ಸಚಿವ ಸ್ಥಾನಕ್ಕಾಗಿ ಮಹಿಳಾ ಶಾಸಕಿಯರಲ್ಲಿ ಪೈಪೋಟಿ ; ಕಾಂಗ್ರೆಸ್‌ ಪಕ್ಷದೊಳಗೆ ಲಾಬಿ ತೀವ್ರ

ಬೆಂಗಳೂರು, ನ.13 : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಶೀಘ್ರದಲ್ಲೇ ಮೊದಲ ಮಹಿಳಾ ಸಚಿವೆಯೊಬ್ಬರು ಸೇರ್ಪಡೆಯಾಗುವ ಸಾಧ್ಯತೆಗಳು ದಟ್ಟವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದೊಳಗೆ ಸಚಿವ ಸ್ಥಾನಕ್ಕಾಗಿ ಲಾಬಿ ತೀವ್ರಗೊಂಡಿದೆ.

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಐದು ತಿಂಗಳು ಕಳೆದಿದ್ದರೂ ಈವರೆಗೆ ಒಬ್ಬ ಮಹಿಳೆಯೂ ಸ್ಥಾನ ಪಡೆದಿಲ್ಲ. 34 ಸಚಿವರನ್ನು ಹೊಂದಬಹುದಾದ ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ 33 ಸಚಿವರಿದ್ದು, ಮಹಿಳಾ ಕೋಟಾ ಖಾಲಿ ಉಳಿದಿದೆ.

ಮಹಿಳೆಯರನ್ನೇ ಕೇಂದ್ರೀಕರಿಸಿಕೊಂಡು ಗೃಹಲಕ್ಷ್ಮೀ, ಶಕ್ತಿಯಂತಹ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದರೂ ಸಹ ಸಂಪುಟದಲ್ಲಿ ಒಬ್ಬರೇ ಒಬ್ಬ ಮಹಿಳಾ ಸಚಿವೆ ಇಲ್ಲದಿರುವುದು ಸರ್ಕಾರದ ಮೇಲೆ ರಾಜಕೀಯ ಹಾಗೂ ನೈತಿಕ ಒತ್ತಡವನ್ನು ಹೆಚ್ಚಿಸಿದೆ.

ಈ ಹಿನ್ನೆಲೆಯಲ್ಲಿ ಮಹಿಳಾ ಸಚಿವರ ನೇಮಕದ ವಿಚಾರ ಈಗ ಕಾಂಗ್ರೆಸ್‌ನೊಳಗೆ ಪ್ರಮುಖ ಚರ್ಚೆಯ ವಿಷಯವಾಗಿದೆ. ಸಚಿವ ಸ್ಥಾನಕ್ಕೆ ಹಲವು ಮಹಿಳಾ ಶಾಸಕರು ಆಕಾಂಕ್ಷಿಗಳಾಗಿದ್ದು, ತಮ್ಮ ಪರವಾಗಿ ಪಕ್ಷದ ವರಿಷ್ಠರು ಹಾಗೂ ರಾಜ್ಯದ ಪ್ರಮುಖ ನಾಯಕರ ಮೇಲೆ ಒತ್ತಡ ಹೇರುವ ಪ್ರಯತ್ನಗಳು ನಡೆಯುತ್ತಿವೆ ಎನ್ನಲಾಗಿದೆ.

ಮಹಿಳಾ ಸಚಿವೆಯ ನೇಮಕದ ಕುರಿತು ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುಳಿವು ನೀಡಿದ್ದಾರೆ. ಕಳೆದ ವಾರ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿದ್ದ  ಅವರು, ಮುಂದಿನ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಒಬ್ಬ ಮಹಿಳಾ ಸಚಿವೆಯನ್ನು ನೇಮಕ ಮಾಡಲಾಗುವುದು ಎಂದು ಹೇಳಿದ್ದರು.

ಬೆಳಗಾವಿಯಲ್ಲಿ ಡಿ.2ರಿಂದ ವಿಧಾನಮಂಡಲ ಚಳಿಗಾಲದ ಆಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ, ಅದಕ್ಕೂ ಮುನ್ನವೇ ಸಂಪುಟಕ್ಕೆ ಮಹಿಳಾ ಪ್ರತಿನಿಧಿಯೊಬ್ಬರನ್ನು ಸೇರಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ಆರಂಭವಾಗಿದೆ. ಮುಖ್ಯಮಂತ್ರಿಯವರ ಈ ಹೇಳಿಕೆಯು ಕೇವಲ ರಾಜಕೀಯ ಸಂದೇಶವೇ ಅಥವಾ ಸಚಿವ ಸಂಪುಟ ವಿಸ್ತರಣೆಯ ನಿರ್ಧಾರ ಅಂತಿಮ ಹಂತಕ್ಕೆ ತಲುಪಿದೆಯೇ ಎಂಬ ಕುತೂಹಲಕ್ಕೂ ಕಾರಣವಾಗಿದೆ.

