ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಈಶ್ವರ ಖಂಡ್ರೆ

ಬೆಂಗಳೂರು, ನ.19 : ರಾಜ್ಯ ಸರ್ಕಾರ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಬದ್ಧವಾಗಿದ್ದು, ಕ್ಷೇತ್ರಗಳ ಮೀಸಲು ಅಂತಿಮ ಅಧಿಸೂಚನೆ ಬಹುತೇಕ ನಾಳೆ ಪ್ರಕಟವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದ 30 ಜಿಲ್ಲೆಗಳ 1101 ಜಿಲ್ಲಾ ಪಂಚಾಯತಿ ಕ್ಷೇತ್ರಗಳಿಗೆ ಹಾಗೂ 234 ತಾಲೂಕು ಪಂಚಾಯತಿಗಳ 3580 ಸದಸ್ಯ ಸ್ಥಾನಕ್ಕೆ ಸಂಬಂಧಿಸಿದಂತೆ ಮೀಸಲು ನಿಗದಿ ಮಾಡಿ ಅಕ್ಟೋಬರ್ 9ರಂದು ಕರಡು ಅಧಿಸೂಚನೆ ಹೊರಡಿಸಲಾಗಿತ್ತು ಎಂದು ತಿಳಿಸಿದರು.

ಕರಡು ಅಧಿಸೂಚನೆಯ ಬಳಿಕ ಅಕ್ಟೋಬರ್ 19ರವರೆಗೆ ನಿಯಮಾನುಸಾರ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. 2900ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು. ಗ್ರಾಮ ಪಂಚಾಯತಿ ಇಲಾಖೆಯ ಅಧಿಕಾರಿಗಳು ನಿಯಮಾನುಸಾರ ಈ ಎಲ್ಲ ಆಕ್ಷೇಪಣೆಗಳನ್ನೂ ಪರಿಶೀಲಿಸಿ ಕ್ಷೇತ್ರಗಳ ಅಂತಿಮ ಅಧಿಸೂಚನೆ ಸಿದ್ಧಪಡಿಸಿದ್ದು, ನಾಳೆ ಅಧಿಸೂಚನೆ ಆಗಲಿದೆ ಎಂದು ವಿವರಿಸಿದರು.

More articles

Latest article

Most read