ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ – ಮೂವರಿಗೆ ಗಾಯ

ಕುಲ್ಗಾಂ, ನವೆಂಬರ್ 11: ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಕರ್ತವ್ಯದಲ್ಲಿದ್ದ ಸಿಆರ್‌ಪಿಎಫ್ (CRPF) ಸಿಬ್ಬಂದಿ ಮೇಲೆ ಅಪರಿಚಿತ ಬೈಕ್ ಸವಾರರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಾಹ್ನ ಸುಮಾರು 2.15ರ ವೇಳೆಗೆ ಮಿರ್ ಬಜಾರ್ ಸಮೀಪದ ನಾಕಾ ಬಳಿ ಈ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಗಾಯಗೊಂಡ ಮೂವರು ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಅನಂತನಾಗ್ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಿಆರ್‌ಪಿಎಫ್ ತಿಳಿಸಿದೆ.

ಘಟನೆ ನಡೆದ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ದಾಳಿ ನಡೆಸಿ ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗಾಗಿ ಬೃಹತ್ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

More articles

Latest article

Most read