ಕೋಲ್ಕತ್ತಾ, ನವೆಂಬರ್ 11: ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ಹೈಜಾಕ್ ಬೆದರಿಕೆಯ ವರದಿಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮುಂಬೈಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನಕ್ಕೆ ಅಪಹರಣದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ತೀವ್ರ ತಪಾಸಣೆ ನಡೆಸಿದರು.
ಮೂಲಗಳ ಪ್ರಕಾರ, ವಿಮಾನದ ಶೌಚಾಲಯದಲ್ಲಿರುವ ಕನ್ನಡಿಯ ಮೇಲೆ ವಿಮಾನ ಅಪಹರಣ ಮಾಡುವುದಾಗಿ ಬೆದರಿಕೆ ಸಂದೇಶವನ್ನು ಬರೆಯಲಾಗಿತ್ತು. ವಿಮಾನ ಟೇಕಾಫ್ಗೆ ಸಿದ್ಧವಾಗುತ್ತಿದ್ದ ಸಂದರ್ಭದಲ್ಲಿ ಈ ಸಂದೇಶ ಸಿಬ್ಬಂದಿಯ ಗಮನಕ್ಕೆ ಬಂದಿದೆ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ವಿಮಾನದ ಪೈಲಟ್ ತಕ್ಷಣವೇ ಏರ್ ಟ್ರಾಫಿಕ್ ಕಂಟ್ರೋಲ್ (ATC) ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ವಿಮಾನವನ್ನು ಪ್ರತ್ಯೇಕ ಐಸೋಲೇಷನ್ ಬೇಗೆ ಸ್ಥಳಾಂತರಿಸಲಾಯಿತು. ಬಳಿಕ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಹಾಗೂ ವಿಮಾನ ನಿಲ್ದಾಣದ ವಿಶೇಷ ಭದ್ರತಾ ಸಿಬ್ಬಂದಿ ವಿಮಾನದಲ್ಲಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದರು.
ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಹೈಜಾಕ್ ಬೆದರಿಕೆ : ತೀವ್ರ ತಪಾಸಣೆ!