ಥಾಯ್ಲೆಂಡ್‌ನ ಫುಕೆಟ್‌ನಲ್ಲಿ ಭೀಕರ ಅಗ್ನಿ ಅವಘಡ: 11 ಮಂದಿ ಸಾವು, 16 ಜನರಿಗೆ ಗಾಯ

ಬ್ಯಾಂಕಾಕ್: ಥಾಯ್ಲೆಂಡ್‌ನ ಪ್ರಸಿದ್ಧ ಪ್ರವಾಸಿ ತಾಣ ಫುಕೆಟ್ ದ್ವೀಪದಲ್ಲಿ ಸೋಮವಾರ ಮುಂಜಾನೆ ನಾಲ್ಕು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ಮತ್ತ 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಫುಕೆಟ್‌ನ ಪಟಾಂಗ್ ಪ್ರದೇಶದಲ್ಲಿರುವ ರೆಸ್ಟೋರೆಂಟ್ ಹಾಗೂ ಬಾಡಿಗೆ ವಸತಿ ಸೌಲಭ್ಯಗಳನ್ನು ಹೊಂದಿದ್ದ ಕಟ್ಟಡದಲ್ಲಿ ಸೋಮವಾರ ಮುಂಜಾನೆ ಸುಮಾರು 3.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಕಟ್ಟಡದಾದ್ಯಂತ ವ್ಯಾಪಿಸಿದ್ದು, ದಟ್ಟ ಹೊಗೆ ಆವರಿಸಿತ್ತು ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸತತ ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬಳಿಕ ಕಟ್ಟಡದಲ್ಲಿ ಪರಿಶೀಲನೆ ನಡೆಸಿದಾಗ ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ಮೂಲದವರು ಸೇರಿದಂತೆ 11 ಮಂದಿ ಮೃತಪಟ್ಟಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಗ್ನಿ ಅವಘಡಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ತನಿಖೆ ಮುಂದುವರಿದಿದೆ. ಘಟನೆಯಲ್ಲಿ ಗಾಯಗೊಂಡ ಹಾಗೂ ಹೊಗೆ ಸೇವನೆಯಿಂದ ಅಸ್ವಸ್ಥರಾದ 16 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕಟ್ಟಡದ ಗಾಜು ಒಡೆದ ಪರಿಣಾಮ ಕೆಲವರಿಗೆ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಥಾಯ್ಲೆಂಡ್‌ನಲ್ಲಿ ಅಗ್ನಿ ಸುರಕ್ಷತೆ ಕುರಿತು ಮತ್ತೆ ಆತಂಕ

ಥಾಯ್ಲೆಂಡ್‌ನಲ್ಲಿ ಅಗ್ನಿ ಸುರಕ್ಷತಾ ನಿಯಮಗಳ ಅನುಷ್ಠಾನ, ವಿಶೇಷವಾಗಿ ಬಾರ್‌ಗಳು ಮತ್ತು ನೈಟ್‌ಕ್ಲಬ್‌ಗಳ ಸುರಕ್ಷತಾ ವ್ಯವಸ್ಥೆಗಳ ಕುರಿತು ಈ ಹಿಂದಿನಿಂದಲೂ ಕಳವಳ ವ್ಯಕ್ತವಾಗುತ್ತಲೇ ಇದೆ.

ಕಳೆದ ಜುಲೈನಲ್ಲಿ ಬ್ಯಾಂಕಾಕ್‌ನ ಜನನಿಬಿಡ ಬಾರ್‌ವೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಭಾರೀ ಅನಾಹುತ ಸಂಭವಿಸಿತ್ತು. ಈ ಘಟನೆಯಲ್ಲಿ ಸುಮಾರು 40 ಮಂದಿ ಮೃತಪಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದರು.

ಇದಕ್ಕೂ ಮೊದಲು 2009ರ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ರಾಜಧಾನಿ ಬ್ಯಾಂಕಾಕ್‌ನ ಸ್ಯಾಂಟಿಕಾ ಕ್ಲಬ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 67 ಮಂದಿ ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಇತ್ತೀಚಿನ ಫುಕೆಟ್ ಅಗ್ನಿ ಅವಘಡವು ಥಾಯ್ಲೆಂಡ್‌ನ ಕಟ್ಟಡಗಳ ಅಗ್ನಿ ಸುರಕ್ಷತಾ ವ್ಯವಸ್ಥೆ ಹಾಗೂ ತುರ್ತು ನಿರ್ವಹಣಾ ಕ್ರಮಗಳ ಕುರಿತು ಮತ್ತೊಮ್ಮೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

More articles

Latest article

Most read