ಬೆಂಗಳೂರು, ನ.21 : ‘ಬಸವ ಮಂಟಪ’ ಪುಸ್ತಕ ವಿವಾದಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್ ಅವರನ್ನು ಕೇರಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.
ದುಬೈಗೆ ತೆರಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ರವಿ ಹಂಜ್ ಅವರನ್ನು ಪೊಲೀಸರು ಹೊರಡಿಸಿದ್ದ ಲುಕ್‌ಔಟ್ ನೋಟಿಸ್ ಆಧರಿಸಿ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಬಳಿಕ ಈ ಕುರಿತು ಬೆಳಗಾವಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
‘ಬಸವ ಮಂಟಪ’ ಪುಸ್ತಕದಲ್ಲಿನ ವಿಚಾರಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿ ಜಾಗತಿಕ ಲಿಂಗಾಯತ ಮಹಾಸಭಾ ದೂರು ನೀಡಿತ್ತು. ಈ ಸಂಬಂಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲೂ ರವಿ ಹಂಜ್ ವಿರುದ್ಧ ಪ್ರಕರಣ ದಾಖಲಾಗಿದೆ.
ವಶಕ್ಕೆ ಪಡೆದಿರುವ ಲೇಖಕರನ್ನು ಬೆಳಗಾವಿ ಪೊಲೀಸರ ವಶಕ್ಕೆ ಒಪ್ಪಿಸುವ ಸಾಧ್ಯತೆಯಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುವ ನಿರೀಕ್ಷೆಯಿದೆ.

