ಯೋಗದ ಸಾಧನೆಯಲ್ಲಿ ಅಣ್ಣಾವ್ರ ಶಿಸ್ತಿನ ಜೀವನ ನೆನಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು, ನ.13 : ಯೋಗಾಭ್ಯಾಸದ ಮೂಲಕ ಆರೋಗ್ಯಕರ ಜೀವನಶೈಲಿ ರೂಢಿಸಿಕೊಂಡಿದ್ದ ವರನಟ ಡಾ. ರಾಜ್‌ಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದ್ದಾರೆ.

ಜಿಗಣಿ ಸಮೀಪದ ಪ್ರಶಾಂತಿ ಕುಟೀರದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಯೋಗ ಕ್ಷೇತ್ರಕ್ಕೆ ಕರ್ನಾಟಕದ ಕೊಡುಗೆ ಮಹತ್ವದ್ದಾಗಿದೆ. ಡಾ. ರಾಜ್‌ಕುಮಾರ್ ಕೂಡ ಯೋಗಾಭ್ಯಾಸ ಮಾಡುತ್ತಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಿಡುವಿಲ್ಲದ ಚಿತ್ರೀಕರಣದ ನಡುವೆಯೂ ಯೋಗ ಮತ್ತು ಪ್ರಾಣಾಯಾಮಕ್ಕೆ ಸಮಯ ಮೀಸಲಿಡುತ್ತಿದ್ದ ಅಣ್ಣಾವ್ರ ಶಿಸ್ತು ಇಂದಿನ ಯುವಜನತೆಗೆ ಪ್ರೇರಣೆಯಾಗಿದೆ ಎಂದು ಹೇಳಿದರು. ದೈಹಿಕ ಆರೋಗ್ಯದಷ್ಟೇ ಮಾನಸಿಕ ನೆಮ್ಮದಿಗೂ ಯೋಗ ಸಹಕಾರಿಯಾಗಿದೆ ಎಂಬುದನ್ನು ಅವರ ಜೀವನಶೈಲಿ ತೋರಿಸಿಕೊಟ್ಟಿದೆ ಎಂದು ಸ್ಮರಿಸಿದರು.

ಡಾ. ರಾಜ್‌ಕುಮಾರ್ ಅವರು ಕೇವಲ ವ್ಯಾಯಾಮದ ದೃಷ್ಟಿಯಿಂದಷ್ಟೇ ಅಲ್ಲದೆ, ಮಾನಸಿಕ ನೆಮ್ಮದಿಗಾಗಿ ಯೋಗವನ್ನು ಅವಲಂಬಿಸಿದ್ದರು. ಕಠಿಣ ಆಸನಗಳು ಮತ್ತು ಉಸಿರಾಟದ ನಿಯಂತ್ರಣದ ಮೂಲಕ ತಮ್ಮ ದೇಹ ಮತ್ತು ಮನಸ್ಸನ್ನು ಸಮತೋಲನದಲ್ಲಿಟ್ಟುಕೊಳ್ಳುತ್ತಿದ್ದರು. ಚಿತ್ರರಂಗದ ಉತ್ತುಂಗದಲ್ಲಿದ್ದಾಗಲೂ ಅವರು ತಮ್ಮ ಆರೋಗ್ಯದ ಕಡೆಗೆ ವಿಶೇಷ ಕಾಳಜಿ ವಹಿಸಲು ಯೋಗವೇ ಪ್ರಮುಖ ಕಾರಣವಾಗಿತ್ತು ಎಂದು ನೆನೆದರು. 

More articles

Latest article

Most read