ಅಮೆರಿಕದಲ್ಲಿ ಎರಡು ಪ್ರತ್ಯೇಕ ಗುಂಡಿನ ದಾಳಿ: 12 ಮಂದಿ ಸಾವು, ಗಾಯ

ಓಹಿಯೊದಲ್ಲಿ ಬೇಬಿ ಶವರ್ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ , ಕ್ಯಾಲಿಫೋರ್ನಿಯಾ ಸಂಗೀತ ಕಾರ್ಯಕ್ರಮದಲ್ಲೂ 9 ಮಂದಿಗೆ ಗುಂಡೇಟು

ಅಮೆರಿಕ : ಅಮೆರಿಕದ ಎರಡು ಪ್ರತ್ಯೇಕ ಪ್ರದೇಶಗಳಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಓಹಿಯೊ ರಾಜ್ಯದ ಪಾರ್ಮಾದಲ್ಲಿ ಶನಿವಾರ ಸಂಜೆ ಬೇಬಿ ಶವರ್ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ 17 ವರ್ಷದ ಲೀಸಿಯಾ ಇಂಗ್ಲೆಂಡ್ ಹಾಗೂ 45 ವರ್ಷದ ಜೇಸನ್ ಟೌನ್‌ಸೆಂಡ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆಗೆ ಕಾಲಿಗೆ ಗುಂಡೇಟು ಬಿದ್ದು ಗಾಯವಾಗಿದೆ.

ದಾಳಿಗೆ ಸಂಬಂಧಿಸಿದಂತೆ 29 ವರ್ಷದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತನ ವಿರುದ್ಧ ತಕ್ಷಣಕ್ಕೆ ಯಾವುದೇ ಆರೋಪ ದಾಖಲಿಸಿಲ್ಲ. ಆತ ದಾಳಿ ಆರಂಭಿಸಿದನೇ ಅಥವಾ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದನೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಮೃತಪಟ್ಟ 19 ವರ್ಷದ ಯುವಕನೂ ಶಂಕಿತ ಗುಂಡು ಹಾರಿಸಿದವರಲ್ಲಿ ಒಬ್ಬನಾಗಿದ್ದಾನೆ.

ಮೃತ ಜೇಸನ್ ಟೌನ್‌ಸೆಂಡ್, ಬೇಬಿ ಶವರ್ ಆಯೋಜಿಸಲಾಗಿದ್ದ ಗರ್ಭಿಣಿ ಮಹಿಳೆಯ ತಂದೆಯಾಗಿದ್ದರು. ಮೃತಪಟ್ಟ 19 ವರ್ಷದ ಯುವಕ ಹುಟ್ಟಲಿರುವ ಮಗುವಿನ ತಂದೆಯಾಗಿದ್ದು, ಕಾರ್ಯಕ್ರಮಕ್ಕೆ ಆಹ್ವಾನವಿರಲಿಲ್ಲ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ವಶಕ್ಕೆ ಪಡೆದ ವ್ಯಕ್ತಿ ಗರ್ಭಿಣಿ ಮಹಿಳೆಯ ಸಂಬಂಧಿಯಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಎರಡು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಹಾಗೂ ಸಾಕ್ಷಿಗಳ ಹೇಳಿಕೆ ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದೇ ವೇಳೆ, ಮಧ್ಯ ಕ್ಯಾಲಿಫೋರ್ನಿಯಾದ ಸಂಗೀತ ಕಾರ್ಯಕ್ರಮವೊಂದರಲ್ಲೂ ಗುಂಡಿನ ದಾಳಿ ನಡೆದಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಆ ಘಟನೆಯ ಹೆಚ್ಚಿನ ವಿವರಗಳನ್ನು ಅಧಿಕಾರಿಗಳು ಬಿಡುಗಡೆ ಮಾಡಿಲ್ಲ.

More articles

Latest article

Most read