ಏಳು ಮಂದಿಯ ಭೀಕರ ಹತ್ಯೆ ಪ್ರಕರಣ : ಎಲ್ಲರ ಶವಗಳೂ ಪತ್ತೆ

ಬೆಂಗಳೂರು, ನ. 9: ಒಂದೇ ಕುಟುಂಬದ ಏಳು ಮಂದಿಯನ್ನು ಹತ್ಯೆಗೈದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಕೊನೆಯ ಇಬ್ಬರ ಮೃತದೇಹಗಳೂ ಪತ್ತೆಯಾಗಿವೆ. ಶಂಕರ್ ಮತ್ತು ನಳಿನಿ ಅವರ ಶವಗಳನ್ನು ಸಕಲೇಶಪುರ ಪೊಲೀಸರು ಶಿರಾಡಿ ಘಾಟ್‌ನಲ್ಲಿ ಪತ್ತೆಹಚ್ಚಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಹತ್ಯೆಯಾದ ಏಳು ಮಂದಿಯ ಮೃತದೇಹಗಳ ಪತ್ತೆ ಕಾರ್ಯ ಪೂರ್ಣಗೊಂಡಿದೆ.

ಈಗಾಗಲೇ ಏಳು ವರ್ಷದ ಬಾಲಕ ಪುನೀತ್‌ನ ಮೃತದೇಹ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದ ತಪ್ಪಲಿನಲ್ಲಿ, ಸುನೀತಾ ಮತ್ತು ರೂಪವತಿ ಅವರ ಶವಗಳು ತಮಿಳುನಾಡಿನ ಸೇಲಂನಲ್ಲಿ ಪತ್ತೆಯಾಗಿದ್ದವು. ಶಿವಕುಮಾರ್ ಮತ್ತು ದಿವ್ಯಾ ದಂಪತಿಯ ಮೃತದೇಹಗಳು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪತ್ತೆಯಾಗಿದ್ದವು.

ಸಿಸಿಟಿವಿ ದೃಶ್ಯಗಳಿಗಾಗಿ ಪೊಲೀಸರ ಶೋಧ

ಕೊಲೆ ಕೃತ್ಯಕ್ಕೆ ಬೇಕಾದ ವಸ್ತುಗಳನ್ನು ಆರೋಪಿ ಶೇಖರ್ ಸುತ್ತಮುತ್ತಲಿನ ಅಂಗಡಿಗಳಿಂದ ಖರೀದಿಸಿದ್ದ ಎನ್ನಲಾಗಿದೆ. ಮೃತದೇಹಗಳನ್ನು ಪ್ಯಾಕ್ ಮಾಡಲು ಬೇಕಾದ ಸಾಮಗ್ರಿಗಳು ಹಾಗೂ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕ ಸೇರಿದಂತೆ ಹಲವು ವಸ್ತುಗಳನ್ನು ಖರೀದಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಸ್ಥಳೀಯವಾಗಿ ಸಿಗದ ಕೆಲವು ವಸ್ತುಗಳನ್ನು ಯಶವಂತಪುರ ಮತ್ತು ಆರ್‌ಎಂಸಿ ಯಾರ್ಡ್‌ನ ಅಂಗಡಿಗಳಿಂದ ಖರೀದಿಸಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸಂಬಂಧಪಟ್ಟ ಅಂಗಡಿಗಳ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು, ಮಾಲೀಕರು ಮತ್ತು ಸಿಬ್ಬಂದಿಯಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಕೊಲೆ ನಡೆದ ಪ್ರದೇಶದಲ್ಲಿ ಕೆಲವು ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಅವುಗಳನ್ನು ಸಂಗ್ರಹಿಸಲು ಪೊಲೀಸರು ಪ್ರಯತ್ನ ಮುಂದುವರಿಸಿದ್ದಾರೆ.

ಇನ್ನೊಂದೆಡೆ, ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪತ್ತೆಯಾಗಿದ್ದ ಶಿವಕುಮಾರ್ ಮತ್ತು ದಿವ್ಯಾ ಅವರ ಮೃತದೇಹಗಳ ಮರಣೋತ್ತರ ಪರೀಕ್ಷೆ ಇಂದು ಮೈಸೂರು ವೈದ್ಯಕೀಯ ಕಾಲೇಜಿನ ಶವಾಗಾರದಲ್ಲಿ ನಡೆಯಲಿದೆ. ಆರೋಪಿ ನೀಡಿದ ಮಾಹಿತಿಯ ಆಧಾರದ ಮೇಲೆ ವಿವಿಧ ಪ್ರದೇಶಗಳಲ್ಲಿ ಶೋಧ ನಡೆಸಿ ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

More articles

Latest article

Most read