುದು ಹಾಗೂ ರಾಮಲೀಲಾ ಮೈದಾನದಲ್ಲಿ ನಡೆದ ‘ಮತ ಉಳಿಸಿ’ ರ‍್ಯಾಲಿ ಬಿಜೆಪಿ ನಾಯಕರಲ್ಲಿ ಆತಂಕ ಮೂಡಿಸಿದೆ ಎಂದು ಖರ್ಗೆ ಆರೋಪಿಸಿದ್ದಾರೆ.

“ನೀವು ಸಂಸತ್ತಿಗೆ ಬರುವುದಿಲ್ಲ. ಒಂದೇ ಒಂದು ಮುಕ್ತ ಪತ್ರಿಕಾಗೋಷ್ಠಿಯನ್ನೂ ನಡೆಸಿಲ್ಲ. ಈಗ ಬಹಿರಂಗ ಚರ್ಚೆಗೆ ಬರುವ ಸಮಯ ಬಂದಿದೆ. ಮುಂದೆ ಬನ್ನಿ, ಪ್ರಶ್ನೆಗಳನ್ನು ಎದುರಿಸಿ. ಮತಗಳ್ಳತನದಲ್ಲಿ ಏಕೆ ತೊಡಗಿದ್ದೀರಿ ಎಂಬುದನ್ನು ದೇಶಕ್ಕೆ ತಿಳಿಸಿ” ಎಂದು ಮೋದಿ ಅವರಿಗೆ ಖರ್ಗೆ ಸವಾಲು ಹಾಕಿದ್ದಾರೆ.

ರಾಹುಲ್ ಗಾಂಧಿಯಿಂದಲೂ ಬಹಿರಂಗ ಚರ್ಚೆಗೆ ಆಹ್ವಾನ

ಮಂಗಳವಾರ ರಾಹುಲ್ ಗಾಂಧಿ ಕೂಡ ಪ್ರಧಾನಿ ಮೋದಿಗೆ ಬಹಿರಂಗ ಚರ್ಚೆಯ ಸವಾಲು ಹಾಕಿದ್ದರು. ಪ್ರತಿಪಕ್ಷಗಳು ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿವೆ ಎಂಬ ಪ್ರಧಾನಿಯ ಆರೋಪದ ಕುರಿತು ಚರ್ಚೆಗೆ ಸಿದ್ಧರಿದ್ದೀರಾ ಎಂದು ಪ್ರಶ್ನಿಸಿದ್ದರು.

ಪ್ರಧಾನಿಯವರ ವಿದೇಶಿ ಸಂಪರ್ಕಗಳ ಕುರಿತು ತಾವು ಮಾಡಿರುವ ಆರೋಪಗಳಿಗೆ ಸಂಬಂಧಿಸಿ ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಏಕೆ ದಾಖಲಿಸಿಲ್ಲ ಎಂದೂ ರಾಹುಲ್ ಪ್ರಶ್ನಿಸಿದ್ದರು.

ವಿದೇಶಿ ನೆರವಿನಿಂದ ದೇಶವನ್ನು ಅಸ್ಥಿರಗೊಳಿಸಲು ಪ್ರತಿಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಮೋದಿ ಆರೋಪಿಸಿದ ಬೆನ್ನಲ್ಲೇ, ವಿದೇಶಿ ಶಕ್ತಿಗಳ ಸಹಾಯದಿಂದಲೇ ಮೋದಿ ಪ್ರಧಾನಿ ಕಚೇರಿಯಲ್ಲಿದ್ದಾರೆ ಎಂಬ ಆರೋಪವನ್ನೂ ರಾಹುಲ್ ಗಾಂಧಿ ಪುನರುಚ್ಚರಿಸಿದ್ದರು. ಈ ಎಲ್ಲ ವಿಚಾರಗಳ ಕುರಿತು ಬಹಿರಂಗ ಚರ್ಚೆ ನಡೆಯಬೇಕು ಎಂದು ಅವರು ಆಗ್ರಹಿಸಿದ್ದರು.

More articles

Latest article

Most read