ಸಚಿವ ಸ್ಥಾನಕ್ಕಾಗಿ ಹಲವು ಮಹಿಳಾ ಆಕಾಂಕ್ಷಿಗಳು
ಮಹಿಳಾ ಸಚಿವೆಯ ನೇಮಕಕ್ಕೆ ಮುಖ್ಯಮಂತ್ರಿ ಸೂಚನೆ ನೀಡಿರುವ ಬೆನ್ನಲ್ಲೇ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನ ಹಲವು ಮಹಿಳಾ ಶಾಸಕರ ನಡುವೆ ಪೈಪೋಟಿ ಹೆಚ್ಚಾಗಿದೆ. ಪಕ್ಷದಲ್ಲಿ ಹಿರಿಯತೆ, ಪ್ರಾದೇಶಿಕ ಸಮತೋಲನ, ಜಾತಿ ಹಾಗೂ ಸಾಮಾಜಿಕ ಪ್ರಾತಿನಿಧ್ಯ, ಸಂಘಟನಾ ಕೊಡುಗೆ ಮತ್ತು ಚುನಾವಣಾ ಗೆಲುವಿನಂತಹ ಹಲವು ಅಂಶಗಳು ಸಚಿವ ಸ್ಥಾನ ನೀಡುವಾಗ ಪರಿಗಣನೆಗೆ ಬರಬಹುದಾಗಿದೆ.

ಹೀಗಾಗಿ ಒಬ್ಬ ಮಹಿಳಾ ಶಾಸಕರನ್ನು ಆಯ್ಕೆ ಮಾಡುವುದು ಕಾಂಗ್ರೆಸ್ ನಾಯಕತ್ವಕ್ಕೆ ಸುಲಭದ ನಿರ್ಧಾರವಾಗುವುದಿಲ್ಲ. ಒಬ್ಬರಿಗೆ ಸಚಿವ ಸ್ಥಾನ ನೀಡಿದರೆ, ಉಳಿದ ಆಕಾಂಕ್ಷಿಗಳಲ್ಲೂ ಅಸಮಾಧಾನ ಮೂಡುವ ಸಾಧ್ಯತೆ ಇರುವುದರಿಂದ ಪಕ್ಷದೊಳಗಿನ ಸಮತೋಲನ ಕಾಯ್ದುಕೊಳ್ಳುವುದು ವರಿಷ್ಠರಿಗೆ ಸವಾಲಾಗಲಿದೆ.

ಮೂಲಗಳ ಪ್ರಕಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಮರಳಿ ಸಂಪುಟಕ್ಕೆ ತೆಗೆದುಕೊಳ್ಳಲು ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಂ ಅವರನ್ನು ಸಚಿವೆಯನ್ನಾಗಿ ಮಾಡಲು ಒತ್ತಡ ಹೇರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಗುಲ್ಬರ್ಗ ಉತ್ತರ ಶಾಸಕಿ ಖನೀಜ್ ಫಾತಿಮಾ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಅಲ್ಪಸಂಖ್ಯಾತ ಮಹಿಳೆಗೆ ಸಂಪುಟದಲ್ಲಿ ಅವಕಾಶ ಒದಗಿಸಲು ಬಯಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಆದರೆ ಯಾರಿಗೆ ಅವಕಾಶ ನೀಡಬೇಕು ಎಂಬುದೇ ಈಗ ಕಾಂಗ್ರೆಸ್ ನಾಯಕತ್ವದ ಪ್ರಮುಖ ಸವಾಲಾಗಿದೆ. ಮಹಿಳಾ ಸಚಿವೆಯ ನೇಮಕವು ಕಾಂಗ್ರೆಸ್ ಸರ್ಕಾರಕ್ಕೆ ಹಲವು ರೀತಿಯಲ್ಲಿ ರಾಜಕೀಯವಾಗಿ ಮಹತ್ವದ್ದಾಗಿದೆ.

More articles

Latest article

Most read