ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂ ಕೋರ್ಟ್ ಅಸ್ತು, ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾ

ನವದೆಹಲಿ, ನ.20: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸಲು ಅನುಮತಿ ನೀಡಿದ್ದ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಮೂಲಕ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅನುಮತಿ ನೀಡಿದ್ದ ಹೈಕೋರ್ಟ್ ತೀರ್ಪು ಮುಂದುವರಿದಿದೆ.

ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮಾ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ಪೀಠ ಶುಕ್ರವಾರ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ಈ ಹಿಂದೆ ನಿಯಂತ್ರಣ ವ್ಯವಸ್ಥೆ ರೂಪಿಸುವವರೆಗೆ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸುವಂತೆ ಆದೇಶಿಸಲಾಗಿತ್ತು. ಆದರೆ, 2026ರ ಜನವರಿ 23ರಂದು ಹೈಕೋರ್ಟ್‌ನ ವಿಭಾಗೀಯ ಪೀಠ ಈ ಆದೇಶವನ್ನು ರದ್ದುಗೊಳಿಸಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅನುಮತಿ ನೀಡಿತ್ತು.

ಓಲಾ, ಉಬರ್, ರ‍್ಯಾಪಿಡೊ, ಬೈಕ್ ಮಾಲೀಕರು ಹಾಗೂ ಬೈಕ್ ಟ್ಯಾಕ್ಸಿ ವೆಲ್ಫೇರ್ ಅಸೋಸಿಯೇಷನ್ ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್, ರಾಜ್ಯದ ನಿಯಮಾವಳಿಗಳನ್ನು ಪಾಲಿಸುವ ಷರತ್ತಿನೊಂದಿಗೆ ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಿ ಕಾಂಟ್ರಾಕ್ಟ್ ಕ್ಯಾರೇಜ್‌ಗಳಾಗಿ ಬಳಸಬಹುದು ಎಂದು ಸ್ಪಷ್ಟಪಡಿಸಿತ್ತು. ಸುಪ್ರೀಂ ಕೋರ್ಟ್ ಇದೀಗ ರಾಜ್ಯ ಸರ್ಕಾರದ ಮೇಲ್ಮನವಿಯನ್ನು ವಜಾಗೊಳಿಸಿದೆ.

More articles

Latest article

Most read