ಪ್ರಧಾನಿ ಮೋದಿ ನನ್ನ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ : ರಾಹುಲ್ ಗಾಂಧಿ ಆರೋಪ

ನವದೆಹಲಿ, ನ.13 : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ವಿದೇಶಿ ಶಕ್ತಿಗಳ ನಿಯಂತ್ರಣದಲ್ಲಿರುವವರು ಹಾಗೂ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರ ಬಗ್ಗೆ ತಮ್ಮ ಬಳಿ ಸಾಕ್ಷ್ಯಗಳಿವೆ. ಈ ವಿಚಾರ ಪ್ರಧಾನಿ ಮೋದಿಗೂ ತಿಳಿದಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಎಕ್ಸ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಗೆ ಸವಾಲು ಹಾಕಿದ್ದಾರೆ. ನನ್ನ ಫೋನ್ ಕದ್ದಾಲಿಕೆ ಮಾಡುತ್ತಿರುವುದರಿಂದ ಅದರಲ್ಲಿರುವ ಸಾಕ್ಷ್ಯಗಳ ಬಗ್ಗೆ ಪ್ರಧಾನಿಗೆ ತಿಳಿದಿದೆ. ಮುಖಾಮುಖಿ ಚರ್ಚೆಗೆ ಮೋದಿ ಒಪ್ಪಿಕೊಂಡರೆ ವಿದೇಶಿ ಶಕ್ತಿಗಳ ನಿಯಂತ್ರಣದಲ್ಲಿರುವವರು ಯಾರು, ದೇಶವಿರೋಧಿ ಚಟುವಟಿಕೆಗಳಲ್ಲಿ ಯಾರು ತೊಡಗಿದ್ದಾರೆ ಎಂಬುದು ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ.

ಯಾವುದೇ ಸಮಯದಲ್ಲಿ, ಯಾವುದೇ ಸ್ಥಳದಲ್ಲಿ ಚರ್ಚೆಗೆ ಸಿದ್ಧನಿದ್ದೇನೆ. ದೇಶವಿರೋಧಿ ಯಾರು ಮತ್ತು ವಿದೇಶಿ ಶಕ್ತಿಗಳ ಪ್ರಭಾವದಲ್ಲಿರುವವರು ಯಾರು ಎಂಬುದರ ಕುರಿತು ಪ್ರಧಾನಿ ನನ್ನೊಂದಿಗೆ ಚರ್ಚಿಸಲಿ ಎಂದು ಸವಾಲು ಪುನರುಚ್ಚರಿಸಿದ್ದಾರೆ.

ಇದಕ್ಕೆ ಗುರುವಾರ ಪ್ರತಿಕ್ರಿಯಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಹುಲ್ ಗಾಂಧಿ ತಮ್ಮ ವಿಚಾರಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲಿ. ಸಂಸತ್ತೇ ಚರ್ಚೆಗೆ ಸೂಕ್ತ ವೇದಿಕೆ ಎಂದು ಹೇಳಿದ್ದರು. ಕಾಂಗ್ರೆಸ್ ಔಪಚಾರಿಕ ಮನವಿ ಸಲ್ಲಿಸಿದರೆ ವಿಶೇಷ ಸಂಸತ್ ಅಧಿವೇಶನ ಕರೆಯಲು ಕೇಂದ್ರ ಸಿದ್ಧವಿದೆ ಎಂದೂ ತಿಳಿಸಿದ್ದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ರಾಜಕೀಯ ಸಂಘರ್ಷ ನಡೆಯುತ್ತಿರುವ ನಡುವೆಯೇ ರಾಹುಲ್ ಗಾಂಧಿ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

More articles

Latest article

Most read